ನವದೆಹಲಿ: ಒಡಿಶಾದ (Odisha) ಬಾಲಸೋರ್‌ನಲ್ಲಿ (Balasore) ಸರಣಿ ರೈಲು ಅಪಘಾತದ ಬೆನ್ನಲ್ಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಎಐಸಿಸಿ (AICC) ಅಧ್ಯಕ್ಷ, ಮಾಜಿ ರೈಲ್ವೇ ಸಚಿವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಪತ್ರ ಬರೆದಿದ್ದು, ಇಲಾಖೆ ಮೇಲಿನ ನಿರ್ಲಕ್ಷ್ಯಗಳನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ನಾಲ್ಕು ಪುಟಗಳ ಪತ್ರ (Letter) ಬರೆದಿರುವ ಮಲ್ಲಿಕಾರ್ಜುನ ಖರ್ಗೆ, ನೇಮಕಾತಿ, ತಾಂತ್ರಿಕ ಸಮಸ್ಯೆ ಮತ್ತು ಹಿಂದಿನ ತನಿಖೆಗಳನ್ನು ಉಲ್ಲೇಖಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರೈಲ್ವೇ ಇಲಾಖೆಯಲ್ಲಿ (Railway Department) ಖಾಲಿ ಹುದ್ದೆಗಳ ಸಂಖ್ಯೆ ಹೆಚ್ಚುತ್ತಿದೆ. ಪ್ರಸ್ತುತ ಭಾರತೀಯ ರೈಲ್ವೇಯಲ್ಲಿ ಸುಮಾರು 3 ಲಕ್ಷ ಹುದ್ದೆಗಳು ಖಾಲಿ ಇವೆ. ಅಪಘಾತದ ನಡೆದ ವಿಭಾಗದಲ್ಲೂ ಸುಮಾರು 8,278 ಹುದ್ದೆಗಳು ಖಾಲಿ ಇವೆ. 90ರ ದಶಕದಲ್ಲಿ 18 ಲಕ್ಷಕ್ಕೂ ಹೆಚ್ಚು ರೈಲ್ವೇ ಉದ್ಯೋಗಿಗಳಿದ್ದು, ಈಗ ಅದನ್ನು ಸುಮಾರು 12 ಲಕ್ಷಕ್ಕೆ ಇಳಿಸಲಾಗಿದೆ. ಅದರಲ್ಲೂ 3.18 ಲಕ್ಷ ಮಂದಿ ಗುತ್ತಿಗೆ ಆಧಾರದ ಮೇಲೆ ಕೆಲಸ ಮಾಡುತ್ತಿದ್ದಾರೆ. ಕಳೆದ 9 ವರ್ಷಗಳಿಂದ ಇಷ್ಟೊಂದು ಹೆಚ್ಚಿನ ಸಂಖ್ಯೆಯ ಖಾಲಿ ಹುದ್ದೆಗಳನ್ನು ಏಕೆ ಭರ್ತಿ ಮಾಡಲಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಕಾನೂನು ಎಲ್ಲರಿಗೂ ಒಂದೇ, ತನ್ನದೇ ಆದ ಕ್ರಮ ತೆಗೆದುಕೊಳ್ಳಲಿ- ಕುಸ್ತಿಪಟುಗಳಿಗೆ ಅಮಿತ್ ಶಾ ಭರವಸೆ
Advertisement
Advertisement
ಲೊಕೊ ಪೈಲಟ್‌ಗಳು ಓವರ್ ಟೈಮ್ ಡ್ಯೂಟಿ ಮಾಡುತ್ತಿದ್ದಾರೆ ಎಂದು ಮಂಡಳಿ ಹೇಳಿದೆ. ಲೊಕೊ ಪೈಲಟ್‌ಗಳ ನೇಮಕಾತಿ ಯಾಕೆ ನಡೆದಿಲ್ಲ? ಅವರ ಮೇಲೆ ಹೊರೆ ಹಾಕುವುದು ಜನರ ಸುರಕ್ಷತೆ ಸವಾಲು ಸ್ವೀಕರಿಸಿದಂತೆ. ಮೈಸೂರಿನಲ್ಲಿ ಎರಡು ರೈಲುಗಳ ಡಿಕ್ಕಿ ಸಾಧ್ಯತೆ ಉಲ್ಲೇಖಿಸಿ ಸಿಗ್ನಲ್ ಸಮಸ್ಯೆ ಕ್ರಮಕ್ಕೆ ಒತ್ತಾಯಿಸಿತ್ತು. ಈವರೆಗೂ ಯಾಕೆ ಕ್ರಮ ತೆಗೆದುಕೊಂಡಿಲ್ಲ? ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿಯ ಸಂಸದೀಯ ಸ್ಥಾಯಿ ಸಮಿತಿಯು ರೈಲ್ವೇ ಮಂಡಳಿಯ ಸಂಪೂರ್ಣ ನಿರಾಸಕ್ತಿ ಮತ್ತು ನಿರ್ಲಕ್ಷ್ಯವನ್ನು ಟೀಕಿಸಿದೆ. ಇದರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಲಾಗಿದೆ? ರೈಲ್ವೆ ಸುರಕ್ಷತೆ ನಿರ್ಲಕ್ಷ್ಯದ ಬಗ್ಗೆ ಸಿಎಜಿ ಕೂಡ ವರದಿ ನೀಡಿದೆ. 68% ಪ್ರಕರಣಗಳಲ್ಲಿ ತಡವಾಗಿ ತನಿಖಾ ವರದಿ ಸಲ್ಲಿಸಿದ್ದು, ಸೂಕ್ತ ಕ್ರಮವೂ ತೆಗೆದುಕೊಂಡಿಲ್ಲ. ಈ ಬಗ್ಗೆ ತೀವ್ರ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಹರಿಹಾಯ್ದರು. ಇದನ್ನೂ ಓದಿ: ಒಡಿಶಾ ರೈಲು ದುರಂತ – ಅಪಘಾತವಾಗಿ 51 ಗಂಟೆಗಳ ಬಳಿಕ ಮೊದಲ ರೈಲು ಸಂಚಾರ
Advertisement
2011ರ ಹಿಂದಿನ ಸರ್ಕಾರದ ಅವಧಿಯಲ್ಲಿ ರಿಸರ್ಚ್ ಡಿಸೈನ್ಸ್ ಅಂಡ್ ಸ್ಟ್ಯಾಂಡರ್ಡ್ಸ್ ಆರ್ಗನೈಸೇಶನ್ (RDSO) ಯಶಸ್ವಿಯಾಗಿ ರಕ್ಷಾ ಕವಚ್ ಪರೀಕ್ಷಿಸಿತು. ಇದು ರೈಲುಗಳ ಘರ್ಷಣೆಯನ್ನು ತಡೆಯಲು ಉದ್ದೇಶಿಸಲಾಗಿತ್ತು. ನಿಮ್ಮ ಸರ್ಕಾರ ಕವಚ್ ಮರು ನಾಮಕರಣ ಮಾಡಿತು. ಇದಾದ ಮೇಲೂ ಈವರೆಗೂ ಕೇವಲ 4% ಅನುಷ್ಠಾನವಾಗಿದೆ. 100% ತಂತ್ರಜ್ಞಾನ ಅಳವಡಿಕೆಗೆ ವಿಫಲವಾಗಿದ್ದು ಯಾಕೆ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತ ವಿಧ್ವಂಸಕ ಕೃತ್ಯವೇ? – ಪ್ರಾಥಮಿಕ ತನಿಖೆಯ ಬೆನ್ನಲ್ಲೇ ಎದ್ದಿವೆ ಹಲವು ಪ್ರಶ್ನೆಗಳು
Advertisement
ಇನ್ನೂ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ (Ashwini Vaishnav) ಜವಾಬ್ದಾರಿ ಹೊರದೆ ಸಿಬಿಐ (CBI) ತನಿಖೆಗೆ ನೀಡಿದ್ದಾರೆ. ಸಿಬಿಐ ಅಪರಾಧಗಳ ತನಿಖೆಗಿದೆ. ಸಿಬಿಐ ಅಥವಾ ಯಾವುದೇ ಇತರ ಕಾನೂನು ಜಾರಿ ಸಂಸ್ಥೆಯು ತಾಂತ್ರಿಕ, ಸಾಂಸ್ಥಿಕ ಮತ್ತು ರಾಜಕೀಯ ವೈಫಲ್ಯಗಳಿಗೆ ಹೊಣೆಗಾರಿಕೆಯನ್ನು ಸರಿಪಡಿಸಲು ಸಾಧ್ಯವಿಲ್ಲ. ಅವರಿಗೆ ರೈಲ್ವೇ ಸಿಗ್ನಲ್ ಬಗ್ಗೆ ಜ್ಞಾನವೂ ಇರುವುದಿಲ್ಲ. ಅವರಿಂದ ತನಿಖೆ ಹೇಗೆ ನಿರೀಕ್ಷಿಸಬಹುದು? 2016ರಲ್ಲಿ ಕಾನ್ಪುರದಲ್ಲಿ ರೈಲು ಹಳಿ ತಪ್ಪಿ 150 ಮಂದಿ ಪ್ರಾಣ ಕಳೆದುಕೊಂಡರು. ಚುನಾವಣೆ ವೇಳೆ ಪಿತೂರಿ ಎಂದು ಆರೋಪಿಸಿ ಎನ್‌ಐಎ (NIA) ತನಿಖೆಗೆ ನೀಡಿದ್ದಿರಿ. 2018ರಲ್ಲಿ ಎನ್‌ಐಎ ತನಿಖೆಯನ್ನು ಮುಕ್ತಾಯಗೊಳಿಸಿತು. ಆದರೆ ಆರೋಪ ಪಟ್ಟಿ ಸಲ್ಲಿಸಲು ನಿರಾಕರಿಸಿತು. 150 ಮಂದಿಯ ಸಾವಿಗೆ ಹೊಣೆ ಯಾರು ಎಂದು ಕೇಳಿದವರು ಇನ್ನಾದರೂ ಜನರ ಸುರಕ್ಷತೆ ಕುರಿತು ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳುವಂತೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಒಡಿಶಾ ರೈಲು ದುರಂತದ ತನಿಖೆ ಸಿಬಿಐ ಹೆಗಲಿಗೆ