ಧಾರವಾಡ: ಜನರು ಮತ್ತು ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ಮಲಪ್ರಭಾ ಬಲದಂಡೆ (Malaprabha Canal) ಕಾಲುವೆಗೆ 10 ದಿನಗಳ ಕಾಲ ನೀರು ಹರಿಸಲು ಆದೇಶ ಹೊರಡಿಸಲಾಗಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತರು ಈ ಆದೇಶ ನೀಡಿದ್ದಾರೆ.
ಬಲದಂಡೆ ಕಾಲುವೆ ವ್ಯಾಪ್ತಿಗೆ ಬರುವ ಕೆರೆ ಹಾಗೂ ಕಟ್ಟೆಗಳನ್ನು ತುಂಬಿಸುವ ಮೂಲಕ ಜನರು ಮತ್ತು ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಳಗಾವಿ ಜಿಲ್ಲೆಯ ಸವದತ್ತಿ ರೇಣುಕಾ ಜಲಾಶಯದಿಂದ ಕಾಲುವೆಗೆ ನೀರು ಹರಿಸಲಾಗಿದೆ.
ರೈತರ ಒತ್ತಾಯಕ್ಕೆ ಸ್ಪಂದನೆ
ಬರಗಾಲದ ಹಿನ್ನೆಲೆಯಲ್ಲಿ ನವಲಗುಂದ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರಗೊಂಡಿತ್ತು. ಹೀಗಾಗಿ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಸಬೇಕು ಎಂದು ಸ್ಥಳೀಯ ರೈತರು ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಇದೀಗ 500 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ.ಇದನ್ನೂ ಓದಿ: ಟೇಕಾಫ್ ವೇಳೆ ಇಂಡಿಗೋ ವಿಮಾನದಲ್ಲಿ ತಾಂತ್ರಿಕ ದೋಷ ಪತ್ತೆ – ಪೈಲಟ್ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಕೃಷಿ ಚಟುವಟಿಕೆಗೆ ನೀರು ಬಳಸದಂತೆ ಸೂಚನೆ
ಬಿಡುಗಡೆಯಾಗಿರುವ ನೀರನ್ನು ಕೇವಲ ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಬೇಕು ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರೈತರು ಈ ನೀರನ್ನು ಕೃಷಿ ಚಟುವಟಿಕೆಗಳಿಗೆ ಬಳಸುವಂತಿಲ್ಲ ಎಂದು ಸೂಚಿಸಲಾಗಿದೆ.ಇದನ್ನೂ ಓದಿ: ಗೋವಾ ಕರಾವಳಿ ರಕ್ಷಣಾ ಪಡೆಯಿಂದ ಕರ್ನಾಟಕದ ಮೀನುಗಾರರಿಗೆ ಕಿರುಕುಳ ಆರೋಪ – ಮಂಗಳೂರಿನ ಮೀನುಗಾರರ ಆಕ್ರೋಶ
