Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Crime | ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Crime

ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಪ್ರತಿಭಟನೆ – ಮಾಸ್ಟರ್‌ ಮೈಂಡ್‌ ಅಂದರ್‌

Public TV
Last updated: April 3, 2026 3:08 pm
Public TV
Share
3 Min Read
malda hostage shocker mastermind arrested he points to sir protest
SHARE

– ಬೆಂಗಳೂರಿಗೆ ಹೊರಟಿದ್ದ ಮೊಫಕ್ಕೆರುಲ್ ಇಸ್ಲಾಂ ಬಾಗ್ಡೋಗ್ರ ಏರ್‌ಪೋರ್ಟ್‌ನಲ್ಲಿ ಲಾಕ್‌

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ಮಾಲ್ಡಾದಲ್ಲಿ ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಿ ಗಲಭೆ ಸೃಷ್ಟಿಸಿದ್ದ ಪ್ರಕರಣದ ಹಿಂದಿನ ಮಾಸ್ಟರ್‌ ಮೈಂಡ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಮೊಫಕ್ಕೆರುಲ್ ಇಸ್ಲಾಂ ಎಂದು ಗುರುತಿಸಲಾಗಿದೆ. ಈತನ ಜೊತೆ ಅವನ ಸಹಾಯಕ ಎಕ್ರಮುಲ್ ಬಗ್ನಿಯನ್ನೂ ಘಟನೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಬಂಧಿಸಲಾಗಿದೆ. ಇಬ್ಬರೂ ಬಾಗ್ಡೋಗ್ರ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣಿಸಲು ಪ್ಲ್ಯಾನ್‌ ಮಾಡಿದ್ದರು. ವಿಮಾನ ನಿಲ್ದಾಣದಲ್ಲೇ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಪಶ್ಚಿಮ ಬಂಗಾಳ | ನ್ಯಾಯಾಧೀಶರನ್ನು ಒತ್ತೆಯಾಳಾಗಿರಿಸಿಕೊಂಡಿದ್ದ ಪ್ರಕರಣದ ತನಿಖೆ NIA ಹೆಗಲಿಗೆ

Listen to this provocative speech from yesterday’s protest in Malda.

Speaker identified as Mofakkerul Islam, Calcutta High Court advocate and former AIMIM candidate (2021).

Police are probing his role in last night’s incident.pic.twitter.com/vkBIXPpYQJ

— Megh Updates 🚨™ (@MeghUpdates) April 2, 2026

ಈ ಬಗ್ಗೆ ಪ್ರತಿಕ್ರಿಯಿಸಿರುವ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ. ಜಯರಾಮನ್, ಜನರನ್ನು ಪ್ರಚೋದಿಸಿದ್ದಕ್ಕಾಗಿ ನಾವು ಮೊಫಕ್ಕೆರುಲ್ ಇಸ್ಲಾಂನನ್ನು ಬಂಧಿಸಿದ್ದೇವೆ. ಅಂತಹ ಯಾವುದೇ ರೀತಿಯ ಅಶಾಂತಿ ಉಂಟು ಮಾಡುವ ಚಟುವಟಿಕೆಗಳಿಗೆ ನಾವು ಅವಕಾಶ ನೀಡುವುದಿಲ್ಲ. ಇದು ಪೂರ್ವ ಯೋಜಿತವಾಗಿದೆಯೇ ಅಥವಾ ಇಲ್ಲವೇ ಎಂಬ ಬಗ್ಗೆ ತನಿಖೆ ನಡೆಸುತ್ತೇವೆ. ಈ ಘಟನೆಯ ನಂತರ, ನಾವು ನ್ಯಾಯಾಂಗ ಅಧಿಕಾರಿಗಳಿಗೆ CAPF ರಕ್ಷಣೆ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

ಮಾಲ್ಡಾದಲ್ಲಿ ಪ್ರತಿಭಟನಾಕಾರರ ಗುಂಪನ್ನು ಉದ್ದೇಶಿಸಿ ಮೊಫಕ್ಕೆರುಲ್ ಪ್ರಚೋದನಕಾರಿ ಭಾಷಣ ಮಾಡಿದ್ದಾನೆ ಎನ್ನಲಾದ ವೀಡಿಯೊ ವೈರಲ್ ಆಗಿದೆ. ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಕನಿಷ್ಠ 35 ಜನರನ್ನು ಬಂಧಿಸಲಾಗಿದೆ. ಸುಪ್ರೀಂ ಕೋರ್ಟ್ (Supreme Court) ನಿರ್ದೇಶನದ ನಂತರ ಚುನಾವಣಾ ಆಯೋಗ ಈ ಪ್ರಕರಣದ ತನಿಖೆಯನ್ನು ಭಯೋತ್ಪಾದನಾ ವಿರೋಧಿ ಸಂಸ್ಥೆ NIA ಗೆ ಹಸ್ತಾಂತರಿಸಿದೆ.

ಮಾಲ್ಡಾದಲ್ಲಿ ನಡೆದಿದ್ದೇನು?
ಮಾಲ್ಡಾ ಜಿಲ್ಲೆಯಲ್ಲಿ ಏಪ್ರಿಲ್‌ 1 ರಂದು ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯಲ್ಲಿದ್ದ (SIR) ನ್ಯಾಯಾಂಗ ಅಧಿಕಾರಿಗಳ ಮೇಲೆ ದೊಡ್ಡ ಮಟ್ಟದ ದಾಳಿ ನಡೆದಿತ್ತು. ಮತದಾರರ ಪಟ್ಟಿಯಿಂದ ಕೆಲವು ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಕಾರಣಕ್ಕೆ ಸಾವಿರಾರು ಸಂಖ್ಯೆಯಲ್ಲಿದ್ದ ಪ್ರತಿಭಟನಾಕಾರರು ಮಾಲ್ಡಾದ ಇಂಗ್ಲಿಷ್ ಬಜಾರ್‌ನಲ್ಲಿರುವ ಕಚೇರಿಯನ್ನು ಮುತ್ತಿಗೆ ಹಾಕಿದ್ದರು.

ಮೂವರು ಮಹಿಳಾ ಜಡ್ಜ್‌ ಸೇರಿ ಒಟ್ಟು ಏಳು ನ್ಯಾಯಾಧೀಶರನ್ನು ಪ್ರತಿಭಟನಾಕಾರರು ಸುಮಾರು 10 ಗಂಟೆಗಳ ಕಾಲ ಕಚೇರಿಯೊಳಗೆ ಕೂಡಿಹಾಕಿ ಒತ್ತೆಯಾಳಾಗಿ ಇರಿಸಿಕೊಂಡಿದ್ದರು. ಈ ಸಮಯದಲ್ಲಿ ಅಧಿಕಾರಿಗಳಿಗೆ ಆಹಾರ, ನೀರು ಅಥವಾ ವೈದ್ಯಕೀಯ ನೆರವು ಸಿಗದಂತೆ ತಡೆಯಲಾಗಿತ್ತು. ವಿದ್ಯುತ್ ಸಂಪರ್ಕವನ್ನೂ ಕಡಿತಗೊಳಿಸಲಾಗಿತ್ತು ಎಂದು ವರದಿಯಾಗಿದೆ.

ಪ್ರತಿಭಟನಾಕಾರರು ಕಲ್ಲು ತೂರಾಟ ನಡೆಸಿದ್ದಲ್ಲದೆ, ಕಚೇರಿಯ ಆಸ್ತಿಪಾಸ್ತಿಗಳಿಗೆ ಹಾನಿ ಮಾಡಿದರು. ಸ್ಥಳೀಯ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ವಿಫಲರಾಗಿದ್ದರು.

ಅಧಿಕಾರಿಗಳನ್ನು ಹೊರಬರಲು ಬಿಡದೆ ಅವರಿಗೆ ಜೀವ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ಕೋಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಾಧೀಶರು ಸುಪ್ರೀಂ ಕೋರ್ಟ್‌ಗೆ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ವಿನಂತಿಸಿದ್ದರು. ಪತ್ರ ಬರೆದ ಕೂಡಲೇ ಮಧ್ಯರಾತ್ರಿ ಸುಪ್ರೀಂ ಕೋರ್ಟ್‌ ಕೇಂದ್ರ ಸಶಸ್ತ್ರ ಪಡೆಗಳನ್ನು ಸ್ಥಳಕ್ಕೆ ಕಳುಹಿಸುವಂತೆ ಆದೇಶ ನೀಡಿತ್ತು.

ಸುಪ್ರೀಂ ಆದೇಶದ ಬಳಿಕ ಕೇಂದ್ರ ಗೃಹ ಸಚಿವಾಲಯವು ಮಾಲ್ಡಾ ಜಿಲ್ಲೆಯ ಇಂಗ್ಲಿಷ್ ಬಜಾರ್‌ಗೆ ಅರೆಸೇನಾ ಪಡೆಗಳನ್ನು ರವಾನಿಸಿತ್ತು. ಈ ಪಡೆಯ ಸೈನಿಕರು ಸ್ಥಳಕ್ಕೆ ತಲುಪಿ ಪ್ರತಿಭಟನಾಕಾರರನ್ನು ಚದುರಿಸಿ, ಕಚೇರಿಯೊಳಗೆ ಸಿಲುಕಿದ್ದ ಅಧಿಕಾರಿಗಳನ್ನು ಸುರಕ್ಷಿತವಾಗಿ ಹೊರತಂದಿದ್ದರು. ಇದನ್ನೂ ಓದಿ: ಜಡ್ಜ್‌ಗಳ ಮೇಲೆ ಪೂರ್ವಯೋಜಿತ ದಾಳಿ – ಪಶ್ಚಿಮ ಬಂಗಾಳದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ: ಸುಪ್ರೀಂ ಕೆಂಡಾಮಂಡಲ

TAGGED:NIAsirSupreme CourtWest Bengal
Share This Article
Facebook Whatsapp Whatsapp Telegram

Cinema news

Parliament House witnessed Azad Bharat screening in honor of Netaji Subhas Chandra Bose 1
ನೇತಾಜಿ ಗೌರವಾರ್ಥ ಆಜಾದ್ ಭಾರತ್ ಚಿತ್ರ ಪ್ರದರ್ಶನಕ್ಕೆ ಸಂಸತ್ ಭವನ ಸಾಕ್ಷಿ
Cinema Latest National Top Stories
Ramayana
`ರಾಮಾಯಣ’ ಟೀಸರ್ ರಿಲೀಸ್ – ಮರ್ಯಾದಾ ಪುರುಷೋತ್ತಮನ ಗೆಟಪ್‌ನಲ್ಲಿ ಕಂಗೊಳಿಸಿದ ರಣಬೀರ್
Bollywood Cinema Latest Top Stories
Malayalam director Ranjith
ನಟಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ – ಮಲಯಾಳಂ ನಿರ್ದೇಶಕ ರಂಜಿತ್ ಅರೆಸ್ಟ್
Cinema Latest Main Post National South cinema
vijay thalapathy
ನಟ ವಿಜಯ್‌ ವಿರುದ್ಧ ಪ್ರಕರಣ ದಾಖಲು
Cinema Latest South cinema Top Stories

You Might Also Like

Sheikh Jaber Al Ahmad Al Sabah Sea Bridge in Kuwait
Latest

ಶೀಘ್ರವೇ ಸೌದಿ, ಯುಎಇ ಸೇರಿ 5 ದೇಶಗಳ 8 ದೊಡ್ಡ ಸೇತುವೆಗಳ ಮೇಲೆ ದಾಳಿ – ಇರಾನ್‌ನಿಂದ ಹಿಟ್‌ ಲಿಸ್ಟ್‌ ರಿಲೀಸ್‌

Public TV
By Public TV
21 minutes ago
POCSO Special Court
Bengaluru City

POCSO Act – ಖಾಸಗಿ ಆಸ್ಪತ್ರೆಗಳಿಗೆ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ರಿಲೀಸ್

Public TV
By Public TV
1 hour ago
Chikkaballapura APMC 2
Chikkaballapur

ಟೊಮೆಟೊ ಕೆಜಿ 10 ರೂ., ಕ್ಯಾರೆಟ್‌ 8 ರೂ. – ಚಿಕ್ಕಬಳ್ಳಾಪುರ ಮಾರುಕಟ್ಟೆಯಲ್ಲಿ ತರಕಾರಿಗಳ ಬೆಲೆ ಭಾರೀ ಇಳಿಕೆ

Public TV
By Public TV
1 hour ago
Abhishek Sharma
Cricket

IPL 2026 | ಅಂಪೈರ್‌ ಜೊತೆಗೆ ಕಿತ್ತಾಡಿದ ಅಭಿಷೇಕ್‌ ಶರ್ಮಾಗೆ ಭಾರೀ ದಂಡ

Public TV
By Public TV
1 hour ago
plane
Latest

ಕೇಂದ್ರದಿಂದ ಯೂಟರ್ನ್‌ – ವಿಮಾನಗಳಲ್ಲಿ 60% ಸೀಟು ಉಚಿತ ಆಯ್ಕೆ ನಿಯಮಕ್ಕೆ ತಾತ್ಕಾಲಿಕ ತಡೆ

Public TV
By Public TV
1 hour ago
Basangouda Patil Yatnal has been called for campaigning as BJP fears defeat in Bagalkot by Election CM Siddaramaiah
Bagalkot

ಸೋಲಿನ ಭಯ ಕಾಣಿಸಿದ್ದಕ್ಕೆ ಯತ್ನಾಳ್‌ರಿಂದ ಪ್ರಚಾರ: ಬಿಜೆಪಿಗೆ ಸಿಎಂ ಗುದ್ದು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?