ಶಬರಿಮಲೆಯಲ್ಲಿ ಬೆಳಗಿದ ʼಮಕರ ಜ್ಯೋತಿʼ

Public TV
1 Min Read
SABARIMALA

ಪಟ್ಟಣಂತಿಟ್ಟ: ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿಯಂದು ಜ್ಯೋತಿ ರೂಪದಲ್ಲಿ ಅಯ್ಯಪ್ಪ  (Ayyappa) ಭಕ್ತರಿಗೆ ದರ್ಶನ ನೀಡಿದ್ದಾನೆ.

ಸಂಜೆ 6.48ರ ಸುಮಾರಿಗೆ ಅಯ್ಯಪ್ಪ (Sabarimala) ದೇಗುಲದ ಎದುರಿನ ಪೊನ್ನಂಬಲಮೇಡುವಿನಲ್ಲಿ ಜ್ಯೋತಿ ದರ್ಶನವಾಯಿತು. ಈ ವೇಳೆ ಅಯ್ಯಪ್ಪನ ಭಕ್ತಿಗೀತೆ ಗುಣಗಾನ ಮಾಡುತ್ತಾ ಲಕ್ಷಾಂತರ ಭಕ್ತರು ಮಕರ ಜ್ಯೋತಿ (Makara Jyoti) ದರ್ಶನ ಪಡೆದರು.

ಕೇರಳದ ಶಬರಿಮಲೆ (Sabarimala) ಅಯ್ಯಪ್ಪ ದೇಗುಲದಲ್ಲಿ ಸೋಮವಾರ ಮಕರ ಸಂಕ್ರಾಂತಿ (Makara Sankranti) ಪ್ರಯುಕ್ತ ವಿಶೇಷ ಪೂಜೆ-ಪುನಸ್ಕಾರಗಳು ಆಯೋಜನೆಗೊಂಡಿದ್ದವು. ಪಂದಳ ರಾಜಮನೆತನದಿಂದ ಆಭರಣಗಳನ್ನು ತಂದು ಆಯ್ಯಪ್ಪ ಸ್ವಾಮಿಗೆ ವಿಶೇಷ ಅಲಂಕಾರ ಮಾಡಲಾಗಿತ್ತು. ಮಹಾಮಂಗಳಾರತಿ ವೇಳೆಗೆ ಜ್ಯೋತಿರೂಪದಲ್ಲಿ ಅಯ್ಯಪ್ಪ ಕಾಣಿಸಿಕೊಂಡಿದ್ದಾನೆ.

sabarimala 5

ಭಕ್ತ ಸಮೂಹದ ನಿರ್ವಹಣೆ ಮತ್ತು ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ದೇವಾಲಯ ಮತ್ತು ಅದರ ಸುತ್ತಮುತ್ತ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿತ್ತು. ಇದನ್ನೂ ಓದಿ: ಪ್ರಕೃತಿಯ ವಿಸ್ಮಯಕ್ಕೆ ಸಾಕ್ಷಿಯಾದ ಸನ್ನಿಧಾನ- ಗವಿಗಂಗಾಧರೇಶ್ವರನಿಗೆ ಸ್ಪರ್ಶಿಸಿದ ʼಭಾಸ್ಕರʼ

Share This Article