ನರೇಂದ್ರ ಮೋದಿ ಸುಳ್ಳಿನ ಸರದಾರ – ಮಲ್ಲಿಕಾರ್ಜುನ ಖರ್ಗೆ ತೀವ್ರ ತರಾಟೆ

Public TV
2 Min Read
mallikarjun kharge

ಮುಂಬೈ: ಪ್ರಧಾನಿ ನರೇಂದ್ರ ಮೋದಿ (Narendra Modi) ʻಸುಳ್ಳಿನ ಸರದಾರʼ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಲೇವಡಿ ಮಾಡಿದರು.

ಮಹಾರಾಷ್ಟ್ರ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ರಾಹುಲ್‌ ಗಾಂಧಿ ಖಾಲಿ ಹಾಳೆಯಿರುವ ಸಂವಿಧಾನ ಪುಸ್ತಕ ಪ್ರತಿಯನ್ನು ಜನರಿಗೆ ಹಂಚಿದ್ದಾರೆ ಎಂದು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದರು. ಇದಕ್ಕೆ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದರು. ಇದನ್ನೂ ಓದಿ: ಹೈಕೋರ್ಟ್‌ ತೀರ್ಪನ್ನು ಪೊಲಿಟಿಕಲ್‌ ಜಡ್ಜ್‌ಮೆಂಟ್‌ ಎಂದಿದ್ದ ಸಚಿವರಿಗೆ ಸಂಕಷ್ಟ – ಜಮೀರ್‌ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ

narendra modi 1

ಮಹಾರಾಷ್ಟ್ರ (Maharashtra) ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ರಾಹುಲ್ ಗಾಂಧಿ ಸಕ್ರಿಯವಾಗಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಇತ್ತೀಚೆಗಿನ ಕಾರ್ಯಕ್ರಮವೊಂದರಲ್ಲಿ ಸಂವಿಧಾನದ ಪುಸ್ತಕದ ಜೊತೆ ಭಾಷಣ ಮುಂದುವರಿಸಿದ್ದಾರೆ. ಅವರ ಸಾರ್ವಜನಿಕ ಸಭೆಯೊಂದರಲ್ಲಿ ಸಂವಿಧಾನದ ಪ್ರತಿ ಎನ್ನಲಾದ ಕೆಂಪು ಬಣ್ಣದ ಪುಸ್ತಕವನ್ನು ಜನರಿಗೆ ವಿತರಿಸಲಾಗಿತ್ತು. ಆದರೆ, ಅದರಲ್ಲಿ ಖಾಲಿ ಹಾಳೆಗಳಿವೆ ಎಂದು ಬಿಜೆಪಿ ಆರೋಪಿ ಹಾಗೂ ಪ್ರಧಾನಿ ಟೀಕಿಸಿದ್ದಾರೆ. ಹೀಗಾಗಿ ಮಲ್ಲಿಕಾರ್ಜುನ ಖರ್ಗೆ ಇಂದು (ಭಾನುವಾರ) ಪ್ರಧಾನಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಭಾರತೀಯ ಜನತಾ ಪಾರ್ಟಿ ಅಲ್ಲಾ, ಭಾರತೀಯ ಜೂಟಾ ಪಾರ್ಟಿ: ಸಚಿವ ಖಂಡ್ರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗೆ ಮಹಾ ವಿಕಾಸ್ ಅಘಾಡಿ (MVA) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಿದ ಖರ್ಗೆ ಅವರು ಪ್ರಧಾನಿಯನ್ನು ʻಜುಟೋ ಕಾ ಸರ್ದಾರ್” (ಸುಳ್ಳಿನ ಸರದಾರ) ಎಂದರು. ಮೋದಿ ಈ ಕೆಂಪು ಸಂವಿಧಾನ ಪುಸ್ತಕವು ನಗರ ನಕ್ಸಲೈಟ್ ಪುಸ್ತಕ ಮತ್ತು ಮಾರ್ಕ್ಸ್‌ವಾದಿ ಸಾಹಿತ್ಯದ ಒಂದು ತುಣುಕು ಎಂದು ಹೇಳಿದ್ದರು. ಆದರೂ, 2017 ರಲ್ಲಿ, ಅವರು ಅದೇ ಪುಸ್ತಕವನ್ನು ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಕೊಟ್ಟಿದ್ದರು ಎಂದು ಹೇಳಿದರು. ಇದನ್ನೂ ಓದಿ: ಉಡುಪಿ| ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಆರೋಪಿ ಸಾವು

ಮಹಾರಾಷ್ಟ್ರದಲ್ಲಿ ಚುನಾವಣಾ ಭರವಸೆಗಳನ್ನು ಪಟ್ಟಿ ಮಾಡಿದ ಖರ್ಗೆ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ವಿರೋಧ ಪಕ್ಷದ ಮೈತ್ರಿ ಎಂವಿಎ ಚುನಾಯಿತರಾದರೆ ಮಹಾರಾಷ್ಟ್ರದಲ್ಲಿ ಜಾತಿ ಗಣತಿಯನ್ನು ಪರಿಚಯಿಸಲಾಗುವುದು. ನಾವು ಮಹಾರಾಷ್ಟ್ರದಲ್ಲಿ ಜಾತಿ ಗಣತಿಯನ್ನು ನಡೆಸುತ್ತೇವೆ ಮತ್ತು ತಮಿಳುನಾಡಿನಂತೆ ಪ್ರಸ್ತುತ 50 ಪ್ರತಿಶತಕ್ಕಿಂತ ಹೆಚ್ಚಿನ ಮೀಸಲಾತಿಯ ಮಿತಿಯನ್ನು ಹೆಚ್ಚಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಹೊಳೆ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಯೋಗೇಶ್ವರ್ ಗೆಲುವಿಗೆ ಪತ್ನಿಯಿಂದ ಹೋಮ

ಪ್ರಣಾಳಿಕೆಯು ರಾಜಸ್ಥಾನದಲ್ಲಿ ಹಿಂದಿನ ಅಶೋಕ್ ಗೆಹ್ಲೋಟ್ ಸರ್ಕಾರವು ಜಾರಿಗೊಳಿಸಿದಂತೆಯೇ 25 ಲಕ್ಷ ರೂಪಾಯಿಗಳ ಆರೋಗ್ಯ ವಿಮಾ ಯೋಜನೆಯನ್ನು ಒಳಗೊಂಡಿದೆ. ಜೊತೆಗೆ ನಾಗರಿಕರಿಗೆ ಉಚಿತ ಔಷಧ ನೀಡಲಾಗುವುದು. 3 ಲಕ್ಷದವರೆಗಿನ ಸಾಲ ಮನ್ನಾದಿಂದ ರೈತರಿಗೆ ಅನುಕೂಲವಾಗಲಿದ್ದು, ಸಕಾಲದಲ್ಲಿ ಸಾಲ ಪಾವತಿಸುವವರಿಗೆ ಹೆಚ್ಚುವರಿಯಾಗಿ 50 ಸಾವಿರ ರೂ. ಎಂವಿಎ ಪದವೀಧರ ಅಥವಾ ಡಿಪ್ಲೊಮಾ ವಿದ್ಯಾರ್ಹತೆ ಹೊಂದಿರುವ ನಿರುದ್ಯೋಗಿ ಯುವಕರಿಗೆ ತಿಂಗಳಿಗೆ ರೂ 4,000 ನೀಡುತ್ತದೆ. ಅಲ್ಲದೇ, ಮಹಿಳೆಯರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗುವುದು. ಹೆಣ್ಣು ಮಕ್ಕಳಿಗೆ 18 ವರ್ಷ ತುಂಬಿದ ನಂತರ ರೂ 1,00,000 ನೀಡಲಾಗುವುದು. ಎಂವಿಎ ತನ್ನ ಆಡಳಿತದ ಮೊದಲ 100 ದಿನಗಳಲ್ಲಿ ರಾಜ್ಯ ಸರ್ಕಾರದಲ್ಲಿ 2,50,000 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪ್ರಾರಂಭಿಸುವುದಾಗಿ ಭರವಸೆ ನೀಡಿದರು. ಇದನ್ನೂ ಓದಿ: ಹಿಂದೂಗಳ ಮೇಲೆ ದಾಳಿ – ಕೆನಡಾ ರಾಯಭಾರ ಕಚೇರಿ ಎದುರು ಹಿಂದೂ ಸಿಖ್ ಗ್ಲೋಬಲ್ ಫೋರಂ ಪ್ರತಿಭಟನೆ

Share This Article