ಬೆಂಗಳೂರು: ರಸ್ತೆಗುಂಡಿಗೆ ಮಹಿಳೆ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ನೋಟಿಸ್ ನೀಡಲಾಗಿದೆ.
ಮಲ್ಲೇಶ್ವರಂ ಟ್ರಾಫಿಕ್ ಪೊಲೀಸರು (Malleshwaram Traffic Police) ಈ ನೋಟಿಸ್ ನೀಡಿದ್ದಾರೆ. ಕಳೆದ 10 ದಿನಗಳ ಹಿಂದೆ ಸುಜಾತ ಟಾಕೀಸ್ ಬಳಿ ಗುಂಡಿ ತಪ್ಪಿಸಲು ಹೋಗಿ ಬಸ್ ಹರಿದು ಮಹಿಳೆ ಸಾವನ್ನಪ್ಪಿದ್ದರು. ಮಹಿಳೆ ಸಾವನ್ನಪ್ಪಿದ್ದ ಬಳಿಕ ಕುಟುಂಬಸ್ಥರ ದೂರಿನ ಮೇರೆಗೆ ಪೊಲೀಸರು ಎಫ್‍ಐಆರ್ ಮಾಡಿಕೊಂಡಿದ್ದರು. ಅಲ್ಲದೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೂ ಕೇಸ್ ಬುಕ್ ಮಾಡಿಕೊಂಡಿದ್ದರು.
Advertisement
Advertisement
ಈಗ ಬಿಬಿಎಂಪಿಗೆ ನೋಟಿಸ್ (Notice) ನೀಡಿ ರಸ್ತೆ ಡಾಂಬರೀಕರಣ ಟೆಂಡರ್ ಯಾರಿಗೆ ನೀಡಿದ್ರಿ..?, ರಸ್ತೆ ಡಾಂಬರೀಕರಣ ನಿರ್ವಹಣೆ ಹೊಣೆ ಹೊತ್ತಿದ್ದ ಎಂಜಿನಿಯರ್ ಯಾರು?, ಅಪಘಾತ ಆದ ಜಾಗದಲ್ಲಿ ಯಾವಾಗ ಡಾಂಬರೀಕರಣ ಆಗಿದ್ದು? ಇದೆಲ್ಲದರ ಬಗ್ಗೆ ಮಾಹಿತಿ ನೀಡುವಂತೆ ಬಿಬಿಎಂಪಿ ಯೋಜನಾ ವಿಭಾಗದ ಎಂಜಿನಿಯರ್ ಗೆ ನೋಟಿಸ್ ನೀಡಲಾಗಿದೆ. ರಸ್ತೆ ಗುಂಡಿಯಿಂದಲೇ ಸಾವನ್ನಪ್ಪಿರೋದು ಅಂತಾ ಮೃತ ಕುಟುಂಬಸ್ಥರು ಆರೋಪ ಮಾಡುತ್ತಿದ್ದಾರೆ. ಹೀಗಾಗಿ ವಿಚಾರಣೆಗೆ ಹಾಜರಾಗಿ ಸೂಕ್ತ ಮಾಹಿತಿ ನೀಡುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಬೆಂಗಳೂರು ಗುಂಡಿಗೆ ಮಹಿಳೆ ಬಲಿ – KSRTC ಡ್ರೈವರ್ ಅರೆಸ್ಟ್
Advertisement
Advertisement
ಅಪಘಾತ ಆಗಿ 10 ದಿನ ಅದರೂ ಇನ್ನೂ ಮೃತರ ಕುಟುಂಬಕ್ಕೆ ಬಿಬಿಎಂಪಿ ಪರಿಹಾರ ನೀಡಿಲ್ಲ. ರಸ್ತೆಗುಂಡಿಯಿಂದ ಅಪಘಾತ ಆಗಿದೆಯಾ ಅಥವಾ ಕೆಎಸ್ ಆರ್ಟಿಸಿಯಿಂದ ಅಪಘಾತ ಆಗಿದೆಯಾ ಅಂತಾ ಬಿಬಿಎಂಪಿ ಮೀನಾಮೇಷ ಎಣಿಸುತ್ತಿದೆ. ಹೀಗಾಗಿ ಬಿಬಿಎಂಪಿ ರಸ್ತೆಗುಂಡಿಗೆ ಬಲಿಯಾಗ್ತಾ ಇರುವವರ ಸಂಖ್ಯೆ ಹೆಚ್ಚಾಗ್ತಿರೋ ಹಿನ್ನೆಲೆ ಮತ್ತೆ ಇಂತಹ ಪ್ರಕರಣ ಮರುಕಳಿಸದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಇದನ್ನೂ ಓದಿ: ರಸ್ತೆ ಗುಂಡಿ ತಪ್ಪಿಸಲು ಹೋಗಿ KSRTC ಬಸ್ ಚಕ್ರಕ್ಕೆ ಸಿಲುಕಿದ ಅಮ್ಮ, ಮಗಳು