– ಕಾಂಗ್ರೆಸ್‌ನ ಮೂವರು, ಬಿಜೆಪಿಯ ಓರ್ವ ಅಭ್ಯರ್ಥಿ ಆಯ್ಕೆ
ಬೆಂಗಳೂರು: ಕರ್ನಾಟಕದಿಂದ ರಾಜ್ಯಸಭೆಗೆ (Rajya Sabha) ಸ್ಪರ್ಧಿಸಿದ್ದ ನಾಲ್ವರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಚುನಾವಣಾಧಿಕಾರಿಗಳು ಅಧಿಕೃತ ಘೋಷಣೆ ಮಾಡಿದ್ದಾರೆ.
ಕಾಂಗ್ರೆಸ್‌ನ (Congress) ಮೂವರು ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge), ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಬಿಜೆಪಿ ಅಭ್ಯರ್ಥಿ ಪ್ರೊ. ನಾಗರಾಜ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಒಂದು ರಾಜ್ಯಸಭೆ ಸ್ಥಾನದಿಂದ ನನ್ನ, ಮೋದಿ ಸಂಬಂಧ ಕೊನೆಗೊಳ್ಳಲ್ಲ: ಹೆಚ್‌ಡಿಡಿ

ಪವನ್ ಖೇರಾ, ಮನ್ಸೂರ್ ಅಲಿಖಾನ್ ಹಾಗೂ ಪ್ರೊ. ನಾಗರಾಜ್ ಚುನಾವಣಾಧಿಕಾರಿಗಳಿಂದ ಪ್ರಮಾಣ ಪತ್ರ ಪಡೆದುಕೊಂಡಿದ್ದಾರೆ. ಖರ್ಗೆ ಅವರು ದೆಹಲಿಯಲ್ಲಿರುವ ಕಾರಣ ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆದುಕೊಳ್ಳಲಿದ್ದಾರೆ. ಇದನ್ನೂ ಓದಿ: ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ – ಹಿಂಪಡೆಯುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ರಾಜ್ಯಸಭೆಗೆ ನೂತನ ಸದಸ್ಯರಾಗಿ ಆಯ್ಕೆಯಾದ ಬೆನ್ನಲ್ಲೇ ಕಾಂಗ್ರೆಸ್ ಸದಸ್ಯ ಪವನ್ ಖೇರಾ ಮಾತನಾಡಿ, ಕರ್ನಾಟಕದಿಂದ ರಾಜ್ಯಸಭೆ ಸದಸ್ಯನಾಗಿ ಆಯ್ಕೆಯಾಗಿದ್ದಕ್ಕೆ ಖುಷಿ ಇದೆ. ಕನ್ನಡ ಸುಂದರ ಭಾಷೆ, ಮುಂದೆ ನಾನು ಬರುವಾಗ ಕನ್ನಡ ಕಲಿತುಕೊಂಡು ಬರುತ್ತೇನೆ ಎಂದು ಶಪಥ ಮಾಡಿದರು.

ಖರ್ಗೆ ದೆಹಲಿಯಲ್ಲಿ ಇದ್ದಾರೆ, ಬೆಂಗಳೂರಿಗೆ ವಾಪಸ್ ಆದ ಬಳಿಕ ಪ್ರಮಾಣ ಪತ್ರ ಪಡೆಯಲಿದ್ದಾರೆ ಎಂದು ತಿಳಿಸಿದ್ರು. ಇದನ್ನೂ ಓದಿ: ದೇವೇಗೌಡರಿಗೆ ರಾಜ್ಯಸಭೆ ಟಿಕೆಟ್ ಮಿಸ್; ಮೈತ್ರಿಗೆ ಯಾವುದೇ ಸಮಸ್ಯೆ ಇಲ್ಲ: ಸುರೇಶ್ ಬಾಬು
ಮನ್ಸೂರು ಅಲಿ ಖಾನ್ ಬೆಂಬಲಿಗರ ಸಂಭ್ರಮ.
ಇನ್ನೂ ರಾಜ್ಯಸಭಾ ಸದಸ್ಯರಾಗಿ ಮನ್ಸೂರು ಅಲಿ ಖಾನ್ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಕುಣಿದು ಕುಪ್ಪಳಿಸಿದರು. ವಿಧಾನಸೌಧದ ಹೊರಗಡೆ ಪೋಸ್ಟರ್ ಹಿಡಿದು, ಪಟಾಕಿ ಸಿಡಿಸಿ ಸಂಭ್ರಮಿಸಿದರು.
