ಕೋಲ್ಕತ್ತಾ: ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ದೆಹಲಿಗೆ ತೆರಳುವುದಕ್ಕೂ ಮುನ್ನ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕೋಲ್ಕತ್ತಾ ವಿಮಾನ ನಿಲ್ದಾಣದಲ್ಲಿ ಮೋದಿಯವರ ಪತ್ನಿ ಜಶೋದಾಬೆನ್ ಅವರನ್ನು ಭೇಟಿ ಮಾಡಿ ಅಚ್ಚರಿ ಮೂಡಿಸಿದ್ದಾರೆ.
ಇಂದು ಮಮತಾ ಬ್ಯಾನರ್ಜಿಯವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲು ದೆಹಲಿಗೆ ಆಗಮಿಸಿದ್ದು, ಸಂಜೆ ಮೋದಿ ಅವರನ್ನು ಭೇಟಿ ಮಾಡಲಿದ್ದಾರೆ. ನಿನ್ನೆ (ಮಂಗಳವಾರ) ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ಹೊರಡುವಾಗ ಅಲ್ಲಿಯೇ ಜಶೋದಾ ಬೆನ್ ಅವರನ್ನು ಭೇಟಿಯಾಗಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡು ಕುಶಲೋಪರಿ ವಿಚಾರಿಸಿದ್ದಾರೆ. ಈ ವೇಳೆ ಮಮತಾ ಬ್ಯಾನರ್ಜಿ ಜಶೋದಾಬೆನ್ ಅವರಿಗೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ವರದಿಯಾಗಿದೆ.
Advertisement
Advertisement
ನಿವೃತ್ತ ಶಿಕ್ಷಕಿ ಜಶೋದಾಬೆನ್ ಅವರು ನೆರೆಯ ಜಾರ್ಖಂಡ್‍ನ ಧನ್ಬಾದ್‍ಗೆ ಭೇಟಿ ನೀಡಿ ಕೋಲ್ಕತಾದಿಂದ ಹೊರಟಿದ್ದರು ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ಆಪ್ತ ಮೂಲಕಗಳು ತಿಳಿಸಿವೆ. ಧನ್ಬಾದ್‍ನಿಂದ 68 ಕಿ.ಮೀ. ದೂರದಲ್ಲಿರುವ ಬಂಗಾಳದ ಅಸನ್ಸೋಲ್‍ನಲ್ಲಿರುವ ಕಲ್ಯಾಣೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ್ದರು ಎಂದು ತಿಳಿದುಬಂದಿದೆ.
Advertisement
ಇದೇ ಅವಕಾಶವನ್ನು ಬಳಸಿಕೊಂಡು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಜಶೋದಾಬೆನ್ ಅವರನ್ನು ಭೇಟಿ ಮಾಡಿ ಶುಭಾಶಯ ವಿನಿಮಯ ಮಾಡಿಕೊಂಡಿದ್ದಾರೆ. ಈ ವೇಳೆ ಸೀರೆಯನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement
ಮಮತಾ ಬ್ಯಾನರ್ಜಿಯವರು ಇಂದು ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಲಿದ್ದಾರೆ. ಪಶ್ಚಿಮ ಬಂಗಾಳಕ್ಕೆ ಧನಸಹಾಯ, ಸೇರಿದಂತೆ ವಿವಿಧ ವಿಷಯಗಳ ಕುರಿತು ಚರ್ಚಿಸಲಿದ್ದಾರೆ ಎಂದು ತಿಳಿದು ಬಂದಿದೆ.
ಮಂಗಳವಾರ ಪ್ರಧಾನಿ ನರೇಂದ್ರ ಮೋದಿಯವರ 69ನೇ ಹುಟ್ಟುಹಬ್ಬವಾದ್ದರಿಂದ ಬಂಗಾಳಿ ಭಾಷೆಯಲ್ಲಿ ಟ್ವೀಟ್ ಮಾಡಿ ಮಮತಾ ಬ್ಯಾನರ್ಜಿ ಶುಭ ಹಾರೈಸಿದ್ದರು. ಪ್ರಧಾನಿ ‘ನರೇಂದ್ರ ಮೋದಿ ಜೀ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು’ ಎಂದು ಯಾವಾಗಲೂ ಮೋದಿಯರವನ್ನು ಟೀಕಿಸುತ್ತಿದ್ದ ಮಮತಾ ನಿನ್ನೆ ಟ್ವೀಟ್ ಮಾಡಿ ಶುಭ ಕೋರಿದ್ದರು.