ಬೆಂಗಳೂರು: ಸಮಾಜ ಸಂಘಟನೆ ಗಣೇಶ ಹಬ್ಬದ ಪ್ರತೀಕವಾಗಿದೆ, ಪರಿಸರ ಸ್ನೇಹಿ ಗಣೇಶ ಹಬ್ಬ ಅಚರಿಸಿ ಎಂದು ಖ್ಯಾತನಟಿ ಮಾಳವಿಕಾ ಅವಿನಾಶ್ ಜನರಿಗೆ ಕರೆ ಕೊಟ್ಟಿದ್ದಾರೆ.
Advertisement
ರಾಜಾಜಿನಗರ ರಾಮಮಂದಿರ ಆಟದ ಮೈದಾನದಲ್ಲಿ ಬೆಂಗಳೂರು ಕೇಂದ್ರ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ನಮ್ಮ ಮನೆಯ ಗಣೇಶ ನಾವೇ ತಯಾರಿಸೋಣ ಪರಿಸರ ಸ್ನೇಹಿ ಮಣ್ಣಿನ ತಯಾರಿಕೆ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದ ಉದ್ಘಾಟನೆಗೆ ಮಾಳವಿಕಾ ಅವಿನಾಶ್ ಆಗಮಿಸಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಮಾಜ ಸಂಘಟನೆ ಗಣೇಶ ಹಬ್ಬದ ಪ್ರತೀಕವಾಗಿದೆ. ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಿಸಬೇಕು. ನಾವು ಗಣೇಶನಿಗೆ 101 ಹೆಸರಿನಲ್ಲಿ ನಾಮಸ್ಮರಣೆ ಮಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ:ದೂಡಾದಲ್ಲಿ ಅರ್ಜಿ ಹಾಕೋಕೆ 4ರಿಂದ 5 ಸಾವಿರ ಕೊಡ್ಬೇಕಂತೆ..!
Advertisement
ಸ್ವಾತಂತ್ರ್ಯ ಸಂಗ್ರಾಮ ಹೋರಾಟದಲ್ಲಿ ಸಂಘಟನೆ ಮಾಡಿ ಹೋರಾಟ ಮಾಡಲು ಸ್ವಾತಂತ್ರ್ಯ ಹೋರಾಟಗಾರರಾದ ಬಾಲಗಂಗಾಧರ ತಿಲಕ್ ಸಾಮೂಹಿಕ ಗಣೇಶ ಹಬ್ಬ ಅಚರಣೆಗೆ ರೂವಾರಿಯಾಗಿದ್ದರು. ರಾಸಾಯನಿಕ ಬಣ್ಣದ ಗಣೇಶ ನೀರಿನಲ್ಲಿ ವಿಸರ್ಜನೆ ಮಾಡುವುದರಿಂದ ಮನುಷ್ಯ, ಪ್ರಾಣಿ ಮತ್ತು ಪಕ್ಷಿಗಳಿಗೂ ಪ್ರಾಣಪಾಯವಿದೆ. ನಿಸರ್ಗದಲ್ಲಿ ಮಣ್ಣಿನ ಗಣೇಶ ಪ್ರತಿಷ್ಠಾಪನೆಯಿಂದ ಪರಿಸರ ಉಳಿಯುತ್ತೆ ಎಂದು ತಿಳಿಸಿದ್ದಾರೆ.
Advertisement
Advertisement
ಈ ಕಾರ್ಯಕ್ರಮಕ್ಕೆ ರಾಜ್ಯ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಸಂದೀಪ್, ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಮುನಿರಾಜು, ದೀಪಾ ನಾಗೇಶ್, ರಾಜಾಜಿನಗರ ಮಂಡಲ ಅಧ್ಯಕ್ಷರಾದ ರಾಘವೇಂದ್ರ ರಾವ್, ಉಪಾಧ್ಯಕ್ಷರಾದ ಬಿ.ಎನ್.ಶ್ರೀನಿವಾಸ್ ಮತ್ತು ಯುವ ಮೋರ್ಚಾ ಅಧ್ಯಕ್ಷರಾದ ಸಂಜಯ್ ಮತ್ತು ಕೇಂದ್ರ ಜಿಲ್ಲಾ ಬಿಜೆಪಿ ಯುವ ಮುಖಂಡರಾದ ಅಭಿಲಾಶ್ ರೆಡ್ಡಿ, ಮಹೇಂದ್ರ ಮೋದಿ, ಅಜಿತ್ ಹೆಗಡೆ, ಶ್ರೀನಿವಾಸ್ ರಾಘವನ್, ಸುನೀಲ್ ಶಿವಾನಂದ್ ಮತ್ತು ಗೋಪಿ ದೀಪಾ ಬೆಳಗಿಸಿ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದ್ದಾರೆ. ಇದನ್ನೂ ಓದಿ:ಗಣೇಶೋತ್ಸವಕ್ಕೆ ಅವಕಾಶ ಕೊಡಿ, ನಮ್ಮ ಬದುಕು ಬೀದಿಗೆ ಬಂದಿದೆ: ವ್ಯಾಪಾರಿಗಳ ಅಳಲು
ಈ ಪರಿಸರ ಸ್ನೇಹಿ ಮಣ್ಣಿನ ತಯಾರಿಕೆ ಕಾರ್ಯಾಗಾರದಲ್ಲಿ ಶಾಲಾ ಮಕ್ಕಳು ಮತ್ತು ಕಾಲೇಜು ವಿದ್ಯಾರ್ಥಿಗಳು ಮಣ್ಣಿನ ಗಣೇಶ ತಯಾರಿಕೆಯಲ್ಲಿ ಪಾಲ್ಗೊಂಡಿದ್ದರು.