ಮೈಸೂರು: ದೇಶಕ್ಕಾಗಿ ಮನೆಯವರನ್ನೇ ಕಳೆದುಕೊಂಡವರು ಒಂದು ಕೋಟಿ ರೂ. ಅವ್ಯವಹಾರ ಮಾಡುತ್ತಾರೇನ್ರಿ. ಗಾಂಧಿ ಕುಟುಂಬವನ್ನು ವಿಚಾರಣೆಗೆ ಕರೆದ ಕೂಡಲೇ ನಾವು ಮಾನಸಿಕವಾಗಿ ಕುಗ್ಗುವುದಿಲ್ಲ ಎಂದು ಬಿಜೆಪಿ ವಿರುದ್ಧ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದರು.
ಸುದ್ದಿಗಾರರೊಂದಿಗೆ ಮತನಾಡಿದ ಅವರು, ಸ್ವಾತಂತ್ರ್ಯ ಹೋರಾಟ, ಚಳವಳಿಗಳು, ತ್ಯಾಗ ಬಲಿದಾನ ಮಾಡಿರುವ ಪಕ್ಷ ಕಾಂಗ್ರೆಸ್ ಆಗಿದೆ. ನಮ್ಮನ್ನ ಬಿಜೆಪಿಯವರು ಮಾನಸಿಕವಾಗಿ ಕುಗ್ಗಿಸಲು ಸಾಧ್ಯವಿಲ್ಲ. ಸತ್ಯಾಗ್ರಹವೇ ಮಾಡದವರು, ತ್ಯಾಗ ಬಲಿದಾನ ಗೊತ್ತಿಲ್ಲದ ಬಿಜೆಪಿಯವರಿಂದ ನಮ್ಮನ್ನ ಹೆದರಿಸಲು ಸಾಧ್ಯವಿಲ್ಲ. ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ಇಂತಹ ಗಿಮಿಕ್ ಗಳನ್ನ ಬಿಜೆಪಿ ಮಾಡುತ್ತಿದೆ ಎಂದು ಕಿಡಿಕಾರಿದರು.
Advertisement
Advertisement
ಚುನಾವಣೆ ಫಲಿತಾಂಶಕ್ಕೆ ಮುನ್ನವೇ ನಾನು ಸಿಎಂ ನಾನು ಸಿಎಂ ಎಂದು ಹೇಳುವುದು ಸರಿಯಲ್ಲ. ಸಿಎಂ ಯಾರಾಗಬೇಕು ಎಂಬುದು ಮೈಸೂರಿನಲ್ಲೂ, ಬೆಂಗಳೂರಿನಲ್ಲೂ ಗುಲ್ಬರ್ಗಾದಲ್ಲೂ ತೀರ್ಮಾನವಾಗುವುದಿಲ್ಲ. ಬದಲಿಗೆ ಪಕ್ಷದ ಹೈಕಮಾಂಡ್ ಅದನ್ನು ತೀರ್ಮಾನ ಮಾಡುತ್ತದೆ. ಅಂದಿನ ರಾಜಕೀಯ ಪರಿಸ್ಥಿತಿ ಆಧಾರದ ಮೇಲೆ ಹೈಕಮಾಂಡ್ ಯಾರಿಗೆ ನಾಯಕತ್ವ ನೀಡಬೇಕು ಎಂಬುದನ್ನು ತೀರ್ಮಾನ ಮಾಡುತ್ತದೆ ಎಂದು ತಿಳಿಸಿದರು.
Advertisement
Advertisement
ಕಾಂಗ್ರೆಸ್ ಯಾವಾಗಲೂ ಸಾಮೂಹಿಕ ನಾಯಕತ್ವದಲ್ಲೇ ಹೋಗುತ್ತದೆ. ಮೊದಲು ಪಕ್ಷವನ್ನು ಅಧಿಕಾರಕ್ಕೆ ತರಬೇಕು ಅದೇ ನಮ್ಮ ಉದ್ದೇಶವಾಗಿದೆ ಎಂದ ಅವರು, ರಾಜ್ಯ ರಾಜಕಾರಣಕ್ಕೆ ಖರ್ಗೆ ಮರಳುವ ವಿಚಾರವಾಗಿ ಮಾತನಾಡಿ, ನೀವು ಅವಕಾಶ ಕೊಟ್ಟರೆ(ಮಾಧ್ಯಮದವರು) ಬರುತ್ತೇನೆ. ಎಲ್ಲ ಸೇರಿ ಚಾನ್ಸ್ ಕೊಟ್ಟರೆ ನೋಡೋಣ ಎಂದರು. ಇದನ್ನೂ ಓದಿ: ಹೈಕಮಾಂಡ್ ಅಂಗಳಕ್ಕೆ ಬಿಎಸ್‌ವೈ ನಿರ್ಧಾರ
ರಾಜಕಾರಣದಿಂದ ಯಡಿಯೂರಪ್ಪ ನಿವೃತ್ತಿ ವಿಚಾರವಾಗಿ ಮಾತನಾಡಿದ ಅವರು, ಅದು ಅವರ ವೈಯಕ್ತಿಕ ನಿರ್ಧಾರ. ಅದರ ಬಗ್ಗೆ ನಾನೇನು ಮಾತನಾಡಲ್ಲ. ಎಲ್ಲರಿಗೂ ಅವರದ್ದೇ ಆದ ತೀರ್ಮಾನಗಳನ್ನು ತೆಗೆದುಕೊಳ್ಳುವ ಸ್ವಾತಂತ್ರ್ಯ ಇರುತ್ತದೆ. ನಾವು ಯಾರೇ ಇರಲಿ ಬಿಡಲಿ ದೇಶವಂತೂ ಇರುತ್ತದೆ. ನಾನಿಲ್ಲಾ ಇಲ್ಲಾ ಅಂದರೇ ಇನ್ನೊಬ್ಬರು ಬರುತ್ತಾರೆ. ಹಾಗೆ ಯಡಿಯೂರಪ್ಪ ಯೋಚನೆ ಮಾಡಿರಬಹುದು ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನನ್ನ ಲೆವಲ್‍ಗೆ ಮಾತನಾಡೋರು ಇದ್ರೆ ನಾನು ಮಾತಾಡ್ತೇನೆ- ಜಮೀರ್‌ಗೆ ಡಿಕೆಶಿ ಟಾಂಗ್