ನವದೆಹಲಿ: ಉಭಯ ದೇಶಗಳ ನಡುವಿನ ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ, ಮಾಲ್ಡೀವ್ಸ್ ವಿದೇಶಾಂಗ ಸಚಿವ ಮೂಸಾ ಜಮೀರ್ (Moosa Zameer) ಅವರು ಗುರುವಾರ ಭಾರತಕ್ಕೆ (India) ಭೇಟಿ ನೀಡಲಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ಮಾಲ್ಡೀವ್ಸ್ (Maldives) ಸಚಿವರು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ (S.Jaishankar) ಅವರೊಂದಿಗೆ ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ಮತ್ತು ಪ್ರಾದೇಶಿಕ ವಿಷಯಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಡೆಲ್ಲಿ, ರಾಜಸ್ಥಾನ ಪಂದ್ಯದ ವೇಳೆ ಆಪ್ ಕಾರ್ಯಕರ್ತರಿಂದ ಪ್ರತಿಭಟನೆ – ಹಲವರು ವಶಕ್ಕೆ
ಮಾಲ್ಡೀವ್ಸ್ ಹಿಂದೂ ಮಹಾಸಾಗರ ಪ್ರದೇಶದಲ್ಲಿ (ಐಒಆರ್) ಭಾರತದ ಪ್ರಮುಖ ಕಡಲ ನೆರೆಯ ರಾಷ್ಟ್ರವಾಗಿದೆ. ವಿದೇಶಾಂಗ ಸಚಿವ ಜಮೀರ್ ಅವರ ಭೇಟಿಯು ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಹಕಾರಕ್ಕೆ ಮತ್ತಷ್ಟು ವೇಗವನ್ನು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ವಿದೇಶಾಂಗ ಸಚಿವ ಮನ್ಸೂರ್ ಮೇ 8-10 ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಮಾಲ್ಡೀವ್ಸ್ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇದಕ್ಕೂ ಮುನ್ನ ತಿಳಿಸಿತ್ತು. ಈಗ ಅಧಿಕೃತ ಭೇಟಿ ಗುರುವಾರ ಎಂದು ತಿಳಿಸಿದೆ. ಇದನ್ನೂ ಓದಿ: ಮುಸ್ಲಿಮರಿಗೆ ಸಂಪೂರ್ಣ ಮೀಸಲಾತಿ ಸಿಗಬೇಕು: ಲಾಲೂ ಪ್ರಸಾದ್ ಯಾದವ್
ಅಧಿಕಾರ ವಹಿಸಿಕೊಂಡ ನಂತರ ಇದು ವಿದೇಶಾಂಗ ಸಚಿವ ಜಮೀರ್ ಅವರ ಮೊದಲ ಅಧಿಕೃತ ಭಾರತ ಭೇಟಿಯಾಗಿದೆ. ಮೇ 10 ರ ಮೊದಲು ಮಾಲ್ಡೀವ್ಸ್‌ನಿಂದ ತನ್ನ ಮಿಲಿಟರಿ ಸಿಬ್ಬಂದಿಯನ್ನು ಬದಲಾಯಿಸುವುದಾಗಿ ಭಾರತ ಹೇಳಿದ್ದರಿಂದ ಈ ಭೇಟಿ ನಿಗದಿಯಾಗಿದೆ.