ಮಹಾರಾಷ್ಟ್ರ ಬಳಿಕ ಬಿಹಾರದಲ್ಲೂ ಪಕ್ಷಾಂತರ ಪರ್ವ – AIMIMನ ನಾಲ್ವರು ಶಾಸಕರು RJDಗೆ ಜಂಪ್

Public TV
1 Min Read
OWAISI

ಪಾಟ್ನಾ: ಮಹಾರಾಷ್ಟ್ರದಲ್ಲಿ ರಾಜಕೀಯ ಬಿಕ್ಕಟ್ಟಿನ ಪರಿಸ್ಥಿತಿ ಸುಧಾರಣೆಗೊಳ್ಳುವ ಮುನ್ನವೇ ಬಿಹಾರದಲ್ಲೂ ಪಕ್ಷಾಂತರ ಪರ್ವ ಶುರುವಾಗಿದೆ.

ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (AIMIM)ನ ನಾಲ್ವರು ಶಾಸಕರು ಆರ್‌ಜೆಡಿ (ರಾಷ್ಟ್ರೀಯ ಜನತಾ ದಳ) ಸೇರಿದ್ದಾರೆ. ಇದನ್ನೂ ಓದಿ: 16 ವರ್ಷಗಳಿಂದ ಅಳಿಯನನ್ನೇ ಪ್ರೀತಿಸ್ತಿದ್ದ ಅತ್ತೆ- ಒಟ್ಟಿಗೆ ಇರಲು ಸಾಧ್ಯವಾಗದೇ ಇಬ್ಬರೂ ಆತ್ಮಹತ್ಯೆ

OWAISI

AIMIMನ ಶಾಸಕರಾದ ಶಹನವಾಜ್, ಮೊಹಮ್ಮದ್ ಅನ್ಜರ್ ನೈಮೈ, ಮುಹಮ್ಮದ್ ಇಝಾರ್ ಅಸ್ಫಿ ಮತ್ತು ಸೈಯದ್ ರುಕ್ನುದ್ದೀನ್ ಆರ್‌ಜೆಡಿ ಸೇರ್ಪಯಾಗಿದ್ದಾರೆ.

ಮಹಾರಾಷ್ಟ್ರ ವಿಧಾನಸಭೆಯಲ್ಲಿ ನಾಳೆ ವಿಶ್ವಾಸಮತ ಯಾಚನೆಗೆ ಸೂಚಿಸಿರುವ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ನಿರ್ಧಾರವನ್ನು ಪ್ರಶ್ನಿಸಿ ಶಿವಸೇನೆ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂಕೋರ್ಟ್ ಇಂದು ವಿಚಾರಣೆ ನಡೆಸಲಿದೆ.

MAHARASTRA

ನಾಳೆ ಬೆಳಗ್ಗೆ 11 ಗಂಟೆಗೆ ವಿಶ್ವಾಸಮತ ಯಾಚನೆಗೆ ಸೂಚಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ಬಗ್ಗೆ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ, ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ದ್ವಿ-ಸದಸ್ಯ ಪೀಠದ ಮುಂದೆ ಪ್ರಸ್ತಾಪಿಸಿ ತುರ್ತು ವಿಚಾರಣೆಗೆ ಮನವಿ ಮಾಡಿದ್ದರು. ಇದನ್ನೂ ಓದಿ: ಅಸ್ಸಾಂ ಪ್ರವಾಹಕ್ಕೆ ಮರುಗಿದ ಮಹಾರಾಷ್ಟ್ರ ರೆಬೆಲ್‌ ಶಾಸಕರು – ಪರಿಹಾರ ನಿಧಿಗೆ 51 ಲಕ್ಷ ರೂ. ಸಹಾಯ

ರಾಜ್ಯಪಾಲರು ವಿಶ್ವಾಸಮತ ಯಾಚನೆಗೆ ಸೂಚಿಸಿರುವುದು ಸರಿಯಾದ ಕ್ರಮವಲ್ಲ, 16 ಶಾಸಕರ ವಿರುದ್ಧ ಅನರ್ಹತೆ ಅರ್ಜಿ ಸಲ್ಲಿಸಿದ್ದು ಇದು ಕೋರ್ಟ್ ನಲ್ಲಿ ವಿಚಾರಣೆ ಹಂತದಲ್ಲಿದೆ. ಈ ಹಂತದಲ್ಲಿ ವಿಶ್ವಾಸಮತ ಯಾಚನೆಗೆ ಸೂಚಿಸುವುದು ಕಾನೂನು ಬಾಹಿರ ಎಂದಿದ್ದಾರೆ. ಒಂದು ವೇಳೆ ಬಹುಮತ ಸಾಬೀತು ಮಾಡಲೇಬೇಕು ಎನ್ನುವುದಾದರೆ ಏಕನಾಥ ಶಿಂಧೆ ಗುಂಪಿನಲ್ಲಿರುವ ಬಂಡಾಯ ಶಾಸಕರಿಗೆ ವಿಶ್ವಾಸಮತ ಯಾಚನೆ ಸಂದರ್ಭದಲ್ಲಿ ಭಾಗವಹಿಸಲು ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆ.

Live Tv

Share This Article
Leave a Comment

Leave a Reply

Your email address will not be published. Required fields are marked *