ಲಕ್ನೋ: ಮನೆಕೆಲಸದಾಕೆಯೊಬ್ಬಳು ತನ್ನ ಮೂತ್ರ (Urine) ದಿಂದ ಮನೆ ಶುಚಿಗೊಳಿಸಿದ ಪ್ರಸಂಗವೊಂದು ಉತ್ತರಪ್ರದೇಶದ ಗ್ರೇಟರ್ ನೊಯ್ಡಾದ ಅಜ್‍ನಾರ ಹೌಸಿಂಗ್ ಸೊಸೈಟಿಯಲ್ಲಿ ನಡೆದಿದೆ.
ಮಹಿಳೆ ಮೂತ್ರದಿಂದ ನೆಲ ಒಡೆಸುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣ (Viral Video) ಗಳಲ್ಲಿ ವೈರಲ್ ಆಗಿದೆ. ಪ್ರಕರಣ ಸಂಬಂಧ ಮನೆಯ ಮಾಲೀಕರು ನೀಡಿದ ದೂರಿನ ಮೇರೆಗೆ ಪೊಲೀಸರು ಕೆಲಸದಾಕೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.
ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಸಬೀನಾ, ಮೊದಲು ಮಾಲೀಕರ ಆರೋಪಗಳನ್ನು ನಿರಾಕರಿಸಿದ್ದು ಬಳಿಕ ತಪ್ಪೊಪ್ಪಿಕೊಂಡಿದ್ದಾಳೆ. ಆದರೆ ಯಾಕೆ ಈ ರೀತಿ ಮಾಡಿರುವುದು ಎಂಬುದರ ಬಗ್ಗೆ ಬಾಯ್ಬಿಟ್ಟಿಲ್ಲ ಎಂದು ಪೊಲೀಸರು ಹೇಳಿದ್ದಾರೆ.
ವೀಡಿಯೋದಲ್ಲೇನಿದೆ..?: ಮನೆ ಕೆಲಸದಾಕೆ ಸಬೀನಾ ಕಟುನ್ ನೆಲ ಒರೆಸುವ ವೇಳೆ ಬಕೆಟ್‍ನಲ್ಲಿದ್ದ ನೀರಿಗೆ ಮೂತ್ರ ವಿಸರ್ಜನೆ ಮಾಡುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ಇದನ್ನೂ ಓದಿ: ಕಂಡ ಕಂಡಲ್ಲಿ ಉಗೀಬೇಡಿ – ಎಂಜಲು ರಸ ಮಾರಿಯೇ ತಿಂಗಳಿಗೆ 40 ಲಕ್ಷ ಸಂಪಾದಿಸ್ತಾಳೆ ಈ ಮಹಿಳೆ