– ಘಟನಾ ಸ್ಥಳಕ್ಕೆ 6 ಅಗ್ನಿಶಾಮಕಗಳು ದೌಡು
ಭೋಪಾಲ್: ಮಧ್ಯಪ್ರದೇಶದ (Madhya Pradesh) ಉಜ್ಜಯಿನಿಯಲ್ಲಿ (Ujjain) ಬುಧವಾರ ಭಾರೀ ಅಗ್ನಿ ಅವಘಡ ಸಂಭವಿಸಿದೆ. ಕಟ್ಟಡವೊಂದರಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ ಮಹಿಳೆಯರು ಸೇರಿದಂತೆ ಕನಿಷ್ಠ 10ರಿಂದ 15 ಮಂದಿ ಒಳಗೆ ಸಿಲುಕಿಕೊಂಡಿದ್ದಾರೆ.
ಈಗಾಗಲೇ ಕೆಲವರನ್ನು ರಕ್ಷಿಸಲಾಗಿದ್ದು, ಉಳಿದವರನ್ನು ಸುರಕ್ಷಿತವಾಗಿ ಹೊರತರಲು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಘಟನೆ ನಡೆದ ಸ್ಥಳಕ್ಕೆ ಆರು ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ. ಪುರಸಭೆಯ ಅಗ್ನಿಶಾಮಕ ದಳದ ಸಿಬ್ಬಂದಿ ಕಟ್ಟಡದಲ್ಲಿ ಸಿಲುಕಿರುವವರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದು ವಸತಿ ಮತ್ತು ವಾಣಿಜ್ಯ ಉದ್ದೇಶಗಳಿಗೆ ಬಳಕೆಯಾಗುತ್ತಿದ್ದ ಕಟ್ಟಡವಾಗಿದೆ. ಇದನ್ನೂ ಓದಿ: ಎನ್ಡಿಎ ಪರೀಕ್ಷೆಯಲ್ಲಿ ದೇಶದಲ್ಲೇ ಪ್ರಥಮ ಸ್ಥಾನ – ಶ್ರೇಯಾಗೆ ರಾಜ್ಯಪಾಲರಿಂದ ಅಭಿನಂದನೆ
ನಗರದ ಓಲ್ಡ್ ಕೊತ್ವಾಲಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಬಗಾಡಿಯಾ ಟವರ್ನಲ್ಲಿ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ. ಇದನ್ನೂ ಓದಿ: ತೋಟದಪ್ಪ ಧರ್ಮಸಂಸ್ಥೆ ಉದ್ಯೋಗ ಕೌಶಲ ಕೇಂದ್ರಕ್ಕೆ ಸಿಎ ನಿವೇಶನ: ಎಂ.ಬಿ.ಪಾಟೀಲ್ ಭರವಸೆ
ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ, ಐದು ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ `ಗರುಡ ಪುರಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಲು ಹಲವರು ಸೇರಿದ್ದರು. ಈ ವೇಳೆ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಒದಗಿಸಿದ ಏಣಿಯ ಸಹಾಯದಿಂದ ಕೆಲವರು ಕಟ್ಟಡದಿಂದ ಹೊರಬರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಕೆಲವು ಮಹಿಳೆಯರು ಇನ್ನೂ ಕಟ್ಟಡದೊಳಗೆ ಸಿಲುಕಿಕೊಂಡಿದ್ದು, ಕೆಳಗೆ ಇಳಿಯಲು ಸಾಧ್ಯವಾಗುತ್ತಿಲ್ಲ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ. ಇದನ್ನೂ ಓದಿ: ಮದುವೆಗೆ ಆಮಂತ್ರಣ ನೀಡಲು ತೆರಳುತ್ತಿದ್ದಾಗ ಸ್ಕೂಟಿಗೆ ಲಾರಿ ಡಿಕ್ಕಿ – ಇಬ್ಬರು ಯುವತಿಯರು ದುರ್ಮರಣ
ಪುರಸಭೆ ಮತ್ತು ಪೊಲೀಸರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಬೆಂಕಿ ಕಾಣಿಸಿಕೊಳ್ಳಲು ನಿಖರವಾದ ಕಾರಣ ಇನ್ನೂ ತಿಳಿದುಬಂದಿಲ್ಲ. ಕೆಲವರು ಕಟ್ಟಡದ ಮೇಲಿನ ಮಹಡಿಯಲ್ಲಿ ಇನ್ನೂ ಸಿಲುಕಿಕೊಂಡಿದ್ದಾರೆ. ಅವರೊಂದಿಗೆ ಪೊಲೀಸ್ ಸಿಬ್ಬಂದಿ ಇದ್ದಾರೆ ಎಂದು ಉಜ್ಜಯಿನಿ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ನ.13ರಂದು ರಾಜ್ಯಕ್ಕೆ ಮೋದಿ ಭೇಟಿ: ಕಾರ್ಯಕ್ರಮಗಳ ಸಂಪೂರ್ಣ ಪಟ್ಟಿ ಇಲ್ಲಿದೆ
ಬೆಂಕಿ ಅವಘಡದ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು, ಸ್ಥಳೀಯ ಆಡಳಿತ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪಡೆ ತಂಡಗಳು ಸ್ಥಳಕ್ಕೆ ಧಾವಿಸಿವೆ. ಬೆಂಕಿಯನ್ನು ನಿಯಂತ್ರಿಸುವುದು ಮತ್ತು ಕಟ್ಟಡದಲ್ಲಿರುವವರನ್ನು ಸುರಕ್ಷಿತವಾಗಿ ಹೊರತರಲು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಜ್ಜಯಿನಿ ಜಿಲ್ಲಾಧಿಕಾರಿ ರೋಷನ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಕಟ್ಟಡವು ಕಿರಿದಾದ ಗಲ್ಲಿಯಲ್ಲಿರುವುದರಿಂದ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ವಾಕಿಂಗ್ ಮಾಡುವಾಗ ಕುಸಿದು ಬಿದ್ದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ – ಆಸ್ಪತ್ರೆಗೆ ದಾಖಲು
ಕಟ್ಟಡದಲ್ಲಿ ಔಷಧಾಲಯವಿದ್ದು, ಅಲ್ಲಿಂದಲೇ ಬೆಂಕಿ ಕಾಣಿಸಿಕೊಂಡು ಕ್ರಮೇಣ ಇತರ ಪ್ರದೇಶಗಳಿಗೆ ಹರಡಿರುವ ಸಾಧ್ಯತೆಯಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಶರ್ಮಾ ತಿಳಿಸಿದ್ದಾರೆ. ಇದನ್ನೂ ಓದಿ: ಮುಂದಿನ ವರ್ಷ 3 ದಿನಗಳ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ: ಡಿಕೆಶಿ ಘೋಷಣೆ
ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಪ್ರದೇಶದಲ್ಲಿ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸಲಾಗಿದ್ದು, ಪರಿಸ್ಥಿತಿಯ ಮೇಲೆ ನಿಗಾ ಇಡಲು ಡ್ರೋನ್ಗಳನ್ನು ಕೂಡ ಬಳಸಲಾಗುತ್ತಿದೆ. ಇದನ್ನೂ ಓದಿ: ಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.76 ಕೋಟಿ ಕಾಣಿಕೆ ಸಂಗ್ರಹ
