– ಕಲಾವಿದರ ಸಂಘದ ಕಾರ್ಯದರ್ಶಿ ಸ್ಥಾನಕ್ಕೆ ನಟ ಸಿದ್ಧಿಕಿ ರಾಜೀನಾಮೆ
ತಿರುವನಂತಪುರಂ: ಮಲಯಾಳಂ ಚಲನಚಿತ್ರ (Malayalam cinema) ನಿರ್ದೇಶಕ ರಂಜಿತ್ (Director Ranjith) ಕೇರಳ ಚಲನಚಿತ್ರ ಅಕಾಡೆಮಿ ಅಧ್ಯಕ್ಷ್ಯ ಸ್ಥಾನಕ್ಕೆ ಹಾಗೂ ನಟ ಸಿದ್ಧಿಕಿ (Actor Siddique) ಮಲಯಾಳಂ ಸಿನಿಮಾ ಕಲಾವಿದರ ಸಂಘದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ನ್ಯಾ.ಹೇಮಾ ಸಮಿತಿ ವರದಿ ನಂತರ ಈ ಬೆಳವಣಿಗೆಯಾಗಿದೆ.
Advertisement
ರಂಜಿತ್ ಅವರು ಅಸಭ್ಯ ವರ್ತನೆ ತೋರಿದ್ದಾಗಿ ಕಳೆದ ವರ್ಷ ಬಂಗಾಳಿ ನಟಿಯೊಬ್ಬರು ಆರೋಪಿಸಿದ್ದರು. ರಂಜಿತ್ ಅವರಿಗೆ ರಾಜೀನಾಮೆ ನೀಡುವಂತೆ ಒತ್ತಡ ಹೇರಲಾಗಿತ್ತು. ಇನ್ನೂ ಸಿದ್ಧಿಕಿ ಅವರು ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ನಟಿಯೊಬ್ಬರು ಶನಿವಾರ ಆರೋಪಿಸಿದ್ದರು ಎಂದು ವರದಿಯಾಗಿದೆ.
Advertisement
Advertisement
ರಂಜಿತ್ ಅವರು ಸುದ್ದಿವಾಹಿನಿಯೊಂದಕ್ಕೆ ಆಡಿಯೋ ತುಣುಕನ್ನು ಕಳುಹಿಸುವ ಮೂಲಕ ತಮ್ಮ ರಾಜೀನಾಮೆ ನಿರ್ಧಾರ ಘೋಷಿಸಿದ್ದಾರೆ. ಆಡಿಯೋದಲ್ಲಿ, ಅಕಾಡೆಮಿಯ ಅಧ್ಯಕ್ಷ ಸ್ಥಾನ ವಹಿಸಿಕೊಂಡಾಗಿನಿಂದ ಒಂದು ವರ್ಗದ ಜನ ನನ್ನನ್ನು ಗುರಿಯಾಗಿಸಿ ದಾಳಿ ನಡೆಸುತ್ತಿದ್ದಾರೆ. ಆರೋಪಗಳೆಲ್ಲವೂ ಸುಳ್ಳು ಎಂದು ಸಮಾಜದ ಎದುರು ಸಾಬೀತು ಮಾಡಬೇಕಿದೆ ಎಂದು ಅವರು ಆಡಿಯೊದಲ್ಲಿ ಹೇಳಿದ್ದಾರೆ.
Advertisement
ಸಿದ್ದಿಕಿ ಅವರ ರಾಜೀನಾಮೆ ಪತ್ರವನ್ನು ಎಎಂಎಂಎ ಅಧ್ಯಕ್ಷ ಮತ್ತು ನಟ ಮೋಹನ್‍ಲಾಲ್ ಅವರಿಗೆ ಕಳುಹಿಸಿದ್ದಾರೆ. ಸಿದ್ದಿಕಿಯವರ ನಿರ್ಧಾರವನ್ನು ಸಂಘದ ಹಲವು ಸದಸ್ಯರು ಸ್ವಾಗತಿಸಿದ್ದಾರೆ.