– ಆಯೋಗ ಮೋದಿಗೆ ಶರಣಾಗಿದೆ ಅಂದ್ರು ರಾಗಾ
ನವದೆಹಲಿ: ಭಾನುವಾರ ಲೋಕಸಭಾ ಚುನಾವಣೋತ್ತರ ಸಮೀಕ್ಷೆಗಳು ಬಹಿರಂಗಗೊಂಡಿದೆ. 10ರಲ್ಲಿ 9 ಸಮೀಕ್ಷೆಗಳು ಕೇಂದ್ರದಲ್ಲಿ ಮತ್ತೊಮ್ಮೆ ಎನ್‍ಡಿಎ ಸರ್ಕಾರ ರಚನೆ ಮಾಡಲಿದೆ ಎಂದು ಸ್ಪಷ್ಟವಾಗಿ ಹೇಳಿವೆ. ಈ ಕುರಿತು ಪ್ರತಿಕ್ರಿಯಿಸಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ, ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲ್ಲ ಎಂದು ಹೇಳಿದ್ದಾರೆ.
Advertisement
ದೆಹಲಿಯಲ್ಲಿರುವ ಮಾಧ್ಯಮಗಳು ವಿಶ್ವಾಸರ್ಹತೆಯನ್ನು ಕಳೆದುಕೊಳ್ಳುತ್ತಿವೆ. ಎಕ್ಸಿಟ್ ಪೋಲ್ ಹೆಸರಿನಲ್ಲಿ ಸುಳ್ಳನ್ನು ಪ್ರಚಾರ ಮಾಡುತ್ತಿದ್ದಾರೆ. ಹಾಗಾಗಿ ಜನಮತಕ್ಕಾಗಿ ನಾವು ಕಾಯುತ್ತೇವೆ. ಪ್ರಧಾನಿ ಮೋದಿಜಿ ಏಳನೇ ಹಂತದ ಚುನಾವಣೆಗೂ ಮುನ್ನವೇ ಎನ್‍ಡಿಎ ಒಕ್ಕೂಟ 300ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತೇವೆ ಎಂದು ಹೇಳುತ್ತಾರೆ. ಪೋಲ್ ಸರ್ವೆಗಳ ಅಂಕಿಅಂಶಗಳು ಮೋದಿ ಹೇಳಿಕೆಯೊಂದಿಗೆ ಹೋಲಿಕೆಯಾಗುತ್ತಿವೆ. ಇವಿಎಂನಲ್ಲಿ ಮತ್ತೆ ಗೊಂದಲ ಕಾಣುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.
Advertisement
I don’t trust Exit Poll gossip. The game plan is to manipulate or replace thousands of EVMs through this gossip. I appeal to all Opposition parties to be united, strong and bold. We will fight this battle together
— Mamata Banerjee (@MamataOfficial) May 19, 2019
Advertisement
ಟ್ವೀಟ್ ಮೂಲಕ ಸಹ ಅಸಮಾಧಾನ ಹೊರ ಹಾಕಿರುವ ಮಮತಾ ಬ್ಯಾನರ್ಜಿ, ಎಕ್ಸಿಟ್ ಪೋಲ್ ಎಂಬ ಗಾಸಿಪ್ ನಂಬಲಾರೆ. ಸಾವಿರಾರು ಇವಿಎಂಗಳು ಬದಲಾವಣೆ ಮಾಡಿರುವ ಸಾಧ್ಯತೆಗಳಿವೆ. ಎಲ್ಲ ವಿರೋಧ ಪಕ್ಷಗಳು ಒಂದಾಗಿ ಈ ಅನ್ಯಾಯದ ವಿರುದ್ಧ ಹೋರಾಟದಲ್ಲಿ ಭಾಗಿಯಾಗಲು ಮನವಿ ಮಾಡಿಕೊಳ್ಳುತ್ತೇನೆ ಎಂದು ಬರೆದುಕೊಂಡಿದ್ದಾರೆ.
Advertisement
If your exit poll doesn’t have a ???? flying around the studio you’ve already lost the battle for the viewers attention.
— Omar Abdullah (@OmarAbdullah) May 19, 2019
ಚುನಾವಣೆ ಸಂದರ್ಭದಲ್ಲಿ ಎಲೆಕ್ಟೋಲ್ ಬಾಂಡ್ ಮತ್ತು ಇವಿಎಂಗಳನ್ನು ಬದಲಾವಣೆ ಮಾಡಲಾಗಿದೆ. ಚುನಾವಣಾ ಆಯೋಗ ನಮೋ ಟಿವಿ, ಮೋದಿ ಸೇನೆ ಮತ್ತು ಕೇದಾರನಾಥದಲ್ಲಿಯ ಡ್ರಾಮಾ, ಮೋದಿ ಹಾಗು ಗ್ಯಾಂಗ್ ಮುಂದೆ ಶರಣಾಗಿರೋದನ್ನು ಎಲ್ಲ ಭಾರತೀಯರು ನೋಡಿದ್ದಾರೆ. ಚುನಾವಣಾ ಆಯೋಗ ಮೋದಿ ಗ್ಯಾಂಗ್ ಮುಂದೆ ಗೌರವಾನ್ವಿತವಾಗಿ ಭಯಗೊಂಡಿದೆ ಎಂದು ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕಿಡಿಕಾರಿದ್ದಾರೆ.
From Electoral Bonds & EVMs to manipulating the election schedule, NaMo TV, “Modi’s Army” & now the drama in Kedarnath; the Election Commission’s capitulation before Mr Modi & his gang is obvious to all Indians.
The EC used to be feared & respected. Not anymore.
— Rahul Gandhi (@RahulGandhi) May 19, 2019
ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಉಮರ್ ಅಬ್ದುಲ್ಲಾ, ಯಾವುದೇ ಎಕ್ಸಿಟ್ ಪೋಲ್ ಗಳು ಸುಳ್ಳು ಹೇಳುವುದಿಲ್ಲ. ಟಿವಿ ಬಂದ್ ಮಾಡಿ, ಸೋಶಿಯಲ್ ಮೀಡಿಯಾದಿಂದ ದೂರ ಉಳಿಯುವ ಸಮಯ ಇದಾಗಿದೆ. ಮೇ 23ರ ಫಲಿತಾಂಶ ಇಡೀ ಜಗತ್ತೇ ನೋಡಲಿದೆ ಎಂದು ಟ್ವೀಟ್ ಮಾಡಿದ್ದಾರೆ.