ಮಂಡ್ಯ: ಜಿಲ್ಲೆಯ ಮಳವಳ್ಳಿ (Malavalli) ಖಾಸಗಿ ಶಾಲೆಯಲ್ಲಿ ಫುಡ್ ಪಾಯಿಸನ್ (Food Poison) ಪ್ರಕರಣಕ್ಕೆ ಸಂಬಂಧಿಸಿದಂತೆ ಹೋಳಿ ಹಬ್ಬದ ಆಯೋಜಕರು, ಆಹಾರ ತಯಾರಕರು ಹಾಗೂ ಶಾಲೆಯ ಮುಖ್ಯಸ್ಥರು ಸೇರಿದಂತೆ 6 ಮಂದಿಯ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿದ್ದಾರೆ.
ಶುಕ್ರವಾರ ಮಳವಳ್ಳಿ ಪಟ್ಟಣ ಮದನ್ ಲಾಲ್ ಕಲ್ಯಾಣ ಮಂಟಪದಲ್ಲಿ ಪುಷ್ಪೇಂದ್ರ ಕುಮಾರ್ ಹೋಳಿ ಹಬ್ಬ ಆಚರಣೆ ಮಾಡಿದ್ದು, ಈ ಹೋಳಿ ಹಬ್ಬಕ್ಕೆ ಸಿದ್ದರಾಜು ಎಂಬವರ ಹೋಟೆಲ್‌ನಲ್ಲಿ ವೆಜಿಟೇಬಲ್ ಪಲಾವ್ ಮಾಡಿಸಲಾಗಿತ್ತು. ಇನ್ನೂ ಕಾಗೇಪುರದ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಉಳಿಕೆ ವೆಜಿಟೇಬಲ್ ಪಲಾವ್‌ನ್ನು ನೀಡಲಾಗಿತ್ತು. ಇದನ್ನೂ ಓದಿ: ಕನ್ನಡ ಸಂಘಟನೆಗಳ ಪ್ರತಿಭಟನೆ ಬೆನ್ನಲ್ಲೇ ನೋಟಿಫಿಕೇಶನ್‌ನಲ್ಲಿ ಅಕ್ಷರದೋಷ ಸರಿಪಡಿಸ್ತೇವೆ ಎಂದ BMRCL
ಈ ವೆಜಿಟೇಬಲ್ ಪಲಾವ್ ತಿಂದ 29 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಇನ್ನೂ ಹೋಳಿಯಲ್ಲಿ ಭಾಗಿಯಾದ 30ಕ್ಕೂ ಹೆಚ್ಚು ಜನರು ಅಸ್ವಸ್ಥಗೊಂಡಿದ್ದರು. ಇದನ್ನೂ ಓದಿ: ರಾಜ್ಯಸಭೆಯಲ್ಲಿ ನಕಲಿ ವೈದ್ಯರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಈರಣ್ಣ ಕಡಾಡಿ
ಈ ಪ್ರಕರಣ ಸಂಬಂಧ ಹೋಳಿ ಆಯೋಜಕ ಪುಷ್ಪೇಂದ್ರ, ಹೋಟೆಲ್ ಮಾಲೀಕ ಸಿದ್ದರಾಜು, ಕಲ್ಯಾಣ ಮಂಟಪ ಸಿಬ್ಬಂದಿ ಕೃಷ್ಣ, ಗೋಕುಲ ವಿದ್ಯಾ ಸಂಸ್ಥೆ ಮುಖ್ಯಸ್ಥ ಲಂಕೇಶ್, ಕಾರ್ಯದರ್ಶಿ ಜಗದೀಶ್, ಕೆಲಸಗಾರ ಅಭಿಷೇಕ್ ಮೇಲೆ ಬಿಇಓ ಉಮಾ ನೀಡಿದ ಮೇರೆಗೆ ಎಫ್‌ಐಆರ್ ಹಾಕಲಾಗಿದೆ. ಇದನ್ನೂ ಓದಿ: ಸೂಲಿಬೆಲೆ ವಿರುದ್ಧ ಉಳ್ಳಾಲದಲ್ಲಿ ಎಫ್‌ಐಆರ್ ದಾಖಲು