ನವದೆಹಲಿ: ಏರ್‌ಸ್ಟ್ರೈಕ್ ನಡೆದ ಮೇಲೆ ಪ್ರಧಾನಿ ನರೇಂದ್ರ ಮೋದಿ ಅವರು ಸರ್ವಪಕ್ಷ ಸಭೆಯನ್ನು ಕರೆದಿಲ್ಲ. ಯಾವ ಪಕ್ಷಕ್ಕೂ ಮಾಹಿತಿ ನೀಡಿಲ್ಲ. ನಮಗೆ ಈ ಬಗ್ಗೆ ಸಂಪೂರ್ಣ ಮಾಹಿತಿ ನೀಡಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮಂಗಳವಾರದಂದು ಭಾರತೀಯ ವಾಯುಪಡೆ ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮದ್ ಉಗ್ರ ಸಂಘಟನೆಯ ಉಗ್ರರ ಕ್ಯಾಂಪ್ ಮೇಲೆ ದಾಳಿ ನಡೆಸಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ನಡೆಸಿ ಮಾಹಿತಿ ತಿಳಿಸಿಲ್ಲ. ಏರ್‌ಸ್ಟ್ರೈಕ್ ಬಗ್ಗೆ ನಾವು ಮಾಧ್ಯಮಗಳನ್ನು ನೋಡಿ ಮಾಹಿತಿ ಪಡೆದಿದ್ದೇವೆ. ಯಾವ ಪ್ರದೇಶದ ಮೇಲೆ ದಾಳಿ ನಡೆಸಲಾಗಿದೆ. ಎಷ್ಟು ಬಾಂಬ್‍ಗಳನ್ನು ಉಗ್ರರ ಮೇಲೆ ಹಾಕಲಾಗಿದೆ. ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿಗಳನ್ನು ಕೇಂದ್ರ ಸರ್ಕಾರ ನಮಗೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
Advertisement
Advertisement
ವಿದೇಶಿ ಮಾಧ್ಯಮಗಳಲ್ಲಿ ಏರ್‌ಸ್ಟ್ರೈಕ್ ನಲ್ಲಿ ಯಾರು ಮೃತಪಟ್ಟಿಲ್ಲ ಎಂದು ವರದಿ ಬರುತ್ತಿದೆ. ಇನ್ನೊಂದೆಡೆ ಕೆಲವು ಮಾಧ್ಯಮಗಳಲ್ಲಿ ಒಬ್ಬ ಮೃತ ಪಟ್ಟಿದ್ದಾನೆ ಎಂದು ಉಲ್ಲೇಖಿಸಲಾಗುತ್ತಿದೆ. ಇದರಲ್ಲಿ ಯಾವುದು ಸತ್ಯವೆಂದು ಕೇಂದ್ರ ಸರ್ಕಾರವೇ ತಿಳಿಸಬೇಕು. ನಮಗೆ ಈಗ ಏರ್‌ಸ್ಟ್ರೈಕ್ ಬಗ್ಗೆ ಮಾಹಿತಿ ಕೊಡಿ ಎಂದು ಮಮತಾ ಬ್ಯಾನರ್ಜಿ ಕೇಳಿಕೊಂಡಿದ್ದಾರೆ.
Advertisement
WB CM: After air strike, PM did not hold any all party meet. We want to know details of the operation. Where the bomb was dropped, how many people died. I was reading foreign media and they said that none died and some media houses said one died. We want to know the details. pic.twitter.com/jRSvcpbCTH
— ANI (@ANI) February 28, 2019
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv