ಚಾಮರಾಜನಗರ: ಮೈಸೂರಿನ ಚಾಮುಂಡಿ ಬೆಟ್ಟದ ಬಳಿಕ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಭೂ ಕುಸಿತ ಉಂಟಾಗಿ ಕೆಲತಾಸು ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿತ್ತು.
Advertisement
ಕಳೆದ ಒಂದು ವಾರದಿಂದ ಭರ್ಜರಿ ಮಳೆಯಾಗುತ್ತಿದ್ದು, ಮಲೆಮಹದೇಶ್ವರ ಬೆಟ್ಟದಿಂದ ತಮಿಳುನಾಡಿಗೆ ಹೋಗುವ ಪಾಲಾರ್ ಮಾರ್ಗದಲ್ಲಿ ಭೂ ಕುಸಿತ ಉಂಟಾಗಿ ಭತ್ತ ಕಟಾವು ಯಂತ್ರ ಪಲ್ಟಿ ಹೊಡೆದಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜೆಸಿಬಿ ಸಹಾಯದಿಂದ ಕುಸಿತ ಉಂಟಾದ ಸ್ಥಳದಲ್ಲಿ ಕಲ್ಲು, ಮಣ್ಣು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇದನ್ನೂ ಓದಿ: ರಮೇಶ್‌ಕುಮಾರ್‌ನ ಜೈಲಿಗೆ ಕಳುಹಿಸುತ್ತೇನೆ – ಸುಧಾಕರ್ ಶಪಥ
Advertisement
Advertisement
2019ರಲ್ಲೂ ಜೋರು ಮಳೆಯಿಂದಾಗಿ ಸುಮಾರು 10 ಕಡೆ ಭೂ ಕುಸಿತ ಉಂಟಾಗಿ ಆತಂಕ ಸೃಷ್ಟಿಯಾಗಿತ್ತು. ಸದ್ಯ ಮಳೆಯಿಂದಾಗಿ ಮಲೆಮಹದೇಶ್ವರ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಕೈಗೊಂಡಿರುವ ಕೆಲ ಕಾಮಗಾರಿಗೂ ಅಡಚಣೆ ಉಂಟಾಗಿದೆ. ಇದನ್ನೂ ಓದಿ: ಭಾರೀ ಮಳೆ – ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ
Advertisement