ಹುಟ್ಟುಹಬ್ಬದ ಸಂಭ್ರಮದಲ್ಲಿ ‘ಮೆಜೆಸ್ಟಿಕ್ 2’ ನಾಯಕಿ ಸಂಹಿತಾ ವಿನ್ಯಾ

Public TV
1 Min Read
samhita vinya 1

ನ್ನಡ ಚಿತ್ರರಂಗದ ಪ್ರತಿಭಾವಂತ ನಟಿ ಕಮ್‌ ಮಾಡೆಲ್ ಸಂಹಿತಾ ವಿನ್ಯಾ (Samhita Vinya) ‘ಮೆಜೆಸ್ಟಿಕ್‌ 2’ (Majestic 2) ಸಿನಿಮಾ ರಿಲೀಸ್‌ಗೆ ಎದುರು ನೋಡ್ತಿದ್ದಾರೆ. ಸಿನಿಮಾ ಕೆಲಸದ ನಡುವೆ ತನ್ನ ಹುಟ್ಟುಹಬ್ಬವನ್ನು (Birthday) ಆಚರಿಸಿದ್ದಾರೆ. ಈ ಸಂದರ್ಭದಲ್ಲಿ ಕನ್ನಡ ಚಿತ್ರರಂಗದ ಅನೇಕ ಗಣ್ಯರು ನಟಿಗೆ ಶುಭಹಾರೈಸಿದ್ದಾರೆ. ಇದನ್ನೂ ಓದಿ:ದಕ್ಷಿಣ ಭಾರತದಲ್ಲಿ ನನ್ನ ಹೆಸರಲ್ಲೊಂದು ದೇವಸ್ಥಾನ ಆಗಬೇಕು ಎಂದ ಊರ್ವಶಿ – ಟ್ರೋಲ್ ಆದ ನಟಿ

samvita vinya

ʻಹಾಲು ತುಪ್ಪʼ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಸಂಹಿತಾ ನಾಯಕಿ ಪ್ರಧಾನ ‘ಸೀತಮ್ಮ ಬಂದ್ಲು ಸಿರಿಮಲ್ಲಿಗೆ ತೊಟ್ಟು’ ಚಿತ್ರದಲ್ಲಿ ಅತ್ಯುತ್ತಮ ಅಭಿನಯ ನೀಡಿ ಪ್ರೇಕ್ಷಕರ ಹಾಗೂ ವಿಮರ್ಶಕರ ಪ್ರಶಂಸೆ ಗಳಿಸಿದ್ದರು. ಅಮೃತ ಘಳಿಗೆ, ವಿಷ್ಣು ಸರ್ಕಲ್, ನಸಾಬ್, ಮಿಕ್ಸಿಂಗ್ ಪ್ರೀತಿ, ಸ್ವಾಭಿಮಾನಿ ಚಿತ್ರದಲ್ಲಿ ನಟಿಸಿದ್ದಾರೆ. ತೆಲುಗು, ತಮಿಳು ಸೇರಿದಂತೆ 15ಕ್ಕೂ ಹೆಚ್ಚು ಚಿತ್ರಗಳಲ್ಲಿ ವಿಭಿನ್ನ ಪಾತ್ರಗಳನ್ನು ನಿರ್ವಹಿಸಿರುವ ಸಂಹಿತಾ ವಿನ್ಯಾಗೆ ಬಾಲಿವುಡ್‌ನಿಂದಲೂ ಆಫರ್ಸ್ ಬಂದಿದೆ. ಇದನ್ನೂ ಓದಿ:‘ಎಡಗೈಯೇ ಅಪಘಾತಕ್ಕೆ ಕಾರಣ’ ಚಿತ್ರಕ್ಕಾಗಿ ಒಂದಾದ ‘ಬ್ಲಿಂಕ್’ ಮತ್ತು ‘ಶಾಖಾಹಾರಿ’ ನಿರ್ಮಾಪಕರು

samhita vinya

75ಕ್ಕೂ ಹೆಚ್ಚು ರಾಷ್ಟ್ರೀಯ, ಅಂತಾರಾಷ್ಟ್ರೀಯ ಫ್ಯಾಷನ್ ಶೋಗಳಲ್ಲಿ ಸಂಹಿತಾ ವಿನ್ಯಾ ಭಾಗವಹಿಸಿದ್ದಾರೆ. ನಟಿಗೆ ಫ್ಯಾಷನ್ ಡಿಸೈನರ್ ಆಗಿ ಫಾರೆವರ್ ನವೀನ್ ಕುಮಾರ್ ಅವರು ಕಾರ್ಯನಿರ್ವಹಿಸಿದ್ದಾರೆ. ಮಾಡೆಲಿಂಗ್ ಜಗತ್ತಿನಲ್ಲೂ ತನ್ನದೇ ಆದ ಛಾಪನ್ನು ಮೂಡಿಸಿರುವ ಅಚ್ಚ ಕನ್ನಡದ ಪ್ರತಿಭೆ ಸಂಹಿತಾಗೆ ಮತ್ತಷ್ಟು ಅವಕಾಶಗಳು ಸಿಗುವಂತಾಗಲಿ ಎಂಬುದೇ ಅಭಿಮಾನಿಗಳ ಆಶಯ.

Share This Article