ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettar) ಹತ್ಯೆಯ ಪ್ರಮುಖ ಆರೋಪಿ ಮುಸ್ತಫಾ ಪೈಚಾರ್ ಬಂಧನಕ್ಕೆ ಪತ್ನಿ ನೂತನ ಸಂತಸ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮುಸ್ತಫಾ ಪೈಚಾರ್ (Musthafa Paichar) ಈ ಪ್ರಕರಣದ ಪ್ರಮುಖ ಆರೋಪಿ. ಅವನು ಸಿಕ್ಕಿದ್ದಾನೆ ಅಂತ ನಮಗೆ ತುಂಬಾ ಖುಷಿಯಾಗಿದೆ. ಈ ಪ್ರಕರಣದ ಎಲ್ಲ ಆರೋಪಿಗಳಿಗೂ ಮರಣ ದಂಡನೆಯಾಗಬೇಕು ಎಂದು ಆಗ್ರಹ ಮಾಡಿದರು.
Advertisement
Advertisement
ಈ ಪ್ರಕರಣದಲ್ಲಿ ಸುಮಾರು 20 ಮಂದಿ ಭಾಗಿಯಾಗಿದ್ದಾರೆ. ಮುಂದೆ ಸಮಾಜದಲ್ಲಿ ಇಂತಹ ಪ್ರಕರಣ ಮರುಕಳಿಸಬಾರದು. ಇಡೀ ದೇಶದಲ್ಲೇ ಈ ಪ್ರಕರಣ ಅಂತಿಮ ಪ್ರಕರಣ ಆಗಬೇಕು. ನಮ್ಮ ಕುಟುಂಬದವರಿಗೆ ತುಂಬಾ ಸಂತಸದ ಸುದ್ದಿ. ನಮ್ಮ ಕುಟುಂಬ ಹಾಗೂ ಸಮಾಜದವರ ಪರವಾಗಿ ಎನ್ಐಎ ಅಧಿಕಾರಿಗಳಿಗೆ ಧನ್ಯವಾದ ಹೇಳುತ್ತೇನೆ ಎಂದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ – 2 ವರ್ಷಗಳ ಬಳಿಕ ಪ್ರಮುಖ ಆರೋಪಿ ಬಂಧನ
Advertisement
ಪ್ರಕರಣ ನಡೆದು ಎರಡು ವರ್ಷವಾದರೂ ಆರೋಪಿಗಳನ್ನ ಬಂಧಿಸಲು ರಾಷ್ಟ್ರೀಯ ತನಿಖಾ ದಳ (NIA) ಅಧಿಕಾರಿಗಳು ತುಂಬಾ ಪ್ರಯತ್ನ ಪಡುತ್ತಿದ್ದಾರೆ. ಎನ್ ಐಎ ಸಂಸ್ಥೆಯ ಮೇಲೆ ನಂಬಿಕೆ ಇದೆ. ಎಲ್ಲಾ ಆರೋಪಿಗಳ ಬಂಧನವಾಗುತ್ತೆ ಅನ್ನೋ ವಿಶ್ವಾಸವಿದೆ. ಈ ಪ್ರಕರಣದ ಆರೋಪಿಗಳಿಗೆ ನೀಡುವ ಶಿಕ್ಷೆ ಒಂದು ಪಾಠವಾಗಬೇಕು ಎಂದು ಆಕ್ರೋಶ ಹೊರಹಾಕಿದರು. ಇದೆ ವೇಳೆ ಎಸ್‌ಡಿಪಿಐ ಹಾಗೂ ಪಿಎಫ್‌ಐ ಕಾರ್ಯಕರ್ತರು ಮುಂದೆ ಯಾವತ್ತೂ ಇಂತಹ ಪ್ರಕರಣಕ್ಕೆ ಕೈ ಹಾಕಬಾರದು ಎಂದು ಪ್ರವೀಣ್ ನೆಟ್ಟಾರ್ ಪತ್ನಿ ನೂತನ ಕಿಡಿಕಾರಿದರು.
Advertisement
ಮುಸ್ತಫಾ ಪೈಚಾರ್ ಅರೆಸ್ಟ್: ಪ್ರಕರಣ ನಡೆದು ಬರೋಬ್ಬರಿ ಎರಡು ವರ್ಷಗಳ ಬಳಿಕ ಹತ್ಯೆಯ ಪ್ರಮುಖ ಆರೋಪಿಯನ್ನು ಎನ್‌ಐಎ ಅಧಿಕಾರಿಗಳು ಇಂದು ಬೆಳಗ್ಗೆ ಸಕಲೇಶಪುರದಲ್ಲಿ ಬಂಧಿಸಿದ್ದಾರೆ.
ಪ್ರವೀಣ್ ಹತ್ಯೆ: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು 2022 ರ ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.