ಚಾಮರಾಜನಗರ: ರಾಜ್ಯದ ಎರಡನೇ ಅತಿ ಹೆಚ್ಚು ಆದಾಯ ತರುವ ಕ್ಷೇತ್ರವಾದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಮಂಗಳವಾರ ತಡರಾತ್ರಿವರೆಗೂ ಹುಂಡಿ ಎಣಿಕೆ ನಡೆದಿದ್ದು, 1,71,00,458 ರೂ. ಕಾಣಿಕೆ ಸಂಗ್ರಹವಾಗಿದೆ.
ಎಣಿಕೆಯಲ್ಲಿ ನಿರತರಾದ ಸಿಬ್ಬಂದಿ ಶ್ರೀ ಕ್ಷೇತ್ರದಲ್ಲಿ ನಡೆಯುವ ವರ್ಷಾಂತ್ಯದಲ್ಲಿ ಸಂಗ್ರಹವಾಗಿರುವ ಅತಿ ಹೆಚ್ಚಿನ ಕಾಣಿಕೆ ಇದಾಗಿದೆ. ಶಿವರಾತ್ರಿ ಜಾತ್ರೆಯಲ್ಲಿ 2 ಕೋಟಿ ರೂ., ಯುಗಾದಿ ಜಾತ್ರೆಯಲ್ಲಿ 1.95 ಕೋಟಿ ರೂ., ಕಾಣಿಕೆ ಸಂಗ್ರಹದ ದಾಖಲೆ ಹೊಂದಿದ್ದು, ವರ್ಷಾಂತ್ಯದಲ್ಲಿ ತಿಂಗಳಲ್ಲಿ ಇದೇ ಹೆಚ್ಚಿನ ಸಂಗ್ರಹದ ಮೊತ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
Advertisement
Advertisement
ಉಳಿದಂತೆ 22 ಗ್ರಾಂ ಚಿನ್ನ, 1.400 ಕೆಜಿ ಬೆಳ್ಳಿ ಕಾಣಿಕೆ ರೂಪದಲ್ಲಿ ಮಲೆ ಒಡೆಯನಿಗೆ ಭಕ್ತರು ಅರ್ಪಿಸಿದ್ದಾರೆ. ಹುಂಡಿ ಎಣಿಕೆಯು ಬಸ್ ನಿಲ್ದಾಣದ ವಾಣಿಜ್ಯ ಸಂಕೀರ್ಣದಲ್ಲಿ ಭಾರೀ ಬಿಗಿ ಬಂದೋಬಸ್ತ್ ನೊಂದಿಗೆ ಸಾಲೂರು ಮಠದ ಹಿರಿಯಶ್ರೀ ನೇತೃತ್ವದಲ್ಲಿ ನಡೆಯಿತು.