ಧಾರವಾಡ: ಮುಂಗಾರು ಹಾಗೂ ಹಿಂಗಾರು ಮಳೆ ಕೈಕೊಟ್ಟ ಪರಿಣಾಮ ರೈತರು ತೀವ್ರ ಸಂಕಷ್ಟಕ್ಕೀಡಾಗಿದ್ದಾರೆ. ಇದರ ಜೊತೆಗೆ ಧಾರವಾಡ (Dharwad) ಜಿಲ್ಲೆಯಲ್ಲಿ ಕುಡಿಯುವ ನೀರಿಗಾಗಿಯೂ ಅಭಾವ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಮಲಪ್ರಭಾ (Malaprabha) ಜಲಾಶಯದಿಂದ 1 ಟಿಎಂಸಿ ನೀರು (Water) ಧಾರವಾಡ ಜಿಲ್ಲೆಗೆ ಬಿಡುಗಡೆಯಾಗಿದ್ದು, ಇಂದಿನಿಂದ 9 ದಿನಗಳ ಕಾಲ ಮಲಪ್ರಭಾ ಬಲದಂಡೆ ಕಾಲುವೆಗೆ ನೀರು ಹರಿಯಲಿದೆ.
ಧಾರವಾಡ ಜಿಲ್ಲೆಯ ಕುಂದಗೋಳ, ಅಣ್ಣಿಗೇರಿ, ನವಲಗುಂದ ಹಾಗೂ ಹುಬ್ಬಳ್ಳಿ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿಗೆ ಸಾಕಷ್ಟು ಸಮಸ್ಯೆ ಎದುರಾಗಿದೆ. ಸದ್ಯ ಬಿಡುಗಡೆಯಾಗುತ್ತಿರುವ 1 ಟಿಎಂಸಿ ನೀರಿನಿಂದ ಈ ನೀರಿನ ಅಭಾವ ಇರುವ ಪ್ರದೇಶಗಳಲ್ಲಿ ಕೆರೆ ತುಂಬಿಸಿಕೊಳ್ಳಲು ಅನುಕೂಲವಾಗಲಿದೆ.
Advertisement
Advertisement
ಈ ಹಿಂದೆ ಮಲಪ್ರಭಾ ನೀರಿನಿಂದ ಜಿಲ್ಲೆಯ 81 ಕೆರೆಗಳನ್ನು ತುಂಬಿಸಲಾಗಿತ್ತು. ಅದರಲ್ಲಿ ಸುಮಾರು 50 ಕೆರೆಗಳಲ್ಲಿ ಅರ್ಧದಷ್ಟು ನೀರು ಇನ್ನೂ ಇದೆ. 32 ಕೆರೆಗಳು ಅರ್ಧಕ್ಕಿಂತಲೂ ಕಡಿಮೆ ನೀರು ಹೊಂದಿವೆ ಎಂದು ಕೆರೆಗಳಿಗೆ ನೀರು ತುಂಬಿಸಲು ಈಗ ಆದ್ಯತೆ ನೀಡಲಾಗಿದೆ. ಇದರಿಂದ 5-6 ತಿಂಗಳವರೆಗೆ ನೀರಿನ ಸಮಸ್ಯೆ ಉಂಟಾಗುವುದಿಲ್ಲ. ಇದನ್ನೂ ಓದಿ: ಆದಾಯ ಮೀರಿ ಆಸ್ತಿ – ಸಿಬಿಐ ಅರ್ಜಿ ವಿಚಾರಣೆ ಶುಕ್ರವಾರಕ್ಕೆ ಮುಂದೂಡಿಕೆ
Advertisement
Advertisement
ಸದ್ಯ ಕೃಷಿಗೆ ನೀರು ಬಿಡುವುದಿಲ್ಲ. ಈಗ ಬಿಡುವ ನೀರು ಕೇವಲ ಕುಡಿಯುವುದಕ್ಕಾಗಿ ಮಾತ್ರ ಎಂದು ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ. ಕಾಲುವೆಗೆ ಹರಿದು ಬರುವ ನೀರನ್ನು ಯಾರೂ ಕೃಷಿಗೆ ಬಳಸುವಂತಿಲ್ಲ. ಇದರ ಬಗ್ಗೆ ನಿಗಾ ವಹಿಸಲು ತಂಡವನ್ನು ಕೂಡಾ ರಚನೆ ಮಾಡಲಾಗಿದೆ. ಕಂದಾಯ, ಆರ್‌ಡಿಪಿಆರ್ ಮತ್ತು ಪೊಲೀಸ್ ಇಲಾಖೆ ಈ ತಂಡದಲ್ಲಿದ್ದು, ಕುಡಿಯಲು ಬರುವ ನೀರನ್ನು ಕೃಷಿಗೆ ಬಳಸುವವರ ಮೇಲೆ ಕ್ರಮ ಕೈಗೊಳ್ಳಲಿದೆ. ಇದನ್ನೂ ಓದಿ: ಕೆಇಎ ಪರೀಕ್ಷಾ ಅಕ್ರಮದ ಕಿಂಗ್‌ಪಿನ್ ಬೆನ್ನಿಗೆ ಎಟಿಎಂ ಸರ್ಕಾರ ನಿಂತಿದೆ: ಆರೋಪಿ ಟ್ರೋಲ್ ಮಿನಿಸ್ಟರ್ ಖರ್ಗೆ ಆಪ್ತ ಎಂದ ಬಿಜೆಪಿ