ನವದೆಹಲಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವಿಗೆ ರಾಹುಲ್ ಗಾಂಧಿಯವರ (Rahul Gandhi) ಭಾರತ್ ಜೋಡೋ ಯಾತ್ರೆಯು (Bharat Jodo Yatra) ಸಹಾಯ ಮಾಡಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (Mallikarjun Kharge) ತಿಳಿಸಿದರು.
ಹಿಮಾಚಲ ಪ್ರದೇಶದಲ್ಲಿ (Himachal Pradesh) ಕಾಂಗ್ರೆಸ್ (Congress) ಗೆಲುವು ಸಾಧಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಭಾರತ್ ಜೋಡೋ ಯಾತ್ರೆ ಬಗ್ಗೆ ಹಿಮಾಚಲ ಜನ ಮೆಚ್ಚುಗೆ ವ್ಯಕ್ತಪಡಿಸಿದರು. ನಾನು ಹೋದಾಗ ಕೂಡ ಉತ್ತಮ ಸ್ಪಂದನೆ ಸಿಕ್ಕಿತ್ತು. ಹೀಗಾಗಿ ಉತ್ತಮ ಬಹುಮತದಿಂದ ಪಕ್ಷಕ್ಕೆ ಗೆಲುವು ಬಂದಿದೆ ಎಂದು ಅಭಿಪ್ರಾಯಪಟ್ಟರು.
Advertisement
Advertisement
ಆ ರಾಜ್ಯಕ್ಕೆ ಸಂಬಂಧಿಸಿದ ಕಾರ್ಯಕ್ರಮದ ಪಟ್ಟಿ ಕೊಟ್ಟಿದ್ದೆವು. ಅದಕ್ಕೆ ನಮಗೆ ಅಲ್ಲಿನ ಜನ ಒಗ್ಗೂಡಿಸಿ ಗೆಲ್ಲಿಸಿದ್ದಾರೆ. ಇದರಲ್ಲಿ ಹೆಚ್ಚಿನ ಪಾತ್ರ ಪ್ರಿಯಾಂಕಾ ವಾದ್ರಾದ್ದು ಇದೆ. ಸಾಕಷ್ಟು ರ‍್ಯಾಲಿ, ಸಮಾವೇಶ ಮಾಡಿದ್ದಾರೆ. ಅವರಿಗೆ ವಿಶೇಷ ಅಭಿನಂದನೆ ಸಲ್ಲಿಸುತ್ತೇನೆ ಎಂದರು.
Advertisement
ಇದೇ ವೇಳೆ ಗುಜರಾತ್ ಚುನಾವಣೆಯಲ್ಲಿ (Gujarat Election) ಕಾಂಗ್ರೆಸ್ ಸೋಲಿನ ಬಗ್ಗೆ ಮಾತನಾಡಿದ ಅವರು, ಗುಜರಾತ್ ಸೋಲಲು ಕಾರಣ ಸಾಕಷ್ಟು ಇವೆ. ಪಕ್ಷ ಇಷ್ಟು ಕೆಳ ಮಟ್ಟಕ್ಕೆ ಬರಲು ಕ್ಯಾಂಪೇನ್ ಮಾಡಿಲ್ಲ. ಕಳೆದ ಬಾರಿ ಅತೀ ಹೆಚ್ಚು ಕ್ಷೇತ್ರಕ್ಕೆ ಭೇಟಿ ಕೊಟ್ಟಿದ್ದೆವು. ಆದರೆ ಹಲವು ಕಡೆ ಕಡಿಮೆ ಅಂತರದಲ್ಲಿ ಸೋತಿದ್ದೆವು. ಈ ಸಲ ಕೆಲವು ಪಕ್ಷ ಹೊಸದಾಗಿ ಬಂದು ನಮ್ಮ ಮತ ಕೆಡಿಸಿವೆ. ಅಸ್ತಿತ್ವದಲ್ಲಿ ಇಲ್ಲದ ಪಕ್ಷ ಬಂದು ಮತಗಳ ವಿಭಜನೆ ಮಾಡಿದೆ ಎಂದು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಗೆದ್ದಿದ್ಹೇಗೆ?
Advertisement
ಗುಜರಾತ್ ಸೋಲಿಗೆ ವೈಚಾರಿಕವಾಗಿ, ಸೈದ್ಧಾಂತಿಕವಾಗಿ ಕಾರಣವಾಗಿದೆ. ಒಂದು ವರ್ಷದಿಂದ ಮೋದಿ ಪ್ರಚಾರ ಮಾಡಿದ್ದಾರೆ. ಮಣ್ಣಿನ ಮಗ ಅಂತಾ ಹೇಳಿದ್ದು, ದಾಖಲೆಯ ರೋಡ್ ಶೋ, ಮತದಾನದ ದಿನ ನಡೆದುಕೊಂಡು ಬಂದು ಮತದಾನ ಮಾಡಿದ ಗಿಮಿಕ್‍ಗಳು ನಮ್ಮ ಸೋಲಿಗೆ ಕಾರಣವಾಗಿದೆ. ಆದರೆ ಅವರ ಪ್ರಚಾರದ ಹಕ್ಕು ಅವರು ಮಾಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಹಿಮಾಚಲದಲ್ಲಿ ಕಾಂಗ್ರೆಸ್‌ಗೆ ಅಧಿಕಾರ – ಛತ್ತೀಸ್‌ಗಢಕ್ಕೆ ಶಾಸಕರು ಶಿಫ್ಟ್