ಕಲಬುರಗಿ: ಸಚಿವ ಸ್ಥಾನ ಹಂಚಿಕೆ ಮಾಡಿದವರೆ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನು ಸರಿಪಡಿಸಬೇಕು ಎಂದು ಸಂಸದ ಮಲ್ಲಿಕಾರ್ಜುನ ಖರ್ಗೆ ಹೇಳುವ ಮೂಲಕ ಪರೋಕ್ಷವಾಗಿ ‘ಕೈ’ ನಾಯಕರ ವಿರುದ್ಧ ಸಂಸದ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯ, ವೇಣುಗೋಪಾಲ್, ದಿನೇಶ್ ಗುಂಡುರಾವ್ ಸಚಿವ ಸ್ಥಾನ ಹಂಚಿದ್ದಾರೆ. ಅವರೇ ಪಕ್ಷದಲ್ಲಿ ಉಂಟಾಗಿರುವ ಅಸಮಾಧಾನವನ್ನ ಸರಿಪಡಿಸಬೇಕು. ಆದರೆ ನಾನು ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರುವುದಾಗಿ ಹೇಳಿದರು.
ಕಲಬುರಗಿ ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನಕ್ಕಾಗಿ ಪ್ರಯತ್ನ ಮಾಡಿದ್ದೆ. ಆದರೆ ಕೊನೆ ಘಳಿಗೆಯಲ್ಲಿ ವಿಫಲವಾಗಿದೆ. ಇದರ ಬಗ್ಗೆ ನನಗೂ ನೋವಾಗಿದೆ. ಒತ್ತಾಯದ ಮೇಲೆ ಶಾಸಕ ಡಾ. ಅಜಯ್ ಸಿಂಗ್ ಅವರಿಗೆ ದೆಹಲಿ ವಿಶೇಷ ಪ್ರತಿನಿಧಿ ಸ್ಥಾನ ನೀಡಿದ್ದಾರೆ. ಈ ಬಗ್ಗೆ ರಾಜ್ಯ ನಾಯಕರನ್ನ ಕೇಳಿದ್ದೆ. ಆದರೆ ನಾವು ಹೈಕಮಾಂಡ್‍ಗೆ ಕೇಳಿಯೇ ಸಂಪುಟ ವಿಸ್ತರಣೆ ಮಾಡಿದ್ದೇವೆ ಎಂದು ಹೇಳಿದ್ದಾರೆ. ಅದ್ದರಿಂದ ಹೈ ಕಮಾಂಡ್ ತೆಗೆದುಕೊಂಡ ನಿರ್ಣಯಕ್ಕೆ ಬದ್ಧರಾಗಿರಬೇಕು ಎಂದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv