ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಅಮಟೂರು ಬಾಳಪ್ಪನ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯವಾಗಿ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಣಬರ ಯಾದವ ಸಂಘದ ನೇತೃತ್ವದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಸಲಾಯಿತು.
Advertisement
75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಜಾದಿ ಕ ಅಮೃತ್ ಮಹೋತ್ಸವ್ ಆಚರಿಸಲಾಗುತ್ತಿದೆ. ಆದರೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಮಟೂರು ಬಾಳಪ್ಪರ ಇತಿಹಾಸವನ್ನ ಮರೆತಿದ್ದಾರೆ. ಹೀಗಾಗಿ ಸರ್ಕಾರದಿಂದ ಅಮಟೂರು ಬಾಳಪ್ಪನ ಜಯಂತಿ ಆಚರಣೆ ಮಾಡಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯವಾಗಿ ಅಳವಡಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯಾದವ ಸಂಘದ ನೇತೃತ್ವದಲ್ಲಿ ಅಮಟೂರಿನಿಂದ ಬೆಳಗಾವಿಯವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಇದನ್ನೂ ಓದಿ: 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ 75 ಮೀ. ತಿರಂಗಾದೊಂದಿಗೆ 75 ಕಿ.ಮೀ ರ‍್ಯಾಲಿ
Advertisement
Advertisement
ರ‍್ಯಾಲಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು. ನಂತರ ಬಸವನ ಕುಡಚಿಯ ಸಭಾ ಭವನದಲ್ಲಿ ಸಮಾವೇಶ ನಡೆಸಿದರು. ಇದೇ ವೇಳೆ ನಾಗರಾಜ್ ಹಣಬರ ಅಂತೂರು ಬಾಳಪ್ಪ ಅವರ ಬಗ್ಗೆ ರಚಿಸಿದ ಆಲ್ಬಮ್ ಸಾಂಗ್ ಸಮಾಜದ ಮುಖಂಡರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು. ಇದನ್ನೂ ಓದಿ: 18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?
Advertisement
ನಾಗರಾಜ ಹಣಬರ, ಪ್ರಶಾಂತ ಕೌಲಗಿ, ಸಂತೋಷ್ ಕೌತ್, ನಾಗಪ್ಪ ಕಳಸನ್ನವರ್, ಬಸವರಾಜ್ ಸಂತ್ರೆ ಸೇರಿದಂತೆ ಸಮಾಜದದ ಅನೇಕ ಮುಖಂಡರು ಪಾಲ್ಗೊಂಡಿದ್ದರು.