Connect with us

Crime

ಆಸ್ಪತ್ರೆಯಲ್ಲಿ ಅಗ್ನಿ ಅವಘಡ- 10 ನವಜಾತ ಶಿಶುಗಳ ದುರಂತ ಸಾವು

Published

on

ಮುಂಬೈ: ಆಸ್ಪತ್ರೆಯಲ್ಲಿ ಅಗ್ನಿ ಅವಘಡ ಸಂಭವಿಸಿದ ಪರಿಣಾಮ ಸುಮಾರು 10 ನವಜಾತ ಶಿಶುಗಳು ಮೃತಪಟ್ಟ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

ಈ ದುರಂತ ಬಾಂದ್ರಾದ ಜಿಲ್ಲಾ ಜನರಲ್ ಆಸ್ಪತ್ರೆಯಲ್ಲಿ ನಸುಕಿನ ಜಾವ ಸುಮಾರು 2 ಗಂಟೆಗೆ ನಡೆದಿದೆ. ಮೃತಪಟ್ಟ 10 ಶಿಶುಗಳು ಕೂಡ ಎಸ್‍ಎನ್‍ಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದವು.

ಘಟನೆಯಿಂದ 7 ಶಿಶುಗಳನ್ನು ರಕ್ಷಿಸಲಾಗಿದೆ ಎಂದು ಮಹಾರಾಷ್ಟ್ರ ಬಾಂದ್ರದ ಸಿವಿಲ್ ಸರ್ಜನ್ ಪ್ರಮೋದ್ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಬೆಂಕಿ ಹೇಗೆ ಹೊತ್ತಿಕೊಂಡಿತ್ತು ಎಂಬುದರ ಬಗ್ಗೆ ಇನ್ನಷ್ಟೇ ತಿಳಿದುಬರಬೇಕಿದೆ.

Click to comment

Leave a Reply

Your email address will not be published. Required fields are marked *

www.publictv.in