ಮುಂಬೈ: ಉತ್ತರಪ್ರದೇಶ ರಾಜ್ಯದ ಎಲ್ಲ ಮಸೀದಿಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸಿರುವ ಬೆನ್ನಲ್ಲೇ ಮಹಾರಾಷ್ಟ್ರದ ಮದರಸಾಗಳಲ್ಲೂ ರಾಷ್ಟ್ರಗೀತೆ ಕಡ್ಡಾಯಗೊಳಿಸುವಂತೆ ಬಿಜೆಪಿ ಒತ್ತಾಯಿಸಿದೆ.
ಈಗಾಗಲೇ ಉತ್ತರಪ್ರದೇಶದ ಮಸೀದಿಗಳಲ್ಲಿ ರಾಷ್ಟ್ರಗೀತೆ `ಜನ ಗಣ ಮನ’ ಹಾಡುವುದನ್ನು ಗುರುವಾರದಿಂದಲೇ ಜಾರಿಗೆ ಬರುವಂತೆ ಕಡ್ಡಾಯಗೊಳಿಸಲಾಗಿದೆ. ಈ ಸಂಬಂಧ ಉತ್ತರಪ್ರದೇಶದ ಮದರಸಾ ಶಿಕ್ಷಣ ಮಂಡಳಿಯ ನೋಂದಣಾಧಿಕಾರಿ ಎಸ್.ಎನ್.ಪಾಂಡೆ ಅವರು ಜಿಲ್ಲಾ ಅಲ್ಪಸಂಖ್ಯಾತ ಕಲ್ಯಾಣ ಅಧಿಕಾರಿಗಳಿಗೆ ಮೇ 9 ರಂದೇ ಆದೇಶ ಹೊರಡಿಸಿದ್ದು, ಅದು ನಿನ್ನೆಯಿಂದ ಜಾರಿಗೆ ಬಂದಿದೆ. ಈ ಬೆನ್ನಲ್ಲೇ ಮಹಾರಾಷ್ಟ್ರದಲ್ಲೂ ಇದೇ ನೀತಿಯನ್ನು ಅನುಸರಿಸುವಂತೆ ಬಿಜೆಪಿ ಒತ್ತಾಯಿಸುತ್ತಿದೆ. ಇದನ್ನೂ ಓದಿ: ಚಿನ್ನ, ಬೆಳ್ಳಿಯಲ್ಲ ಈಗ ನಿಂಬೆಹಣ್ಣಿನ ಮೇಲೆ ಕಳ್ಳರ ಕಣ್ಣು- 12 ಮೂಟೆ ನಿಂಬೆಹಣ್ಣು ಕಳವಾಗಿದ್ದೇಗೆ?
Advertisement
Advertisement
ಮಹಾರಾಷ್ಟ್ರದ ಬಿಜೆಪಿ ಆಧ್ಯಾತ್ಮಿಕ ಸಮನ್ವಯ ಘಟಕದ ಮುಖ್ಯಸ್ಥ ಆಚಾರ್ಯ ತುಷಾರ್ ಭೋಸ್ಲೆ ಈ ಕುರಿತು ಮಾತನಾಡಿದ್ದು, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮದರಸಾಗಳಲ್ಲಿ ರಾಷ್ಟ್ರಗೀತೆ ಕಡ್ಡಾಯಗೊಳಿಸಿರುವುದು ಶ್ಲಾಘನೀಯವಾಗಿದೆ. ಉತ್ತರಪ್ರದೇಶದ ಈ ನೀತಿಯು ಅನುದಾನಿತ ಮತ್ತು ಅನುದಾನ ರಹಿತ ಮದರಸಾಗಳಿಗೆ ಅನ್ವಯಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ರಾಜ್ ಠಾಕ್ರೆ ಬೊಗಳುವ ನಾಯಿ – ಪರೋಕ್ಷವಾಗಿ ಅಕ್ಬರುದ್ದೀನ್ ಟಾಂಗ್
Advertisement
Advertisement
ಮದರಸಾ, ಧರ್ಮಾಧಾರಿತ ಭೋದನೆಯಾಗಿರಲಿ ಅಥವಾ ಶಾಲೆಯಾಧಾರಿತ ಕಲಿಕೆಯಾಗಿರಲಿ. ರಾಷ್ಟ್ರದ ಬಗ್ಗೆ ತಿಳಿದುಕೊಳ್ಳುವುದು ಅತ್ಯಗತ್ಯ. ಈ ನಿಟ್ಟಿನಲ್ಲಿ ಯೋಗಿ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಮಹಾರಾಷ್ಟ್ರ ಸರ್ಕಾರವು ಶೀಘ್ರದಲ್ಲೇ ಇದೇ ಕ್ರಮ ತೆಗದುಕೊಳ್ಳಬೇಕು ಎಂದು ಒತ್ತಾಯಿಸಿದೆ.