ಬೆಂಗಳೂರು: ವಸತಿ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ‘ಶ್ರೀ ಮಲೆ ಮಹದೇಶ್ವರಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ’ ವತಿಯಿಂದ 2022ನೇ ಸಾಲಿನಲ್ಲಿ ಜರುಗುವ ಮಹಾ ಶಿವರಾತ್ರಿ ಮತ್ತು ಯುಗಾದಿ ಜಾತ್ರಾ ಕಾರ್ಯಕ್ರಮಗಳ ಪೂರ್ವಸಿದ್ಧತೆಗಳ ಕುರಿತು ಮುಜರಾಯಿ ಸಚಿವರು, ಜಿಲ್ಲೆಯ ಶಾಸಕರು ಹಾಗೂ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಉಪಸ್ಥಿತಿಯಲ್ಲಿ ಸಭೆ ನಡೆಯಿತು.
ಮೊದಲಿಗೆ ಜಾತ್ರೆಯ ಕಾರ್ಯಕ್ರಮಗಳ ಪ್ರಯುಕ್ತ ಕೈಗೊಂಡಿರುವ ಮತ್ತು ಕೈಗೊಳ್ಳಲಿರುವ ಕ್ರಮಗಳ ಕುರಿತು ‘ಶ್ರೀ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಸಭೆಗೆ ಮಾಹಿತಿಯನ್ನು ನೀಡಿದರು. ಇದನ್ನೂ ಓದಿ: ತಾಕತ್ತಿದ್ದರೆ ನನ್ನನ್ನು ತುಂಡು, ತುಂಡು ಮಾಡಲಿ ನೋಡೋಣ: ಆಂದೋಲಾ ಶ್ರೀ ಕಿಡಿ
Advertisement
Advertisement
ಈ ಕುರಿತು ಸೋಮಣ್ಣ ಅವರು ಮಾತನಾಡಿದ್ದು, ಶಿವರಾತ್ರಿ ಸಂದರ್ಭದಲ್ಲಿ ಪ್ರತಿನಿತ್ಯ ಲಕ್ಷಾಂತರ ಭಕ್ತರು ಸ್ವಾಮಿಯ ದರ್ಶನಕ್ಕೆ ಬರುತ್ತಾರೆ. ದರ್ಶನಕ್ಕೆ ಆಗಮಿಸುವ ಭಕ್ತರಿಗೆ ಯಾವುದೇ ಅಡೆತಡೆ ಮಾಡಬೇಡಿ. ಅತಿಯಾದ ಪ್ರಚಾರ ನೀಡುವ ಅವಶ್ಯಕತೆ ಇಲ್ಲ. ಕೋವಿಡ್ ನಿಯಮಗಳನ್ನು ಅಳವಡಿಸಿಕೊಂಡು ಕಾರ್ಯಕ್ರಮಗಳನ್ನು ರೂಪಿಸಿ ಯಶಸ್ವಿಗೊಳಿಸಲು ಸೂಚಿಸಿದರು.
Advertisement
Advertisement
ನೀರಾವರಿ ಯೋಜನೆಗಳ ಕುರಿತಂತೆ ಪ್ರಸ್ತಾಪಿಸಿದ ಅವರು, ಗುಂಡಾಲ್ ಏತ ನೀರಾವರಿ ಯೋಜನೆ ಮತ್ತು ರಾಮನಗುಡ್ಡ ಹಾಗೂ ಹಬ್ಬ-ಹುಣಸೆ ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಮುಖ ರಸ್ತೆಗಳ ದುರಸ್ತಿ ಕುರಿತು ಮಾತನಾಡಿದ ಅವರು, ಸತ್ತೇಗಾಲ-ಕೊಳ್ಳೆಗಾಲ-ಯಳಂದೂರು-ಸಂತೆಮರಹಳ್ಳಿ-ಚಾಮರಾಜನಗರ ಮತ್ತು ಕೊಳ್ಳೇಗಾಲ-ಮಧುವನಹಳ್ಳಿ-ಹನೂರು-ಶ್ರೀ ಮಲೆಮಹದೇಶ್ವರ ಬೆಟ್ಟ ಮಾರ್ಗದ ರಸ್ತೆಗಳಲ್ಲಿರುವ ಗುಂಡಿಗಳು ಮತ್ತು ಅಪೂರ್ಣವಾಗಿರುವ ಕಾಮಗಾರಿಗಳಿಂದ ಸಾವ9ಜನಿಕರ ಸಂಚಾರಕ್ಕೆ ತುಂಬಾ ಅಡಚಣೆಯಾಗುತ್ತಿದೆ. ವಿಳಂಬವಿಲ್ಲದಂತೆ ಕೂಡಲೇ ಕಾರ್ಯಪ್ರವೃತ್ತರಾಗಿ ಬೆಟ್ಟದ ಶಿವರಾತ್ರಿ ಜಾತ್ರಾ ಕಾರ್ಯಕ್ರಮಗಳ ಪ್ರಾರಂಭಕ್ಕೂ ಮುನ್ನ ಪೂರ್ಣಗೊಳಿಸಲು ತಿಳಿಸಿದರು. ಇದನ್ನೂ ಓದಿ: ಸ್ಥಳೀಯರಿಗೆ ಖಾಸಗಿ ವಲಯದಲ್ಲಿ ಶೇ.75ರಷ್ಟು ಉದ್ಯೋಗವಕಾಶ – ಸುಪ್ರೀಂನಲ್ಲಿ ಹರ್ಯಾಣಕ್ಕೆ ಜಯ
ಸಭೆಯಲ್ಲಿ ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ, ಶಾಸಕರುಗಳಾದ ನರೇಂದ್ರ, ಎನ್.ಮಹೇಶ್, ಪುಟ್ಟರಂಗ ಶೆಟ್ಟಿ, ನಿರಂಜನ್ ಕುಮಾರ್, ಪರಿಷತ್ ಸದಸ್ಯರಾದ ಸಿ.ಎನ್.ಮಂಜೇಗೌಡ, ತಿಮ್ಮಯ್ಯ, ಕಾವೇರಿ ನೀರಾವರಿ ನಿಗಮದ ಮುಖ್ಯ ಇಂಜನಿಯರ್ ಶಂಕರೇಗೌಡ ಚಾಮರಾಜನಗರ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಹಾಗೂ ಮತ್ತಿತರ ಸಂಬಂಧಿತ ಅಧಿಕಾರಿಗಳು ಉಪಸ್ಥಿತರಿದ್ದರು.