ಮೈಸೂರು: ದಸರಾ ತಯಾರಿ ದಿನದಿಂದಕ್ಕೆ ರಂಗು ಪಡೆದುಕೊಳ್ಳುತ್ತಿದೆ. ಇದರ ಬೆನ್ನಲ್ಲೇ ಪ್ರಗತಿಪರ ಒಕ್ಕೂಟಗಳಿಂದ ಮಹಿಷ ದಸರಾವನ್ನು ಇಂದು ಅದ್ಧೂರಿಯಾಗಿ ಆಚರಿಸಿ, ಮಹಿಷ ಒಬ್ಬ ಜನಪರ ನಾಯಕ. ಆದರೆ ಇತಿಹಾಸಲ್ಲಿ ಆತನ ಬಗ್ಗೆ ತಪ್ಪಾಗಿ ಬಿಂಬಿಸಲಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.
ಮೈಸೂರಿನ ಪುರಭವನದಿಂದ ಆಕರ್ಷಕ ರಥದಲ್ಲಿ ಮಹಿಷಾಸುರ ಭಾವಚಿತ್ರ ಮೆರವಣಿಗೆ ಮಾಡಿದ ಪ್ರಗತಿಪರರು, ವಿವಿಧ ಕಲಾತಂಡಗಳೊಂದಿಗೆ ನಗರದ ರಸ್ತೆಗಳಲ್ಲಿ ಹೆಜ್ಜೆ ಹಾಕಿದರು. ಮೆರವಣಿಗೆಯಲ್ಲಿ ಮಾಜಿ ಸಚಿವ ಸತೀಶ್ ಜಾರಕಿಹೋಳಿ ಸೇರಿದಂತೆ ಸಾಹಿತಿಗಳಾದ ಪ್ರೊ.ಮಹೇಶ್‍ಚಂದ್ರ ಗುರು, ಪ್ರೊ.ಕೆ.ಎಸ್ ಭಗವಾನ್, ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಸೇರಿದಂತೆ ಹಲವು ಗಣ್ಯರು ಭಾಗಿಯಾದ್ದರು.
Advertisement
Advertisement
ಪುರಭವನದಿಂದ ಆರಂಭವಾದ ಮೆರವಣಿಗೆ ನಗರದ ಪ್ರಮುಖ ರಸ್ತೆಯ ಮೂಲಕ ಸಾಗಿ ಚಾಮುಂಡಿ ಬೆಟ್ಟ ತಲುಪಿ, ಮಹಿಷಾಸುರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು.
Advertisement
ಮೆರವಣಿಗೆ ಚಾಮುಂಡಿ ಬೆಟ್ಟ ತಲುಪಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, ಮಹಿಷ ಜನಪರವಾಗಿದ್ದ, ಆದರೆ ಇತಿಹಾಸದಲ್ಲಿ ಅವರ ಬಗ್ಗೆ ತಪ್ಪು ಅಭಿಪ್ರಾಯ ಮೂಡಿಸಲಾಗಿದೆ. ಕಳೆದ 7 ವರ್ಷಗಳಿಂದ ಮಹಿಷ ದಸರಾವನ್ನು ಆಚರಿಸಲಾಗುತ್ತಿದೆ. ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಹಾಗೂ ಅನೇಕ ಚಿಂತಕರ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರ ಆಯೋಜನೆ ಮಾಡಲಾಗಿದೆ. ಅವರ ವಿಚಾರಗಳನ್ನು ನಾನು ಪ್ರೋತ್ಸಾಹಿಸುತ್ತಾ ಬಂದಿರುವೆ ಎಂದು ಹೇಳಿದರು.
Advertisement
ಪ್ರೊ.ಕೆ.ಎಸ್.ಭಗವಾನ್ ಮಾತನಾಡಿ, ವಲಸೆ ಸಂಸ್ಕೃತಿಯವರು ಉದ್ದೇಶಪೂರ್ವಕವಾಗಿ ನಮ್ಮ ಸಂಸ್ಕೃತಿಯ ಮೂಲ ಪ್ರತಿಪಾದಕ ಮಹಿಷನನ್ನು ರಾಕ್ಷಸ ಅಂತಾ ಮಾಡಿ, ಇವರೇ ರಾಕ್ಷಸರಾದರು. ಮಹಿಷ ಕೆಟ್ಟ ಮನುಷ್ಯನಾಗಿದ್ದರೆ ಅವನ ಹೆಸರನ್ನು ಈ ಪ್ರದೇಶಕ್ಕೆ ಇಡುತ್ತಿರಲಿಲ್ಲ. ಕೆಟ್ಟ ವ್ಯಕ್ತಿಯ ಹೆಸರನ್ನು ಊರಿಗೆ, ಪ್ರದೇಶಕ್ಕೆ ಇಡುವುದನ್ನು ಎಲ್ಲಿಯೂ ಕೇಳಿಲ್ಲ. ಮಹಿಷ ರಾಜನಾಗಿದ್ದವನು, ಆದರೆ ಆತನ ಬಗ್ಗೆ ಇತಿಹಾಸದಲ್ಲಿ ತಪ್ಪಾಗಿ ಬಿಂಬಿಸಲಾಗಿದೆ ಎಂದು ತಿಳಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
https://youtu.be/rCdHN3PwRNQ