-ಮೃತ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರ ಘೋಷಣೆ
ಕೋಲ್ಕತ್ತಾ: ಮುರ್ಷಿದಾಬಾದ್ (Murshidabad) ಹಿಂಸಾಚಾರವು ಪೂರ್ವ ಯೋಚಿತವಾಗಿದ್ದು, ಇದರಲ್ಲಿ ಬಿಜೆಪಿ ಹಾಗೂ ಬಿಎಸ್‌ಎಫ್‌ನ ಕೈವಾಡವಿದೆ ಎಂದು ಪಶ್ಚಿಮ ಬಂಗಾಳ (West Bengal) ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ (Mamata Banerjee) ಗಂಭೀರ ಆರೋಪಿಸಿದ್ದಾರೆ.
ಮುಸ್ಲಿಂ ಧಾರ್ಮಿಕ ಮುಖಂಡರೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, ಈ ಹಿಂಸಾಚಾರದಲ್ಲಿ ಬಾಂಗ್ಲಾದೇಶ (Bangladesh) ಭಾಗಿಯಾಗಿದೆ ಎಂಬ ಗೃಹ ಸಚಿವಾಲಯದ ಟ್ವೀಟ್ ಅನ್ನು ಗಮನಿಸಿದೆ. ಗಡಿಯನ್ನು ಕಾಪಾಡುವ ಜವಾಬ್ದಾರಿಯು ಬಿಎಸ್‌ಎಫ್ (BSF) ಮತ್ತು ಕೇಂದ್ರ ಸರ್ಕಾರದ್ದಾಗಿದೆ. ಇದು ರಾಜ್ಯ ಸರ್ಕಾರದ ಜವಾಬ್ದಾರಿಯಲ್ಲ ಎಂದು ದೂರಿದರು. ಇದನ್ನೂ ಓದಿ: ಕ್ಯಾಬಿನೆಟ್ ಸಭೆಯಲ್ಲಿ ಲಿಂಗಾಯತ ಸಮುದಾಯಕ್ಕೆ ಆಗೋ ಸಮಸ್ಯೆ ಬಗ್ಗೆ ಚರ್ಚೆ: ಎಂ.ಬಿ ಪಾಟೀಲ್
ಬಾಂಗ್ಲಾದೇಶದಿಂದ ಗಡಿ ನುಸುಳುವಿಕೆಗೆ ಅವಕಾಶ ನೀಡುವ ಮೂಲಕ ಬಿಎಸ್‌ಎಫ್, ಕೇಂದ್ರ ಸಂಸ್ಥೆಗಳು ಹಾಗೂ ಬಿಜೆಪಿಯ ಕೆಲವರು ಶಾಂತಿಯನ್ನು ಕದಡಲು ನೆರವು ನೀಡುತ್ತಿದ್ದಾರೆ. ಬಿಎಸ್‌ಎಫ್‌ನ ಕೆಲವರು ಈ ಘಟನೆಯಲ್ಲಿ ತೊಡಗಿಕೊಂಡಿರುವ ಬಗ್ಗೆ ಕೆಲವು ಮೂಲಗಳು ನನಗೆ ಮಾಹಿತಿ ನೀಡಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: Don 3: ಕಿಯಾರಾ ಬದಲು ರಣವೀರ್ ಸಿಂಗ್‌ಗೆ ನಾಯಕಿಯಾಗಲಿದ್ದಾರೆ ಶಾರ್ವರಿ
ವಕ್ಫ್ ತಿದ್ದುಪಡಿ ಕಾಯ್ದೆಯು ದೇಶವನ್ನು ವಿಭಜಿಸುತ್ತದೆ. ಹೀಗಾಗಿ ಇದನ್ನು ಜಾರಿಗೊಳಿಸದಂತೆ ನಾನು ಪ್ರಧಾನಿ ನರೇಂದ್ರ ಮೋದಿಯವರಲ್ಲಿ (Narendra Modi) ಮನವಿ ಮಾಡಿಕೊಳ್ಳುತ್ತಿದ್ದೇನೆ. ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಎಲ್ಲಾ ಕೇಂದ್ರ ಸಂಸ್ಥೆಗಳನ್ನು ನಿಯಂತ್ರಿಸುತ್ತಿದ್ದಾರೆ. ಅಮಿತ್ ಶಾ ಅವರು ತಮ್ಮ ಸ್ವಂತ ರಾಜಕೀಯ ಲಾಭಕ್ಕಾಗಿ ರಾಷ್ಟ್ರಕ್ಕೆ ಹಾನಿ ಮಾಡಿದ್ದಾರೆ. ಅವರನ್ನು ನಿಯಂತ್ರಿಸಿ, ನಿಗಾ ಇಡುವಂತೆ ಪ್ರಧಾನಿ ಅವರಿಗೆ ಒತ್ತಾಯಿಸಿದರು. ಇದನ್ನೂ ಓದಿ: ಮುಸ್ಲಿಮರು ಹಿಂದೂ ಮಂಡಳಿಗಳ ಭಾಗವಾಗಲು ಅವಕಾಶ ನೀಡುತ್ತೀರಾ – ಕೇಂದ್ರಕ್ಕೆ ಸುಪ್ರೀಂ ಪ್ರಶ್ನೆ
ಹಿಂಸಾಚಾರದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಿದರು. ಅಲ್ಲದೇ ಹಿಂಸಾಚಾರದಲ್ಲಿ ಬಿಎಸ್‌ಎಫ್‌ನ ಕೈವಾಡದ ಬಗ್ಗೆ ತನಿಖೆ ಆರಂಭಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.