ಬೆಳಗಾವಿ: ಪಶ್ಚಿಮ ಘಟ್ಟಗಳಲ್ಲಿ ಭಾರೀ ಮಳೆಯ ಹಿನ್ನಲೆಯಲ್ಲಿ ಮಲಪ್ರಭಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ದರಿಂದ ನದಿ ತೀರದ ಗ್ರಾಮಗಳಿಗೆ ಮತ್ತೆ ನೀರು ನುಗ್ಗುವ ಭೀತಿಯಿಂದ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ.
ಮಲಪ್ರಭಾ ನದಿ ತುಂಬಿ ಹರಿಯುತ್ತಿರುವುದರಿಂದ ರಾಮದುರ್ಗ ತಾಲೂಕಿನ ಹಲವು ಗ್ರಾಮಗಳು ಮುಳುಗಡೆ ಆಗುವ ಸಾಧ್ಯತೆ ಇದ್ದು, ಜನರು ಆತಂಕದಲ್ಲಿದ್ದಾರೆ. ಈಗಾಗಲೇ ಸುನ್ನಾಳ ಗ್ರಾಮಕ್ಕೆ ನದಿ ನೀರು ನುಗ್ಗಿದೆ. ಸವದತ್ತಿಯ ಮಲಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಹಿನ್ನೆಲೆ ರಾಮದುರ್ಗದ ಹಳ್ಳಿಗಳಿಗೆ ನೀರು ನುಗ್ಗಿದೆ. ಮಲಪ್ರಭಾ ಜಲಾಶಯದಿಂದ 21 ಸಾವಿರ ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಪರಿಣಾಮ ರಾಮದುರ್ಗ ತಾಲೂಕಿನ 30ಕ್ಕೂ ಹೆಚ್ಚು ಗ್ರಾಮಗಳಿಗೆ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
Advertisement
ಸುನ್ನಾಳ ಸರಕಾರಿ ಶಾಲೆ, ದರ್ಗಾ ಸೇರಿದಂತೆ ಮನೆಗಳಿಗೆ ನೀರು ನುಗ್ಗಿದೆ. ಆದ್ದರಿಂದ ತಾಲೂಕು ಆಡಳಿತ ಪರಿಹಾರ ಕೇಂದ್ರಗಳನ್ನು ತೆರೆದು ಗ್ರಾಮಸ್ಥರನ್ನು ಸ್ಥಳಾಂತರ ಮಾಡುತ್ತಿದೆ. ಕೆಲವೆಡೆ ನೀರು ನುಗ್ಗುವ ಆತಂಕದಲ್ಲಿ ಗ್ರಾಮಸ್ಥರು ತಾವಾಗಿಯೇ ಊರು ತೊರೆಯುತ್ತಿದ್ದಾರೆ.