ಹಾಸನ: ಮಕರ ಸಂಕ್ರಾಂತಿಯಂದು ಹಾಸನ ಲೋಕಸಭಾ ಕ್ಷೇತ್ರದ ಸಂಸದರಾಗಿರುವ ಪ್ರಜ್ವಲ್ ರೇವಣ್ಣ (MP Prajval Revanna) ಮತ್ತು ಪರಿಷತ್ ಸದಸ್ಯ ಸೂರಜ್ ರೇವಣ್ಣ (MLC Suraj Revanna) ಅವರು ಶಬರಿಮಲೆಗೆ (Shabarimale) ತೆರಳಿದ್ದಾರೆ.
ಸಹೋದರರಿಬ್ಬರು ಅಯ್ಯಪ್ಪ ಮಾಲಾಧಾರಿಗಳಾಗಿ ಮಕರ ಸಂಕ್ರಾಂತಿ (Makara Sankranti) ದಿನ ಶಬರಿಮಲೆಗೆ ತೆರಳಿ ಅಯ್ಯಪ್ಪ ದೇವಾಲಯ ಮುಂದೆ ಫೋಟೋಗೆ ಕ್ಲಿಕ್ಕಿಸಿಕೊಂಡಿದ್ದಾರೆ. ಇದನ್ನೂ ಓದಿ: Ayodhya Ram Mandir: ರಾಮನೂರಿನಲ್ಲಿ ತಲೆಎತ್ತಲಿದೆ 7 ಸ್ಟಾರ್ ಸಸ್ಯಹಾರಿ ಹೋಟೆಲ್
ಕರ್ನಾಟಕದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಹಾಸನ ಕ್ಷೇತ್ರದ ಟಿಕೆಟ್ ಯಾರಿಗೆ ಸಿಗುತ್ತದೆ ಎಂಬ ಕುತೂಹಲ ಹೆಚ್ಚಾಗಿದೆ.
ಹಾಸನ ಜಿಲ್ಲೆಯ 7 ವಿಧಾನಸಭಾ ಕ್ಷೇತ್ರಗಳಲ್ಲಿ 4 ಕಡೆ ಜೆಡಿಎಸ್, 2 ಕಡೆ ಬಿಜೆಪಿ ಗೆದ್ದರೆ, ಒಂದು ಕಡೆ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ 2 ಕ್ಷೇತ್ರ ಗೆದ್ದಿದ್ದು ಮಾತ್ರವಲ್ಲದೇ ಉತ್ತಮ ಪ್ರದರ್ಶನ ನೀಡಿತ್ತು. ಈ ಕಾರಣಕ್ಕೆ ಕಮಲ ನಾಯಕರು ಹಾಸನ ಕ್ಷೇತ್ರದ ಟಿಕೆಟ್ ಬಿಜೆಪಿಗೆ ನೀಡಬೇಕು ಎಂಬ ಬೇಡಿಕೆ ಇಟ್ಟಿದ್ದಾರೆ. ಆದರೆ ಕಳೆದ ಬಾರಿ ಪ್ರಜ್ವಲ್ ರೇವಣ್ಣ ಈ ಕ್ಷೇತ್ರದಿಂದ ಗೆದ್ದಿರುವ ಕಾರಣ ಈ ಬಾರಿಯೂ ಅವರಿಗೆ ಟಿಕೆಟ್ ಸಿಗುವ ಸಾಧ್ಯತೆ ಹೆಚ್ಚಿದೆ.