ಕೋಲ್ಕತ್ತಾ: ಕೋವಿಡ್ 3ನೇ ಅಲೆ, ಓಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದರೆ ಪಶ್ಚಿಮ ಬಂಗಾಳದಲ್ಲಿ ಶಾಲಾ-ಕಾಲೇಜುಗಳನ್ನು ಬಂದ್ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಿಳಿಸಿದರು.
ಈ ಬಗ್ಗೆ ಸಭೆಯಲ್ಲಿ ಮಾತನಾಡಿದ ಅವರು, ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ ಅಗತ್ಯವಿದ್ದರೆ ಶಾಲಾ-ಕಾಲೇಜುಗಳನ್ನು ಬಂದ್ ಮಾಡುವಂತೆ ಮತ್ತು ಸರ್ಕಾರಿ ಕಚೇರಿಗಳು ಶೇ.50ರಷ್ಟು ಹಾಜರಾತಿಯೊಂದಿಗೆ ಕೆಲಸ ನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.
Advertisement
Advertisement
ಕೋವಿಡ್-19 ಪ್ರಕರಣಗಳು ಹೆಚ್ಚುವುದರ ಜೊತೆಗೆ ಓಮಿಕ್ರಾನ್ ಸೋಂಕುಗಳು ಕಾಣಿಸಿಕೊಳ್ಳುತ್ತಿವೆ. ಆದ್ದರಿಂದ, ಪರಿಸ್ಥಿತಿಯ ಪರಿಶೀಲನೆಯ ಅಗತ್ಯವಿದೆ. ಸಂಖ್ಯೆಗಳು ಹೆಚ್ಚುತ್ತಲೇ ಇದ್ದರೆ, ಶಾಲೆಗಳು ಮತ್ತು ಕಾಲೇಜುಗಳನ್ನು ಮುಚ್ಚಬೇಕು ಎಂದರು. ಇದನ್ನೂ ಓದಿ: ಇಂದು 566 ಪ್ರಕರಣ – ಬೆಂಗಳೂರಿನಲ್ಲಿ 400 ಕೇಸ್, 4 ಸಾವು
Advertisement
Advertisement
ಅಂತಾರಾಷ್ಟ್ರೀಯ ವಿಮಾನಯಾನದ ಬಗ್ಗೆ ಮತಾನಾಡಿ, ಅಂತಾರಾಷ್ಟ್ರೀಯ ವಿಮಾನ ಮತ್ತು ಸ್ಥಳೀಯ ರೈಲು ಸೇವೆಗಳ ಬಗ್ಗೆಯೂ ನಿರ್ಧಾರ ತೆಗೆದುಕೊಳ್ಳಲಾಗುವುದು. ಅಂತಾರಾಷ್ಟ್ರೀಯ ವಿಮಾನಗಳಲ್ಲಿ ರಾಜ್ಯಕ್ಕೆ ಆಗಮಿಸುವವರಲ್ಲಿ ಕೆಲವರಲ್ಲಿ ಓಮಿಕ್ರಾನ್ ಪ್ರಕರಣಗಳು ಪತ್ತೆಯಾಗುತ್ತಿವೆ. ಇದರಿಂದಾಗಿ ಅಂತಾರಾಷ್ಟ್ರೀಯ ವಿಮಾನಗಳ ಕಾರ್ಯಾಚರಣೆಯ ಮೌಲ್ಯಮಾಪನ ಮಾಡಿ ಕಠಿಣ ನಿರ್ಧಾರ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ 6 ಭಯೋತ್ಪಾದಕರ ಹತ್ಯೆ
ಕೊರೊನಾ ತಡೆಗೆ ವಾರ್ಡ್ ಹಾಗೂ ಮಹಾನಗರದಲ್ಲಿ ಕಂಟೈನ್‍ಮೆಂಟ್ ವಲಯಗಳನ್ನು ಮರುಪರಿಚಯಿಸಲು ಸಲಹೆಯನ್ನು ನೀಡಿದ್ದಾರೆ. ಜೊತೆಗೆ ಅಗತ್ಯವಿದ್ದರೆ ಕಚೇರಿಗಳು ಶೇ.50ರಷ್ಟು ನೌಕರರ ಹಾಜರಾತಿಯೊಂದಿಗೆ ಕಾರ್ಯನಿರ್ವಹಿಸಲು ತಿಳಿಸಿದರು.