ಭೋಪಾಲ್: ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ (Narottam Mishra) ನಂತರ, ರಾಜ್ಯದ ವಿಧಾನಸಭಾ ಸ್ಪೀಕರ್ ಗಿರೀಶ್ ಗೌತಮ್ (Girish Gautam) ಅವರು ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ (Deepika Padukone) ನಟನೆಯ `ಪಠಾಣ್’ (Pathan) ಸಿನಿಮಾದ `ಬೇಷರಂ ರಂಗ್’ ಹಾಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
Advertisement
ಚಿತ್ರಮಂದಿರದಲ್ಲಿ ಪಠಾಣ್ ಸಿನಿಮಾ (Cinema) ನಿಷೇಧಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಶಾರುಖ್ (Shah Rukh Khan) ಈ ಚಿತ್ರವನ್ನು ತನ್ನ ಮಗಳೊಂದಿಗೆ ನೋಡಬೇಕು. ಮಗಳ ಜೊತೆಗಿನ ಫೋಟೋ ಅಪ್‌ಲೋಡ್ ಮಾಡಿ, ಈ ಸಿನಿಮಾವನ್ನು ತನ್ನ ಮಗಳ ಜೊತೆ ನೋಡುತ್ತಿದ್ದೇನೆ ಎಂದು ಜಗತ್ತಿಗೇ ಹೇಳಬೇಕು ಎಂದು ಸವಾಲ್ ಹಾಕಿದ್ದಾರೆ. ಇದನ್ನೂ ಓದಿ: ‘ಪಠಾಣ್’ ಬಿಕಿನಿ ವಿವಾದ: ಕೇಂದ್ರ ಸಚಿವೆ ಸ್ಮೃತಿ ಇರಾನಿ ವಿಡಿಯೋ ವೈರಲ್
Advertisement
ನಾನು ಮುಕ್ತವಾಗಿ ಹೇಳಬಯಸುತ್ತೇನೆ. ಪ್ರವಾದಿ ಮೊಹಮ್ಮದ್ (Prophet Muhammad) ಅವರ ಮೇಲೆ ಅಂತಹ ಒಂದು ಚಲನಚಿತ್ರವನ್ನು ಮಾಡಿ, ಅದನ್ನು ಅಭಿವ್ಯಕ್ತಿ ಸ್ವಾತಂತ್ರ‍್ಯದ ಹೆಸರಿನಲ್ಲಿ ಬಿಡುಗಡೆ ಮಾಡಿ ನೋಡೋಣ? ವಿಶ್ವದಾದ್ಯಂತ ರಕ್ತಪಾತವಾಗುತ್ತದೆ ಎಂದು ಹೇಳಿದ್ದಾರೆ.
Advertisement
Advertisement
ವಿರೋಧ ಪಕ್ಷದ ನಾಯಕ ಡಾ.ಗೋವಿಂದ್ ಸಿಂಗ್ ಹಾಗೂ ಮಾಜಿ ಕೇಂದ್ರ ಸಚಿವ ಸುರೇಶ್ ಪಚೌರಿ ಸೇರಿದಂತೆ ಹಿರಿಯ ಕಾಂಗ್ರೆಸ್ (Congress) ನಾಯಕರು ಈ ಚಿತ್ರದ ಹಾಡನ್ನು ವಿರೋಧಿಸಿದ್ದಾರೆ. ಇದು ನಮ್ಮ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಆಕ್ಷೇಪಿಸಿದ್ದಾರೆ. ಇದನ್ನೂ ಓದಿ: ಭಾರತದಲ್ಲಿ 150 ಕೋಟಿಗೂ ಅಧಿಕ ಗಳಿಕೆ ಮಾಡಿದ ‘ಅವತಾರ್ 2’ ಸಿನಿಮಾ
ಇದಕ್ಕೆ ದನಿಗೂಡಿಸಿರುವ ಸುರೇಶ್ ಪಚೌರಿ, ವಿರೋಧ ಇರುವುದು ಪಠಾಣ್ ಸಿನಿಮಾ ಬಗ್ಗೆ ಅಲ್ಲ, ಹಾಡಿನಲ್ಲಿ ಧರಿಸಿರೋ ಬಟ್ಟೆಯ ಬಗ್ಗೆ. ಭಾರತೀಯ ಸಂಸ್ಕೃತಿಯಲ್ಲಿ ಹಿಂದೂ, ಮುಸ್ಲಿಂ ಅಥವಾ ಯಾವುದೇ ಧರ್ಮದ ಅನುಯಾಯಿಗಳಿರಲಿ, ಮಹಿಳೆ ಅಂತಹ ಬಟ್ಟೆಗಳನ್ನು ಧರಿಸುವುದು ಹಾಗೂ ಅಂತಹ ದೃಶ್ಯವನ್ನು ಸಾರ್ವಜನಿಕವಾಗಿ ಪ್ರದರ್ಶಿಸುವುದನ್ನು ಯಾರೂ ಅನುಮತಿಸೋದಿಲ್ಲ ಎಂದು ಹೇಳಿದ್ದಾರೆ.
`ಪಠಾಣ್’ ಸಿನಿಮಾದ `ಬೇಷರಂ ರಂಗ್’ ಹಾಡನ್ನು ಬಿಡುಗಡೆಗೊಳಿಸಿದ ಎರಡು ದಿನಗಳ ನಂತರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರ ಹೇಳಿಕೆ ನಂತರ ಕೇಸರಿ ವಿವಾದದ ಅಲೆ ಜೋರಾಗಿದೆ.