ಭಾರತಕ್ಕೆ ಭೇಟಿ ನೀಡಿದ ಮಾಲ್ಡೀವ್ಸ್‌ ವಿದೇಶಾಂಗ ಸಚಿವ

Public TV
1 Min Read
Moosa Zameer visits india

ನವದೆಹಲಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ (Moosa Zameer) ಭಾರತಕ್ಕೆ ಅಧಿಕೃತ ಭೇಟಿ ನೀಡಿದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ.

ಭಾರತಕ್ಕೆ (India) ಅಧಿಕೃತ ಭೇಟಿ ನೀಡಿದ ಮಾಲ್ಡೀವ್ಸ್‌ನ (Maldives) ಸಚಿವ ಮೂಸಾ ಜಮೀರ್‌ ಅವರಿಗೆ ಆತ್ಮೀಯ ಸ್ವಾಗತ. ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಕುರಿತು ಚರ್ಚೆ ನಡೆಸುವುದು ಮತ್ತು ಉಭಯ ದೇಶಗಳ ಉತ್ತಮ ಬಾಂಧವ್ಯ ಕಾಪಾಡಲು ಇದು ಸೌಹಾರ್ಧ ಭೇಟಿಯಾಗಿದೆ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಎಕ್ಸ್‌ನಲ್ಲಿ ಪೋಸ್ಟ್‌ ಹಾಕಿದೆ. ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನಲ್ಲಿ ರೇವಣ್ಣ ಫಸ್ಟ್ ಡೇ

ಭಾರತಕ್ಕೆ ನನ್ನ ಮೊದಲ ದ್ವಿಪಕ್ಷೀಯ ಅಧಿಕೃತ ಭೇಟಿಯ ಸಂದರ್ಭದಲ್ಲಿ ನವದೆಹಲಿಗೆ ಆಗಮಿಸಿದ್ದೇನೆ. ಉತ್ಪಾದಕ ಚರ್ಚೆಗಳು, ಸಂಬಂಧಗಳನ್ನು ಬಲಪಡಿಸುವುದು ಮತ್ತು ಭಾರತದ ರೋಮಾಂಚಕ ಸಂಸ್ಕೃತಿಯನ್ನು ಅನುಭವಿಸಲು ಎದುರು ನೋಡುತ್ತಿದ್ದೇನೆ ಎಂದು ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಮಾಲ್ಡೀವಿಯನ್ ಸಚಿವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಅವರೊಂದಿಗೆ ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ಸಮಸ್ಯೆಗಳನ್ನು ಚರ್ಚಿಸಲು ಇಂದು ಸಭೆ ನಡೆಸಲಿದ್ದಾರೆ ಎಂದು ತಿಳಿಸಿದೆ. ಇದನ್ನೂ ಓದಿ: ಇಂದು ಜೆಡಿಎಸ್ ಕೋರ್ ಕಮಿಟಿ ಸಭೆ – ಪಕ್ಷದಿಂದ ಪ್ರಜ್ವಲ್ ಉಚ್ಚಾಟನೆ ಬಗ್ಗೆ ಚರ್ಚೆ ಸಾಧ್ಯತೆ

ಮಾಲ್ಡೀವ್ಸ್‌ನ ವಿದೇಶಾಂಗ ವ್ಯವಹಾರಗಳ ಸಚಿವರಾದ ಮೂಸಾ ಜಮೀರ್ ಅವರು ಗುರುವಾರ ಅಧಿಕೃತ ಭೇಟಿಗಾಗಿ ಭಾರತಕ್ಕೆ ಬರಲಿದ್ದಾರೆ ಎಂದು ಎಂಇಎ ತಿಳಿಸಿತ್ತು.

Share This Article