ಚಾಮರಾಜನಗರ: ಮಲೆ ಮಹದೇಶ್ವರ ಮತ್ತೆ ಕೋಟಿ ಒಡೆಯನಾಗಿದ್ದಾನೆ. ಹನೂರು ತಾಲೂಕಿನ ಮಹದೇಶ್ವರ ಬೆಟ್ಟದಲ್ಲಿ 1,94,49,243 ರೂ. ಕಾಣಿಕೆ ಸಂಗ್ರಹವಾಗಿದೆ.
ಬೆಟ್ಟದಲ್ಲಿ ಹುಂಡಿ ಕಾಣಿಕೆ ಎಣಿಕೆ ನಡೆಸಲಾಯಿತು. ಕಳೆದ 28 ದಿನಗಳ ಅವಧಿಯಲ್ಲಿ 1.94 ಕೋಟಿ ರೂಪಾಯಿ ಭಕ್ತರಿಂದ ಕಾಣಿಕೆ ರೂಪದಲ್ಲಿ ಹರಿದುಬಂದಿದೆ.
ನಗದು ಹಣದ ಜೊತೆಗೆ 63 ಗ್ರಾಂ ಚಿನ್ನ ಹಾಗೂ ಒಂದು ಕೆಜಿ 510 ಗ್ರಾಂ ಬೆಳ್ಳಿಯ ಆಭರಣಗಳನ್ನು ಸಹ ಭಕ್ತರು ಮಲೆ ಮಹದೇಶ್ವರನಿಗೆ ಸಮರ್ಪಿಸಿದ್ದಾರೆ.
11 ವಿದೇಶಿ ನೋಟು, 2000 ಮುಖಬೆಲೆಯ ನೋಟುಗಳನ್ನು ಕೂಡ ಭಕ್ತರು ಸಮರ್ಪಿಸಿದ್ದಾರೆ. ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಹಾಗೂ ಪ್ರಾಧಿಕಾರದ ಕಾರ್ಯದರ್ಶಿ ರಘು ಅವರ ಸಮಕ್ಷಮದಲ್ಲಿ ಹುಂಡಿಗಳನ್ನು ತೆರೆದು ಎಣಿಕೆ ನಡೆಸಲಾಯಿತು.