– ನಾಳೆ ದೆಹಲಿಗೆ ದಲಿತ ಸಚಿವರ ದಂಡು
ನವದೆಹಲಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಬದಲಾವಣೆ ಚರ್ಚೆ ತಣ್ಣಗಾಗುವ ಹೊತ್ತಲ್ಲೇ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ದೆಹಲಿಯಲ್ಲಿ ವರಿಷ್ಠರನ್ನು ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ.
Advertisement
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge), ಕಾಂಗ್ರೆಸ್ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ (KC Venugopal) ಅವರನ್ನು ಸತೀಶ್ ಜಾರಕಿಹೊಳಿ ಭೇಟಿಯಾಗಿ ಸುದೀರ್ಘ ಮಾತುಕತೆ ನಡೆಸಿದ್ದಾರೆ.ಇದನ್ನೂ ಓದಿ: ನನ್ನ ಮದುವೆಗೆ ದರ್ಶನ್ ಅವ್ರು ಬಂದ್ರೆ ತುಂಬಾ ಸಂತೋಷ: ಡಾಲಿ ಧನಂಜಯ್
Advertisement
Advertisement
ಸಿಎಂ ಮತ್ತು ಕೆಪಿಸಿಸಿ ಅಧ್ಯಕ್ಷರ ವಿಚಾರದಲ್ಲಿ ಯಾವುದೇ ಬಹಿರಂಗ ಹೇಳಿಕೆ ನೀಡದಂತೆ ವರಿಷ್ಠರು ತಾಕೀತು ಮಾಡಿದ ಬೆನ್ನಲ್ಲೇ ವರಿಷ್ಠರನ್ನು ಭೇಟಿಯಾಗಿ ರಾಜ್ಯ ಕಾಂಗ್ರೆಸ್ ಪಕ್ಷದೊಳಗಿನ ಬೆಳವಣಿಗೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಮುಖ್ಯವಾಗಿ ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಯಾವ ಬೆಳವಣಿಗೆ ನಡೆಯುತ್ತಿದೆ ಎಂದು ವಿವರಿಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಅಥವಾ ಸಿಎಂ ಬದಲಾವಣೆ ಮಾಡುವುದಾದರೆ ದಲಿತ ನಾಯಕರನ್ನು ಪರಿಗಣಿಸಬೇಕು ಎಂದು ಮನವಿ ಮಾಡಿದ್ದಾರೆ. ಇದೇ ವೇಳೆ ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮಾವೇಶ ನಡೆಸಲು ಅನುಮತಿ ನೀಡುವಂತೆ ಕೇಳಿಕೊಂಡಿದ್ದಾರೆ ಎಂದು ಮೂಲಗಳು ಹೇಳಿವೆ.
Advertisement
ಸತೀಶ್ ಜಾರಕಿಹೊಳಿ ಭೇಟಿ ನಡುವೆ ನಾಳೆ ದೆಹಲಿಗೆ ಗೃಹ ಸಚಿವ ಪರಮೇಶ್ವರ್, ಕೆ.ಎನ್ ರಾಜಣ್ಣ ಮತ್ತು ಹೆಚ್‌ಸಿ ಮಹದೇವಪ್ಪ ಕೂಡಾ ದೆಹಲಿಗೆ ಆಗಮಿಸುತ್ತಿದ್ದು, ಹೈಕಮಾಂಡ್ ನಾಯಕರ ಭೇಟಿಗೆ ಸಮಯ ಕೇಳಿದ್ದಾರೆ ಎಂದು ತಿಳಿದು ಬಂದಿದೆ. ಹೀಗಾಗಿ ರಾಜ್ಯದಲ್ಲಿ ಬಹಿರಂಗ ಹೇಳಿಕೆ ನೀಡುತ್ತಿದ್ದ ದಲಿತ ನಾಯಕರು ಈಗ ದೆಹಲಿ ಮಟ್ಟದಲ್ಲಿ ಹೊಸ ಚರ್ಚೆ ಹುಟ್ಟು ಹಾಕುತ್ತಿದ್ದಾರೆ.ಇದನ್ನೂ ಓದಿ: ವಿಷ್ಣುಪ್ರಿಯ ಟ್ರೈಲರ್‌ನಲ್ಲಿ ಕಂಡಿದ್ದು ನವಿರು ಪ್ರೇಮ ಮಾತ್ರವಲ್ಲ!