ಬೆಂಗಳೂರು: ಮಲ್ಲೇಶ್ವರಂ (Malleshwaram) ಬಿಬಿಎಂಪಿ ಮೈದಾನದ ಗೇಟ್ ಬಿದ್ದು ಮಗು ಸಾವನ್ನಪ್ಪಿರುವ ಘಟನೆಗೆ ಸಂಬಂಧಪಟ್ಟ ಗುತ್ತಿಗೆದಾರರು ಹಾಗೂ ಅಧಿಕಾರಿಗಳ ಮೇಲೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ (Dinesh Gundurao) ತಿಳಿಸಿದ್ದಾರೆ.
ಮಲ್ಲೇಶ್ವರಂ ಬಿಬಿಎಂಪಿ ಆಟದ ಮೈದಾನದಲ್ಲಿ ಗೇಟ್ ಬಿದ್ದು 11 ವರ್ಷದ ಬಾಲಕ ನಿರಂಜನ್ ಸಾವಿಗೀಡಾಗಿದ್ದು, ಈ ಬಗ್ಗೆ ಅಗತ್ಯ ತನಿಖೆ ನಡೆಸಲು ಬಿಬಿಎಂಪಿ ಕಮಿಷನರ್‌ಗೆ ಸೂಚನೆ ನೀಡಿದರು.ಇದನ್ನೂ ಓದಿ: MUDA Scam | ಸಿಎಂಗೆ ಬಿಗ್ ಡೇ – ಪ್ರಾಸಿಕ್ಯೂಷನ್ ಭವಿಷ್ಯ ನಾಳೆ ನಿರ್ಧಾರ
ಮೈದಾನಕ್ಕೆ 4 ವರ್ಷದ ಹಿಂದೆ ಗೇಟ್ ಅಳವಡಿಸಲಾಗಿದೆ. ಸಂಬಂಧಪಟ್ಟವರಿಂದ ವರದಿ ತರಿಸಿಕೊಳುತ್ತೇವೆ. ಕಳಪೆ ಮಾಡಿದ್ದಾರೆ ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ. ಈ ಕುರಿತು ಯಾರಿಂದಲೂ ದೂರು ಬಂದಿರಲಿಲ್ಲ. ಕಾರ್ಯಕರ್ತರ ಗಮನಕ್ಕೂ ಬಂದಿಲ್ಲ. ಯಾರಿಂದ ಲೋಪ ಆಗಿದೆ ಎಂಬ ಬಗ್ಗೆ ಪರಿಶೀಲಿಸುತ್ತೇವೆ. ಈ ಬಗ್ಗೆ ಬಿಬಿಎಂಪಿ ಕಮಿಷನರ್ ಅವರಿಗೆ ಸೂಚನೆ ನೀಡಲಾಗಿದೆ ಎಂದರು.
ಇದೇ ವೇಳೆ ಸಚಿವ ದಿನೇಶ್ ಗುಂಡುರಾವ್ ಬಾಲಕನ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಸೂಚಿಸಿ, ದುರಂತಕ್ಕೆ ದುಃಖ ವ್ಯಕ್ತಪಡಿಸಿದರು. ಕುಟುಂಬಕ್ಕೆ ಬಿಬಿಎಂಪಿಯಿಂದ 5 ಲಕ್ಷ ರೂ. ಹಾಗೂ ಗಾಂಧಿ ನಗರ ಬ್ಲಾಕ್ ಕಾಂಗ್ರೆಸ್ (Congress) ವತಿಯಿಂದ 5 ಲಕ್ಷ ರೂ. ಪರಿಹಾರ ಘೋಷಿಸಿದರು. ಅಲ್ಲದೇ ಬಾಲಕನ ಸಹೋದರಿಯ ಸಂಪೂರ್ಣ ವಿದ್ಯಾಭ್ಯಾಸದ ಹೊಣೆಯನ್ನು ಆರ್.ಗುಂಡೂರಾವ್ ಫೌಂಡೇಶನ್ ವಹಿಸಿಕೊಳ್ಳಲಿದೆ ಎಂದು ತಿಳಿಸಿದರು.ಇದನ್ನೂ ಓದಿ: ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಬೆನ್ನಲ್ಲೇ ದರ್ಶನ್‌ಗೆ ಐಟಿ ಕಂಟಕ