ಉಡುಪಿ: ಉಡುಪಿಯ ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ವಿಳಂಬ ಹಿನ್ನೆಲೆಯಲ್ಲಿ ಸಾರ್ವಜನಿಕರು ಪ್ರತಿಭಟನೆ ನಡೆಸಿದ ಪರಿಣಾಮ ಮಲ್ಪೆ-ಮೊಳಕಾಲ್ಮೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್ ಆಯಿತು.
ರಾಷ್ಟ್ರೀಯ ಹೆದ್ದಾರಿ 169ಎ ತಡೆದು ಪ್ರತಿಭಟನೆ ನಡೆಸಲಾಯಿತು. ಇಂದ್ರಾಳಿ ರೈಲ್ವೆ ಸೇತುವೆ ಹೋರಾಟ ಸಮಿತಿಯು ನಡೆಸಿದ ರಸ್ತೆ ತಡೆಯಲ್ಲಿ ನೂರಾರು ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಭಾಗಿಯಾಗಿದ್ದರು.
Advertisement
Advertisement
ಎಂಟು ವರ್ಷಗಳ ಹಿಂದೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಆರಂಭವಾಯಿತು. ಕಾಮಗಾರಿ ವಿಳಂಬ ಹಿನ್ನೆಲೆ ಹೆದ್ದಾರಿ ಸಂಚಾರವನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಾಕಾರರ ಮನವೊಲಿಸಿ, ರಸ್ತೆ ಸಂಚಾರವನ್ನು ಪೊಲೀಸರು ಸುಗಮಗೊಳಿಸಿದರು.