ಬೆಂಗಳೂರು: ಜಗದೀಶ್ ಶೆಟ್ಟರ್ (Jagadish Shettar) ಕಾಂಗ್ರೆಸ್‍ಗೆ (Congress) ಸೇರ್ಪಡೆಯಾಗಿರುವುದರಿಂದ ಉತ್ತರ ಕರ್ನಾಟಕದಲ್ಲೂ ಹೆಚ್ಚಿನ ಶಕ್ತಿ ಸಿಗುವ ವಿಶ್ವಾಸವಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ವಿಶ್ವಾಸ ವ್ಯಕ್ತಪಡಿಸಿದರು.
ಕೆಪಿಸಿಸಿ ಕಚೇರಿಯಲ್ಲಿ ಜಗದೀಶ್ ಶೆಟ್ಟರ್ ಅವರಿಗೆ ಹೂಗುಚ್ಛ ಹಾಗೂ ಪಕ್ಷದ ಬಾವುಟ ನೀಡಿ ಸ್ವಾಗತಿಸಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೆಟ್ಟರ್ ಅವರಷ್ಟೇ ಗೆಲ್ಲದೇ ಉತ್ತರ ಕರ್ನಾಟಕದಲ್ಲಿ ಬೇರೆ ಕ್ಷೇತ್ರಗಳಲ್ಲಿ ಗೆಲ್ಲಲು ಸಹಾಯ ಮಾಡುತ್ತಾರೆಂಬ ನಂಬಿಕೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಸ್ವಾಭಿಮಾನಕ್ಕೆ ಧಕ್ಕೆಯಾದವರೆಲ್ಲ ಕಾಂಗ್ರೆಸ್‌ಗೆ ಬರ್ತಿದ್ದಾರೆ: ಡಿಕೆಶಿ
ನಮ್ಮ ಪಕ್ಷದ ನೀತಿ ಏನಿದೆ ಅದೆಲ್ಲವೂ ಶೆಟ್ಟರ್‌ಗೆ ಗೊತ್ತಿದೆ. ಅವರು ಈವರೆಗೆ ಯಾವ ಐಡಿಯಾಲಜಿಯಲ್ಲಿ ಕೆಲಸ ಮಾಡುತ್ತಿದ್ದರು ಅನ್ನೋದು ನಿಮಗೆ ಗೊತ್ತಿದೆ. ಅನೇಕ ವರ್ಷಗಳ ಕಾಲ ಆ ಪಕ್ಷ ಕಟ್ಟಿ ಕೆಲಸ ಮಾಡಿ ಬೆಳೆಸಿದರು. ಅದೇ ರೀತಿ ಇಲ್ಲೂ ಕೆಲಸ ಮಾಡ್ತಾರೆ ಅನ್ನೊ ನಂಬಿಕೆಯಿದೆ ಎಂದು ಹೇಳಿದರು. ಇದನ್ನೂ ಓದಿ: ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿಕೊಂಡು ‘ಕೈ’ ಸೇರ್ಪಡೆ : ಶೆಟ್ಟರ್