-ಭಕ್ತರಿಂದ 62 ಗ್ರಾಂ ಚಿನ್ನ, 2.513 ಕೆಜಿ ಬೆಳ್ಳಿ ಅರ್ಪಣೆ
ಚಾಮರಾಜನಗರ: ಜಿಲ್ಲೆಯ ಹನೂರು (Hanur) ತಾಲೂಕಿನ ಇತಿಹಾಸ ಪ್ರಸಿದ್ಧ ಮಲೆ ಮಹದೇಶ್ವರ (Male Mahadeshwara Temple) ಮತ್ತೆ ಕೋಟ್ಯಧೀಶನಾಗಿದ್ದಾನೆ.
ಮಹದೇಶ್ವರನ ಹುಂಡಿಯಲ್ಲಿ ಕಳೆದ 27 ದಿನಗಳ ಅವಧಿಯಲ್ಲಿ 2.43 ಕೋಟಿ ರೂ. ಕಾಣಿಕೆ ಹಣ ಸಂಗ್ರಹವಾಗಿದೆ. ನಗದು ಹಣ ಜೊತೆಗೆ 62 ಗ್ರಾಂ ಚಿನ್ನ, 2.51 ಕೆಜಿ ಬೆಳ್ಳಿಯನ್ನು ಭಕ್ತರು ಮಲೆ ಮಾದಪ್ಪನಿಗೆ ಅರ್ಪಿಸಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಮನೋಹರ್ ತಹಶೀಲ್ದಾರ್ ವಿಧಿವಶ
ಬಿಗಿ ಬಂದೋಬಸ್ತ್‌ನಲ್ಲಿ ಮಲೆ ಮಹದೇಶ್ವರ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರಘು ನೇತೃತ್ವದಲ್ಲಿ ಹುಂಡಿಗಳ ಎಣಿಕೆ ಕಾರ್ಯ ನಡೆಯಿತು. ಈ ಬಾರಿ ದೀಪಾವಳಿ ಹಬ್ಬ, ಅಮವಾಸ್ಯೆ ಹಾಗೂ ಕಾರ್ತಿಕ ಸೋಮವಾರ ಹಿನ್ನೆಲೆ ಲಕ್ಷಾಂತರ ಮಂದಿ ಮಲೆ ಮಹದೇಶ್ವರನ ದರ್ಶನ ಪಡೆದಿದ್ದರು. ಈ ಹಿನ್ನೆಲೆ ಹುಂಡಿ ಆದಾಯದಲ್ಲೂ ಕೂಡ ಏರಿಕೆಯಾಗಿದೆ. ಇದನ್ನೂ ಓದಿ: ಧಾರವಾಡದಲ್ಲಿ ತಾಯಂದಿರಿಂದಲೇ ಮಕ್ಕಳ ಕಿಡ್ನ್ಯಾಪ್ – ತಾಯಂದಿರು, ಅವರ ಪ್ರೇಮಿಗಳು ಅರೆಸ್ಟ್