ಕೋಲ್ಕತ್ತಾ: ಪಶ್ಚಿಮ ಬಂಗಾಳ (West Bengal) ಸಿಎಂ ಮಮತಾ ಬ್ಯಾನರ್ಜಿಯವರು (Mamata Banerjee) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಟೀಂ ಇಂಡಿಯಾದ ಪ್ರ್ಯಾಕ್ಟೀಸ್ ಜೆರ್ಸಿಯಲ್ಲಿ ಇರುವ ಕೇಸರಿ ಬಣ್ಣವನ್ನು ಕಟುವಾಗಿ ವಿರೋಧಿಸಿದ್ದಾರೆ.
ಪೊಸ್ತಾ ಬಝಾರ್‍ನಲ್ಲಿ ಜಗಧಾತ್ರಿ ಪೂಜಾದ ಉದ್ಘಾಟನೆ ವೇಳೆ ಮಾತನಾಡಿದ ಅವರು, ಟೀಂ ಇಂಡಿಯಾದ (Team India Jersy) ಅಭ್ಯಾಸ ಜೆರ್ಸಿಗಳಲ್ಲಿ ಕೇಸರಿ ಬಣ್ಣ ಅಲ್ಲದೇ ಮೆಟ್ರೋ ಸ್ಟೇಷನ್‍ಗಳ ಗೋಡೆಗಳಿಗೂ ಕೇಸರಿ ಬಣ್ಣವನ್ನು ಬಳಿಯಲಾಗುತ್ತಿದೆ. ಈ ಮೂಲಕ ಕೇಂದ್ರ ಸರ್ಕಾರವು ಹಲವು ಸಂಸ್ಥೆಗಳನ್ನು ಕೇಸರೀಕರಣಗೊಳಿಸುತ್ತಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.
Advertisement
Advertisement
ಈ ಹಿಂದೆ ಅವರು ನೀಲಿ ಬಣ್ಣದ ಜೆರ್ಸಿ ಧರಿಸುತ್ತಿದ್ದರು. ಆದರೆ ಇದೀಗ ಬಿಜೆಪಿಯವರು (BJP) ಇಡೀ ದೇಶಕ್ಕೆ ಕೇಸರಿ ಬಣ್ಣ ಬಳಿಯಲು ಪ್ರಯತ್ನಿಸುತ್ತಿದ್ದಾರೆ. ನಮ್ಮ ಭಾರತೀಯ ಆಟಗಾರರ ಮೇಲೆ ನಮಗೆ ಹೆಮ್ಮೆ, ಅಭಿಮಾನ ಹೊಂದಿದ್ದೇವೆ. ವಿಶ್ವಕಪ್ ನಲ್ಲಿ ಗೆಲ್ಲುತ್ತಾರೆಂದು ನಂಬುತ್ತೇನೆ. ಆದರೆ ನಮ್ಮ ಆಟಗಾರರು ಈಗ ಕೇಸರಿ ಬಣ್ಣದ ಜೆರ್ಸಿ ಹಾಕಿ ಆಡಬೇಕಿದೆ. ಇತ್ತ ಮೆಟ್ರೋ ಸ್ಟೇಷನ್‍ಗಳಿಗೂ ಕೇಸರಿ ಬಳಿಯಲಾಗಿದೆ. ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳುವ ಮೂಲಕ ಬ್ಯಾನರ್ಜಿ ಅಸಮಾಧಾನ ಹೊರಹಾಕಿದ್ದಾರೆ.
Advertisement
ಭಾರತ ದೇಶವು ಇಲ್ಲಿನ ಜನರಿಗೆ ಸೇರಿದ್ದಾಗಿದೆ ಹೊರತು ಕೇವಲ ಬಿಜೆಪಿಯವರಿಗೆ ಸೇರಿದ್ದಲ್ಲ. ಅಧಿಕಾರ ನಿಂತ ನೀರಲ್ಲ, ಬರುತ್ತದೆ ಹೋಗುತ್ತದೆ. ಆದರೆ ಇಂತಹದ್ದೆಲ್ಲಾ ಯಾವ ಕಾರಣಕ್ಕೂ ಫಲ ನೀಡುವುದಿಲ್ಲ ಎಂದು ದೀದಿ ಗುಡುಗಿದ್ದಾರೆ. ಇದನ್ನೂ ಓದಿ: ಸರಣಿ ಶ್ರೇಷ್ಠ ಪ್ರಶಸ್ತಿಗೆ 9 ಮಂದಿಯ ನಾಮನಿರ್ದೇಶನ – ಟೀಂ ಇಂಡಿಯಾದ ನಾಲ್ವರು ಆಯ್ಕೆ
Advertisement