45 ನಿಮಿಷಗಳ ಪಾಸ್‌ ಪಡೆದು 2 ಗಂಟೆ ಗ್ಯಾಲರಿಯಲ್ಲಿ ಕುಳಿತಿದ್ರು!

Public TV
2 Min Read
Huge Parliament Security Breach Lok Sabha Speaker ombirla bans visitor gallery passes 1

ನವದೆಹಲಿ: ಲೋಕಸಭೆಯ (Lok Sabha) ಒಳಗೆ ಸ್ಮೋಕ್‌ ಬಾಂಬ್‌ (Smoke Bomb) ಸಿಡಿಸಿದ ಮನೋರಂಜನ್‌ (Manoranjan) ಮತ್ತು ಸಾಗರ್‌ ಶರ್ಮಾ (Sagar Sharma) 45 ನಿಮಿಷಗಳ ಕಾಲ ಪಾಸ್‌ ಪಡೆದು 2 ಗಂಟೆಗಳ ಕಾಲ ವೀಕ್ಷಕರ ಗ್ಯಾಲರಿಯಲ್ಲಿ ಕುಳಿತಿದ್ದು ಹೇಗೆ ಎನ್ನುವುದು ದೊಡ್ಡ ಪ್ರಶ್ನೆಯಾಗಿದೆ.

ಹೌದು. ಬೆಳಗ್ಗೆ 11:30 ರಿಂದ ಮಧ್ಯಾಹ್ನ 12:15 ರವರೆಗೆ ಕಲಾಪ ವೀಕ್ಷಣೆಗೆ ಸಮಯ ನೀಡಲಾಗಿತ್ತು. 45 ನಿಮಿಷಗಳವರೆಗೆ ಪಾಸ್‌ ಪಡೆದ ಇವರು ಸುಮಾರು 2 ಗಂಟೆಗಳ ಕಾಲ ಕಲಾಪ ವೀಕ್ಷಣೆ ಮಾಡಿದ್ದರು.   ಇದನ್ನೂ ಓದಿ: ಒಂದಲ್ಲ ಮೂರು ಬಾರಿ ಮನೋರಂಜನ್‌ಗೆ ಪ್ರತಾಪ್‌ ಸಿಂಹ ಕಚೇರಿಯಿಂದ ಸಿಕ್ಕಿತ್ತು ಪಾಸ್‌!

 

ಸಂಸತ್‌ನಲ್ಲಿ ಕಲಾಪ ನಡೆಯಲಿ, ನಡೆಯದೇ ಇರಲಿ 45 ನಿಮಿಷಗಳ ಅವಧಿ ಮುಗಿದ ಕೂಡಲೇ ವೀಕ್ಷಕರ ಗ್ಯಾಲರಿಯಿಂದ ತೆರಳಬೇಕಾಗುತ್ತದೆ. ಈ ನಿರ್ದೇಶನವಿದ್ದರೂ ಇಬ್ಬರನ್ನು 2 ಗಂಟೆಗಳ ಕಾಲ ಕಲಾಪ ವೀಕ್ಷಣೆಗೆ ಅನುಮತಿ ನೀಡಿದ್ದೇ ಅತಿದೊಡ್ಡ ಭದ್ರತಾಲೋಪ. ವೀಕ್ಷಕರ ಜಾಗ ಖಾಲಿ ಇದ್ದ ಕಾರಣ ಭದ್ರತಾ ಸಿಬ್ಬಂದಿ  ಈ ವಿಷಯವನ್ನು ಗಮನಿಸದ ಕಾರಣ ಈ ಲೋಪ ಉಂಟಾಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಇದನ್ನೂ ಓದಿ: ಸಂಸತ್‍ನಲ್ಲಿ ಸ್ಮೋಕ್ ಬಾಂಬ್ ಎಸೆದಿದ್ದ ಮನೋರಂಜನ್ ಯಾರು?, ಈತನ ಹಿನ್ನೆಲೆಯೇನು?

ಸುಮಾರು ಎರಡು ಗಂಟೆಗಳ ಕಾಲ ಪ್ರೇಕ್ಷಕರ ಗ್ಯಾಲರಿಯಲ್ಲಿ ಇದ್ದ ಇವರು ಮಧ್ಯಾಹ್ನ 1:01ರ ವೇಳೆಗೆ ಗ್ಯಾಲರಿಯಿಂದ ಕೆಳಗಡೆ ಜಿಗಿದು ಹಳದಿ ಬಣ್ಣದ ಸ್ಮೋಕ್‌ ಬಾಂಬ್‌ ಸಿಡಿಸಿದ್ದಾರೆ. ಕೆಳಗಡೆ ಜಿಗಿದ ಬಳಿಕ ಮೂರು ಸಾಲುಗಳನ್ನು ದಾಟಿ ಸೀಟಿನ ಕಡೆಗೆ ತಲುಪಿ ಶೂ ಒಳಗಿದ್ದ ವಸ್ತುವನ್ನು ಹೊರತೆಗೆದಿದ್ದಾನೆ. ನಂತರ ಸದನದಲ್ಲಿ ಹಳದಿ ಬಣ್ಣದ ಹೊಗೆ ಏಳಲಾರಂಭಿಸಿದೆ.

ನಾಲ್ವರು ಆರೋಪಿಗಳು ಸಾಮಾಜಿಕ ಜಾಲತಾಣದ ಮೂಲಕ ಪರಿಚಯ ಹೊಂದಿದ್ದು ಗುರುಗ್ರಾಮ ಸೆಕ್ಟರ್ 7 ರಲ್ಲಿ ದಾಳಿ ನಡೆಸುವ ಬಗ್ಗೆ ಸಂಪೂರ್ಣ ಪ್ಲ್ಯಾನ್‌ ಮಾಡಿದ್ದರು. ಈ ಆರೋಪಿಗಳು ಲಲಿತ್ ಝಾ ಎಂದು ಗುರುತಿಸಲಾದ ವ್ಯಕ್ತಿಯ ನಿವಾಸದಲ್ಲಿ ಒಟ್ಟಿಗೆ ತಂಗಿದ್ದರು. ಈಗ ಪೊಲೀಸರು ಲಲಿತ್‌ ಝಾಗೆ ಮನೆಯನ್ನು ಬಾಡಿಗೆ ನೀಡಿದ ವಿಶಾಲ್‌ ಶರ್ಮಾ ಅಲಿಯಾಸ್‌ ವಿಕ್ಕಿ ಶರ್ಮಾ ಅವರ ಪತ್ನಿ ವೃಂದಾ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನಿರುದ್ಯೋಗದಿಂದ ಬೇಸತ್ತು ಸಾಯೋದೇ ಲೇಸು ಅನ್ನುತ್ತಿದ್ದಳು- ಸಂಸತ್ತಿನ ಹೊರಗಡೆ ಬಂಧಿಸಲ್ಪಟ್ಟವಳ ತಾಯಿ ಮಾತು

Share This Article