– ಸಮರ್ಪಣಾ ಸಮಾವೇಶದಲ್ಲಿ 1.11 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆ
– 4 ಲಕ್ಷ ಜನರಿಗೆ ಊಟದ ವ್ಯವಸ್ಥೆ, ಗ್ಯಾರಂಟಿ ನಿಲ್ಲಿಸೋದಿಲ್ಲ ಎಂದ ಡಿಸಿಎಂ
ಬಳ್ಳಾರಿ: ಕಾಂಗ್ರೆಸ್ ಸರ್ಕಾರ (Congress Government) ಅಧಿಕಾರಕ್ಕೆ ಬಂದು 2 ವರ್ಷ ಪೊರೈಸಿದ ಹಿನ್ನೆಲೆ ರಾಜ್ಯ ಸರ್ಕಾರದಿಂದ ಸಮರ್ಪಣಾ ಸಮಾವೇಶದ ಹೆಸರಿನಲ್ಲಿ ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮದಲ್ಲಿ 1 ಲಕ್ಷದ 11 ಸಾವಿರದ 111 ಕುಟುಂಬಗಳಿಗೆ ಹಕ್ಕು ಪತ್ರಗಳನ್ನ ನೀಡಲಾಯ್ತು.
ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಚಾಲನೆ ನೀಡಿದ್ರು. ಇದೇ ವೇಳೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಮಾತನಾಡಿ, ನುಡಿದಂತೆ ನಡೆದ ಸರ್ಕಾರ ನಮ್ಮದು. ಪ್ರಣಾಳಿಕೆಯಲ್ಲಿ ಆಶ್ವಾಸನೆ ಕೊಟ್ಟಂತೆ ಈಗಾಗಲೇ ಅರ್ಧದಷ್ಟು ಈಡೇರಿಸಿದ್ದೇವೆ. ಉಳಿದ ಭರವಸೆಗಳನ್ನ ಇನ್ನೂ ಮೂರು ತಿಂಗಳಲ್ಲಿ ಈಡೇರಿಸ್ತೇವೆ ಎಂದು ಹೇಳುವ ಮೂಲಕ ಬಿಜೆಪಿ ಹಾಗೂ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ರು. ಇದನ್ನೂ ಓದಿ: 593 ಭರವಸೆ ಕೊಟ್ಟಿದ್ವಿ, 2 ವರ್ಷಗಳಲ್ಲಿ 242 ಭರವಸೆ ಈಡೇರಿಸಿದ್ದೇವೆ: ಸಿದ್ದರಾಮಯ್ಯ
ಗೃಹಲಕ್ಷ್ಮಿ ಹಣ ತಿಂಗಳು ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್#DKShivakumar #Congress #Gruhalakshmi #Karnataka #Politics pic.twitter.com/NaWjCdoa0m
— PublicTV (@publictvnews) May 19, 2025
ಇನ್ನೂ ಮಲ್ಲಿಕಾರ್ಜುನ ಖರ್ಗೆ ಅವರು ಪಹಲ್ಗಾಮ್ ವಿಚಾರ ಪ್ರಸ್ತಾಪಿಸಿ, ಈ ಘಟನೆಗೆ ನೇರ ಕಾರಣ ಕೇಂದ್ರ ಸರ್ಕಾರ ಎಂದು ಆರೋಪಿಸಿದ್ರು. ಪಹಲ್ಗಾಮ್ ನಲ್ಲಿ ಮೋದಿ ಸರ್ಕಾರ ಭದ್ರತೆ ಕೊಟ್ಟಿಲ್ಲ ಹೀಗಾಗಿ ಅಲ್ಲಿ ಜನರ ಕೊಲೆಯಾಯ್ತು. ಸರ್ಕಾರ, ಮಿಲಿಟರಿ ಯಾರೂ ಜನರಿಗೆ ಸಹಕಾರ ಕೊಟ್ಟಿಲ್ಲ. ಆದ್ರೂ ಮೋದಿ ಒಂದು ಮಾತು ಹೇಳಲಿಲ್ಲ. 17ನೇ ತಾರೀಖು ಮೋದಿ ಕಾಶ್ಮೀರಕ್ಕೆ ಹೋಗುವವರಿದ್ರು. ಆದ್ರೆ ಬೇಹುಗಾರಿಕೆ, ಇಂಟಲಿಜೆನ್ಸ್ ಅವರು ಹೋಗಬೇಡಿ ಎಂದ್ರು ಕ್ಯಾನ್ಸಲ್ ಮಾಡಿಸಿದ್ರು. ಹಾಗಾದ್ರೆ ಇದೆಲ್ಲಾ ಮೋದಿಗೆ ಗೊತ್ತಿತ್ತು ಅಲ್ಲವೇ? ಹಾಗಿದ್ರೂ ಮೋದಿ ಯಾಕೆ ಹೇಳಲಿಲ್ಲ ಎಂದು ಖರ್ಗೆ ವೇದಿಕೆಯಲ್ಲಿ ಮೋದಿಗೆ ಸವಾಲು ಹಾಕಿದ್ರು. ಇದನ್ನೂ ಓದಿ: ರಾಹುಲ್ ಜೆಟ್ ಪ್ರಶ್ನೆಗೆ ಬಿಜೆಪಿ ಪಾಕ್ ಪೋಸ್ಟರ್ – ಬಿರಿಯಾನಿ ತಿಂದವರು ಯಾರು? ಅಂತ ಕಾಂಗ್ರೆಸ್ ಕೌಂಟರ್
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇರೋವರೆಗೆ ಗ್ಯಾರಂಟಿ ಸ್ಕೀಮ್ ನಿಲ್ಲೋದಿಲ್ಲ ಡಿಸಿಎಂ ಡಿಕೆಶಿ ಘೋಷಣೆ ಮಾಡಿದ ಅವರು ಟೀಕೆಗಳು ಸಾಯ್ತವೆ, ಕೆಲಸಗಳು ಉಳಿಯುತ್ತವೆ ವಿಪಕ್ಷಗಳಿಗೆ ತಿರುಗೇಟು ನೀಡಿದರು. 2013ರಲ್ಲಿಯೂ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದೇವು. ಈಗ ನಮ್ಮ ಗ್ಯಾರಂಟಿ ಭರವಸೆ ಈಡೇರಿಸಿತ್ತೇವೆ. ಬಿಜೆಪಿ ತಮ್ಮ ಅವಧಿಯಲ್ಲಿ ಯಾವ ಭರವಸೆ ಈಡೇರಿಸಿಲ್ಲ. ಬಿಜೆಪಿ ಅವರು ಸುಳ್ಳು ಹೇಳುದರಲ್ಲಿ ನಿಸ್ಸೀಮರು ಈ ಬಗ್ಗೆ ನಾನು ಅವರೊಂದಿಗೆ ಬಹಿರಂಗವಾಗಿ ಚರ್ಚೆ ಮಾಡಲು ಸಿದ್ದವೆಂದು ಸಿಎಂ ಸಿದ್ದರಾಮಯ್ಯ ಸವಾಲು ಹಾಕಿದರು.
ಇನ್ನೂ ಕಾರ್ಯಕ್ರಮಕ್ಕೆ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ಲಕ್ಷಾಂತರ ಜನ ಆಗಮಿಸಿದ್ರು. ಸಮಾವೇಶದಲ್ಲಿ 4 ಲಕ್ಷ ಜನಕ್ಕೆ ಊಟದ ವ್ಯವಸ್ಥೆ ಮಾಡಿ, ಅದಕ್ಕಾಗಿ 600 ಊಟದ ಕೌಂಟರ್ ತೆರೆಯಲಾಗಿತ್ತು. ರಾಜ್ಯದ ವಿವಿಧ ಜಿಲ್ಲೆಗಳಿಂದ 4 ಸಾವಿರ ಸರ್ಕಾರಿ ಬಸ್‌ಗಳು ಸೇರಿದಂತೆ 11 ಸಾವಿರ ವಾಹನಗಳಲ್ಲಿ ಜನರು ಸಮಾವೇಶಕ್ಕೆ ಆಗಮಿಸಿದ್ರು. ಇದನ್ನೂ ಓದಿ: ಬೆಂಗ್ಳೂರಲ್ಲಿ ಮಳೆಯಿಂದ ಜನರ ಪರದಾಟ… ರಾಜ್ಯ ಸರ್ಕಾರದ ಮೋಜು – ಬಿವೈವಿ ಸಿಡಿಮಿಡಿ
ಸಮಾವೇಶದಿಂದಾಗಿ ಟ್ರಾಫಿಕ್ ಜಾಮನಿಂದ ಪ್ರಯಾಣಿಕರು ಪರದಾಡಿದರು. ಹೀಗಾಗಿ ವಿಜಯನಗರ ಎಸ್ಪಿ ಬಿ.ಎಲ್.ಶ್ರೀಹರಿಬಾಬು ಸೇರಿದಂತೆ ನಾಲ್ವರು ಎಸ್ಪಿ, 9 ಎಎಸ್ಪಿ, 20 ಡಿವೈಎಸ್ಪಿ, 57 ಸಿಪಿಐ, 144 ಪಿ.ಎಸ್.ಐ, 1968 ಹೆಡ್ ಕಾನ್ಸ್ ಟೇಬಲ್, 9,500 ಹೋಮ್ ಗಾರ್ಡ್ಸ್, 10 ಕೆಎಸ್‌ಆರ್‌ಪಿ ತುಕಡಿ, 08 ಡಿಎಆರ್, 14 ಎಎಸ್ ಟೀಂ ಹಾಗೂ 17 ಗಸ್ತು ವಾಹನ, ಚೀತಾ ಗಸ್ತು ವಾಹನ ಭದ್ರತೆಗೆ ನಿಯೋಜಿಸಲಾಗಿತ್ತು. ಇದನ್ನೂ ಓದಿ: 1,600 ಕೋಟಿ ಕಾಮಗಾರಿ ನಡೆದಿದ್ದರೆ ಬೆಂಗ್ಳೂರಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲ: ಆರ್. ಅಶೋಕ್