ಚಾಮರಾಜನಗರ: ಮಲೆ ಮಹದೇಶ್ವರ (Male Mahadeshwara Temple) ಬೆಟ್ಟದಲ್ಲಿ ಹುಂಡಿ ಹಣ ಎಣಿಕೆ ನಡೆದಿದ್ದು, 27 ದಿನಗಳ ಅವಧಿಯಲ್ಲಿ 2.50 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ.
ದೀಪಾವಳಿ ಜಾತ್ರೆ ಹಿನ್ನೆಲೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಾದಪ್ಪನ ಬೆಟ್ಟಕ್ಕೆ ಭೇಟಿ ನೀಡಿ ಭರಪೂರ ಕಾಣಿಕೆ ಅರ್ಪಿಸಿದ್ದಾರೆ. 27 ದಿನಗಳ ಅವಧಿಯಲ್ಲಿ ಹುಂಡಿಯಲ್ಲಿ 2,50,73,817 ರೂ. ಕಾಣಿಕೆ ಹರಿದುಬಂದಿದೆ.
ಕಾಣಿಕೆಯಲ್ಲಿ 8 ಗ್ರಾಂ ಚಿನ್ನ, 924 ಗ್ರಾಂ ಬೆಳ್ಳಿ ಕೂಡ ಸಂಗ್ರಹವಾಗಿದೆ. ಅಲ್ಲದೇ, ನಾಲ್ಕು ವಿದೇಶಿ ಕರೆನ್ಸಿ ನೋಟು ಪತ್ತೆಯಾಗಿವೆ. ಸಿಸಿಟಿವಿ ಕಣ್ಗಾವಲಿನಲ್ಲಿ ಹುಂಡಿ ಹಣ ಎಣಿಕೆ ಕಾರ್ಯ ನಡೆಯಿತು.
