– RSS – BJP ವಿರುದ್ದ ಎಐಸಿಸಿ ಅಧ್ಯಕ್ಷ ವಾಗ್ದಾಳಿ
ಚಿಕ್ಕಬಳ್ಳಾಪುರ: ರಾಮಮಂದಿರದ ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿ ಲೂಟಿ ನಡೆದಿದೆ ಎಂಬ ಸುದ್ದಿಗಳು ಬರುತ್ತಿವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆ ದೇವನಹಳ್ಳಿಯಲ್ಲಿ ನಡೆದ ಅಂಬೇಡ್ಕರ್ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರಾಮನ ದೇಣಿಗೆ ಕದ್ದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ, ಆರ್‌ಎಸ್‌ಎಸ್ (BJP – RSS) ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ರಾಮಮಂದಿರದ (Ram Mandir) ಹೆಸರಿನಲ್ಲಿ 20 ಸಾವಿರ ಕೋಟಿ ರೂಪಾಯಿ ಲೂಟಿ ನಡೆದಿದೆ ಎಂಬ ಸುದ್ದಿಗಳು ಬರುತ್ತಿವೆ. ಅಯೋಧ್ಯೆಯಲ್ಲಿ ನಡೆದಿರುವ ರೀತಿಯ ಘಟನೆಗಳು ಬದರಿನಾಥ, ಕೇದಾರನಾಥ ಹಾಗೂ ಅಮರನಾಥ ದೇವಾಲಯದಲ್ಲೂ ಮರುಕಳಿಸುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಮಮಂದಿರ ದೇಣಿಗೆ ಹಗರಣ – 5 ಕೋಟಿ ಮೌಲ್ಯ, 147 ಕೆಜಿ ತೂಕದ ಚಿನ್ನ ಲೇಪಿತ ʻರಾಮಚರಿತಮಾನಸʼ ಪುಸ್ತಕ ನಾಪತ್ತೆ
ಅಯೋಧ್ಯೆಯಲ್ಲಿ ಬಡವರು, ದಲಿತರು ಅಥವಾ ರೈತರು ಹಣ ಲೂಟಿ ಮಾಡಿಲ್ಲ. ಪ್ರಭಾವಿ ವರ್ಗದವರು ಹಾಗೂ ಆರ್‌ಎಸ್‌ಎಸ್, ಬಿಜೆಪಿ ಪರವಾಗಿರುವವರು ಹಣ ಲೂಟಿ ಮಾಡಿದ್ದಾರೆ. ಪ್ರತಿದಿನ ದೇವರ ಹೆಸರು ಜಪಿಸುವವರು, ಅದೇ ದೇವರ ಹೆಸರಿನಲ್ಲಿ ಲೂಟಿ ಮಾಡುತ್ತೀರಾ? ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಬೆಂಗಳೂರಿನ ಗೌರಿ ಕೈಹಿಡಿದ ಆಮಿರ್ ಖಾನ್ – ಸರಳ ಸಮಾರಂಭದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿ
ಧರ್ಮ ಹಾಗೂ ಶ್ರೀರಾಮನ ಹೆಸರನ್ನು ರಾಜಕೀಯ ಪ್ರಚಾರಕ್ಕೆ ಬಳಸಿಕೊಂಡು ಭ್ರಷ್ಟಾಚಾರ ನಡೆಸಲಾಗುತ್ತಿದೆ ಎಂದು ದೂರಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಬೇರೆ ರಾಜ್ಯದ ಅಧಿಕಾರಿಗಳಿಂದ ಎಸ್‌ಐಆರ್ ಮಾಡಿಸಲಿ: ಆರ್.ಅಶೋಕ್ ಆಗ್ರಹ
