Malegaon Case | ಮೋಹನ್ ಭಾಗವತ್ ಬಂಧನಕ್ಕೆ ಆದೇಶಿಸಿದ್ದ ತನಿಖಾಧಿಕಾರಿ – ನಿವೃತ್ತ ಇನ್ಸ್‌ಪೆಕ್ಟರ್‌ ಸ್ಫೋಟಕ ಹೇಳಿಕೆ

Public TV
1 Min Read
Malegaon Case

ಮುಂಬೈ: 2008ರ ಮಾಲೆಗಾಂವ್ ಸ್ಫೋಟ (Malegaon Case) ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆರ್‌ಎಸ್‌ಎಸ್‌ನ (RSS) ಮುಖ್ಯಸ್ಥ ಮೋಹನ್ ಭಾಗವತ್‌ರನ್ನು ಬಂಧಿಸಲು ಆದೇಶ ನೀಡಲಾಗಿತ್ತು ಎಂದು ನಿವೃತ್ತ ಎಟಿಎಸ್ ಇನ್ಸ್‌ಪೆಕ್ಟರ್‌ ಮೆಹಬೂಬ್ ಮುಜಾವರ್ ಅವರು ಸ್ಫೋಟಕ ಹೇಳಿಕೆ ನೀಡಿದ್ದಾರೆ.

ಖಾಸಗಿ ಸುದ್ದಿವಾಹಿನಿಯೊಂದಿಗೆ ಮಾತನಾಡಿದ ಅವರು, 2008ರ ಸೆಪ್ಟೆಂಬರ್ 29ರಂದು ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಏಳು ಜನರು ಮೃತಪಟ್ಟಿದ್ದರು ಮತ್ತು 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು. ಈ ಪ್ರಕರಣದ ತನಿಖೆಯನ್ನು ಮಹಾರಾಷ್ಟ್ರ ಎಟಿಎಸ್ ನಡೆಸಿತ್ತು. ತನಿಖೆ ವೇಳೆ, ಕೆಲವು ಆರೋಪಿಗಳಿಗೆ ಆರ್‌ಎಸ್‌ಎಸ್ ಜೊತೆ ಸಂಪರ್ಕ ಇರುವುದಾಗಿ ಕಂಡುಬಂದಿತ್ತು. ಈ ಹಿನ್ನೆಲೆಂ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್‌ರನ್ನು ಬಂಧಿಸಲು ತನಿಖಾಧಿಕಾರಿ ಪರಮ್ ಬೀರ್ ಸಿಂಗ್ ಅವರಿಂದ ನಿರ್ದೇಶನ ನೀಡಲಾಗಿತ್ತು ಎಂದು ತಿಳಿಸಿದ್ದಾರೆ.ಇದನ್ನೂ ಓದಿ:ಇದನ್ನೂ ಓದಿ: ಧರ್ಮಸ್ಥಳ ಕೇಸ್‌| ದಾರಿ ಬಿಡಿ ಮುಂದಕ್ಕೆ ಹೋಗಬೇಕು: ಪ್ರಣಬ್‌ ಮೊಹಂತಿ

ಪ್ರಕರಣಕ್ಕೆ ಸಂಬಂಧಿಸಿದಂತೆ ರಾಮ್ ಕಲ್ಸಂಗ್ರ, ಸಂದೀಪ್ ಡಾಂಗೆ, ದಿಲೀಪ್ ಪಾಟಿದಾರ್ ಮತ್ತು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ಬಂಧಿಸುವಂತೆ ತನಿಖಾಧಿಕಾರಿ ಕೇಳಿಕೊಂಡಿದ್ದರು. ಮಹಾರಾಷ್ಟ್ರದಲ್ಲಿ ಗಮನಾರ್ಹ ಪ್ರಭಾವ ಹೊಂದಿರುವ ಮೋಹನ್ ಭಾಗವತ್ ಅವರಂತಹ ವ್ಯಕ್ತಿಗಳನ್ನು ಬಂಧಿಸುವುದು ನನ್ನ ಸಾಮರ್ಥ್ಯಕ್ಕೆ ಮೀರಿತ್ತು ಎಂದಿದ್ದರು ಎಂದು ಹೇಳಿದ್ದಾರೆ.

ಈ ಆದೇಶವನ್ನು ಕಾರ್ಯಗತಗೊಳಿಸಲಾಗಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ. ತನಿಖೆಯ ಸಂದರ್ಭದಲ್ಲಿ ರಾಜಕೀಯ ಒತ್ತಡ ಮತ್ತು ಇತರ ಕಾರಣಗಳಿಂದ ಈ ಕ್ರಮವನ್ನು ತಡೆಯಲಾಗಿತ್ತು. ಈ ಪ್ರಕರಣದಲ್ಲಿ ಸಾಧನಾ ಸಿಂಗ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಶ್ರೀಕಾಂತ್ ಪುರೋಹಿತ್ ಮತ್ತಿತರರನ್ನು ಆರೋಪಿಗಳಾಗಿ ಹೆಸರಿಸಲಾಗಿತ್ತು. ಸದ್ಯ ಈ ಘಟನೆಯು ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವಿವಾದಗಳನ್ನು ಮತ್ತೆ ಮುನ್ನೆಲೆಗೆ ತಂದಿದೆ. ಇವರ ಈ ಹೇಳಿಕೆಯಿಂದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.ಇದನ್ನೂ ಓದಿ: ಕೆಲಸದಾಕೆಯ ಮೇಲೆ ರೇಪ್‌ – ಪ್ರಜ್ವಲ್‌ ರೇವಣ್ಣ ಅತ್ಯಾಚಾರಿ ಎಂದು ಕೋರ್ಟ್‌ ತೀರ್ಪು

Share This Article