CinemaLatestMain PostNationalSouth cinema

ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ – ಮಲಯಾಳಂ ನಟ ಶ್ರೀಜಿತ್ ರವಿ ಅರೆಸ್ಟ್

Advertisements

ತಿರುವನಂತಪುರಂ: ಅಪ್ರಾಪ್ತ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶಿಸಿದ ಆರೋಪದಡಿ ಮಲಯಾಳಂ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ.

ಹಿರಿಯ ನಟ ಟಿ.ಜಿ. ರವಿ ಅವರ ಪುತ್ರರಾಗಿರುವ ಶ್ರೀಜಿತ್ ರವಿ ವಿರುದ್ಧ ಇದೀಗ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜುಲೈ 4 ರಂದು ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ ಶ್ರೀಜಿತ್ ಕಾರಿನಿಂದ ಕೆಳಗಿಳಿದು ಗುಪ್ತಾಂಗವನ್ನು ಪ್ರದರ್ಶಿಸಿದ್ದಾರೆ ಎಂದು ಆರೋಪಿಸಲಾಗಿದೆ. ಘಟನೆ ಸಂಬಂಧ ಸಿಸಿಟಿವಿ ದೃಶ್ಯಾವಳಿಗಳ ಪರಿಶೀಲನೆ ನಡೆಸಿದ ನಂತರ ಪೊಲೀಸರು ರವಿ ಅವರನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ಎನ್.ಎಫ್.ಟಿ (NFT) ಮಾರುಕಟ್ಟೆಗೆ ಕನ್ನಡದ ಮತ್ತೊಬ್ಬ ಸೂಪರ್ ಸ್ಟಾರ್ ಎಂಟ್ರಿ

ಶ್ರೀಜಿತ್ ರವಿ ಈ ರೀತಿ ವರ್ತಿಸಿರುವುದು ಇದೇ ಮೊದಲೆನಲ್ಲ. ಈ ಹಿಂದೆಯೂ ಇದೇ ರೀತಿ ಪ್ರಕರಣ ಶ್ರೀಜಿತ್ ರವಿ ಮೇಲೆ ದಾಖಲಾಗಿತ್ತು. ಪಾಲಕ್ಕಾಡ್‍ನಲ್ಲಿ 14 ಮಂದಿ ಶಾಲಾ ವಿದ್ಯಾರ್ಥಿನಿಯರ ಗುಂಪಿನ ನಡುವೆ ಸಾರ್ವಜನಿಕವಾಗಿ ತಮ್ಮ ಗುಪ್ತಾಂಗ ಪ್ರದರ್ಶಿಸಿದ್ದರು. ಈ ವೇಳೆಯೂ ಶ್ರೀಜಿತ್ ರವಿ ಅವರನ್ನು ಬಂಧಿಸಲಾಗಿತ್ತು. ನಂತರ ಜಾಮೀನು ನೀಡಲಾಗಿತ್ತು. ಇದನ್ನೂ ಓದಿ:  ಕಾಳಿ ಕೈಯಲ್ಲಿ ಸಿಗರೇಟು ವಿವಾದ – ಹಿಂದೂಗಳ ಕ್ಷಮೆ ಕೋರಿದ ಟೊರೆಂಟೊ ಮ್ಯೂಸಿಯಂ

Live Tv

Leave a Reply

Your email address will not be published.

Back to top button