ಕೋಲ್ಕತ್ತಾ: ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೆಲಿಕಾಪ್ಟರ್ ಲ್ಯಾಂಡಿಗ್‍ಗೆ ಮಮತಾ ಬ್ಯಾನರ್ಜಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮತಿ ನಿರಾಕರಿಸಿದೆ.
ಉತ್ತರ ಬಂಗಾಳದ ಬಲೂರ್ಘಾಟ್‍ನಲ್ಲಿ ಇಂದು ನಡೆಯುತ್ತಿದ್ದ ರ‍್ಯಾಲಿಯಲ್ಲಿ ಭಾಗವಹಿಸಲು ಯೋಗಿ ಆದಿತ್ಯನಾಥ್ ಅವರು ಹೆಲಿಕಾಪ್ಟರ್ ನಲ್ಲಿ ತೆರಳಿದ್ದರು. ಆದರೆ ಯಾವುದೇ ನಿರ್ದಿಷ್ಟ ಕಾರಣ ತಿಳಿಸದೇ ಹೆಲಿಕಾಪ್ಟರ್ ಲ್ಯಾಂಡಿಗ್ ಅನುಮತಿಯನ್ನು ನಿರಾಕರಿಸಲಾಗಿದೆ ಎಂದು ಯೋಗಿ ಆದಿತ್ಯನಾಥ್ ಅವರ ಅಧಿಕಾರಿ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಇದನ್ನು ಓದಿ: ಬಿಜೆಪಿಯಿಂದ ಸಿಬಿಐ ದುರ್ಬಳಕೆ, ಪೊಲೀಸ್ ಅಧಿಕಾರಿ ಪರ ಮಮತಾ ಬ್ಯಾನರ್ಜಿ ಬ್ಯಾಟಿಂಗ್
Advertisement
Uttar Pradesh Chief Minister Office: The permission for the CM Yogi Adityanath's rally in West Bengal today has been declined by the West Bengal government without any prior notice. (File pic) pic.twitter.com/FQmTbsG1fV
— ANI UP/Uttarakhand (@ANINewsUP) February 3, 2019
Advertisement
ಪಶ್ಚಿಮ ಬಂಗಾಳ ಸರ್ಕಾರದ ಈ ನೀತಿಯು ಯೋಗಿ ಆದಿತ್ಯನಾಥ್ ಅವರಿಗೆ ಇರುವ ಜನಪ್ರಿಯತೆಯನ್ನು ತೋರಿಸುತ್ತದೆ ಎಂದು ಸಿಎಂ ಆತಿತ್ಯನಾಥ್ ಅವರ ಮಾಹಿತಿ ಸಲಹೆಗಾರ ಮೃತುಂಜಯ್ ಕುಮಾರ್ ಹೇಳಿದ್ದಾರೆ.
Advertisement
ಈ ಮೂಲಕ ಪಶ್ಚಿಮ ಬಂಗಾಳದ ಸರ್ಕಾರವು ಬಿಜೆಪಿಯ ಇಬ್ಬರು ನಾಯಕರ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ನಿರಾಕರಿಸಿದೆ. ಈ ಹಿಂದೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರ ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೂ ಅನುಮತಿ ನೀಡಿರಲಿಲ್ಲ.
Advertisement
ನಾವು ಹೆಲಿಕಾಪ್ಟರ್ ಲ್ಯಾಂಡಿಂಗ್‍ಗೆ ಅನುಮತಿ ಪಡೆದಿದ್ದರೂ ತಡೆ ಹಿಡಿಯಲಾಗಿದೆ. ಪಶ್ಚಿಮ ಬಂಗಾಳ ಸರ್ಕಾರದ ನೀತಿಯನ್ನು ವಿರೋಧಿಸಿ ನಮ್ಮ ಕಾರ್ಯಕರ್ತರು ಸಿಎಂ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ ಎಂದು ಬಂಗಾಳದ ಬಿಜೆಪಿ ಮುಖ್ಯಸ್ಥ ದಿಲಿಪ್ ಘೋಷ್ ತಿಳಿಸಿದ್ದಾರೆ.
West Bengal: Visuals from Balurghat in South Dinajpur district. UP CM Yogi Adityanath will address a public rally though mobile phone, shortly. pic.twitter.com/t6vQNTZy8C
— ANI (@ANI) February 3, 2019
ಈ ಎಲ್ಲ ಬೆಳವಣಿಗೆಯಿಂದ ಯೋಗಿ ಆದಿತ್ಯನಾಥ್ ಅವರ ಹೆಲಿಕಾಪ್ಟರ್ ರಾಯ್‍ಗಂಜ್ ಬಿಎಸ್‍ಎಫ್ ಕ್ಯಾಂಪ್‍ನಲ್ಲಿ ಲ್ಯಾಂಡ್ ಆಗಲಿದೆ. ಅಲ್ಲಿಂದ ರ‍್ಯಾಲಿ ನಡೆಯಲಿರುವ ಬಲೂರ್ಘಾಟ್‍ಗೆ ರಸ್ತೆ ಮಾರ್ಗವಾಗಿ ಯೋಗಿ ಆದಿತ್ಯನಾಥ್ ತೆರಳಲಿದ್ದಾರೆ ಎನ್ನಲಾಗಿದೆ. ಮತ್ತೊಂದು ಮೂಲದ ಪ್ರಕಾರ ಯೋಗಿ ಆದಿತ್ಯನಾಥ್ ಅವರು, ಮೊಬೈಲ್ ಕರೆ ಮೂಲಕ ಜನರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ವರದಿಯಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv